ಕಾಂಗ್ರೆಸ್ ಪಾಕಿಸ್ತಾನದ ಅನುಯಾಯಿ - ಮೋದಿ
ಗುಜರಾತ್, ಮೇ ೨: ಕಾಂಗ್ರೆಸ್ ಪಕ್ಷವು ಪಾಕಿಸ್ತಾನದ ಅನುಯಾಯಿ ಎಂದು ಕರೆದಿರುವ ಪ್ರಧಾನಿ ನರೇಂದ್ರ ಮೋದಿ, ನೆರೆಯ ದೇಶವು ಭಾರತದ ಅತ್ಯಂತ ಹಳೆಯ ಪಕ್ಷದ (ಕಾಂಗ್ರೆಸ್) ಯುವರಾಜನನ್ನು (ರಾಹುಲ್ ಗಾಂಧಿ) ಪ್ರಧಾನಿ ಮಾಡಲು ಇಚ್ಛಿಸುತ್ತಿದೆ ಎಂದು ಆರೋಪಿಸಿದ್ದಾರೆ. ಪಾಕಿಸ್ತಾನದ ಇಮ್ರಾನ್ ಖಾನ್ ಸರ್ಕಾರದಲ್ಲಿ ಸಚಿವರಾಗಿದ್ದ ಚೌಧರಿ ಫವಾಡ್ ಹುಸೇನ್, ರಾಹುಲ್ ಗಾಂಧಿ ಇರುವ ವೀಡಿಯೋವನ್ನು ನಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಹಂಚಿಕೊAಡು ಹಾಡಿ ಹೊಗಳಿದ್ದಾರೆ ಎಂಬ ವರದಿಗಳ ನಡುವೆ ಮೋದಿ ಈ ಹೇಳಿಕೆ ನೀಡಿದ್ದಾರೆ. ಇಲ್ಲಿ ಕಾಂಗ್ರೆಸ್ ಸಾಯುತ್ತಿರುವುದಕ್ಕೆ ಅಲ್ಲಿ ಪಾಕಿಸ್ತಾನ ಅಳುತ್ತಿದೆ. ಪಾಕಿಸ್ತಾನದ ನಾಯಕರು ಕಾಂಗ್ರೆಸ್ಗಾಗಿ ಪ್ರಾರ್ಥಿಸುತ್ತಿದ್ದಾರೆ. ಪಾಕಿಸ್ತಾನವು ಯುವರಾಜನನ್ನು (ರಾಹುಲ್ ಗಾಂಧಿಯನ್ನು ಉದ್ದೇಶಿಸಿ) ಮುಂದಿನ ಪ್ರಧಾನಿಯಾಗಿ ನೋಡಲು ಇಚ್ಛಿಸುತ್ತಿದೆ. ಇದು ಅಚ್ಚರಿಯೇನಲ್ಲ. ಈಗಾಗಲೇ ನಾವು ಕಾಂಗ್ರೆಸ್, ಪಾಕಿಸ್ತಾನದ ಅನುಯಾಯಿ ಯಾಗಿರುವುದನ್ನು ಕಂಡಿದ್ದೇವೆ. ಪಾಕಿಸ್ತಾನ ಮತ್ತು ಕಾಂಗ್ರೆಸ್ ನಡುವಿನ ಒಡಂಬಡಿಕೆ ಬಯಲಾಗಿದೆ. ಶತ್ರುಗಳು ದೇಶದಲ್ಲಿ ದುರ್ಬಲ ಸರ್ಕಾರ ಬೇಕೆಂದು ಬಯಸುತ್ತಿದ್ದಾರೆ ಎಂಬುದನ್ನು ಇದು ಸ್ಪಷ್ಟಪಡಿಸುತ್ತದೆ ಎಂದು ಮೋದಿ ಹೇಳಿದ್ದಾರೆ.
ಮೋದಿ ವಿರುದ್ಧ ಖರ್ಗೆ ವಾಗ್ದಾಳಿ
ನವದೆಹಲಿ, ಮೇ ೨: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಚುನಾವಣೆ ಮುಗಿದ ನಂತರ, ‘ಸುಳ್ಳು ಮತ್ತು ಕೋಮುವಾದಿ ಭಾಷಣ’ ಮಾಡುತ್ತಿದ್ದ ಏಕೈಕ ಪ್ರಧಾನಿ ಎಂದು ಜನ ನಿಮ್ಮನ್ನು ನೆನಪಿಸಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ. ‘ದ್ವೇಷ ಭಾಷಣ’ಗಳನ್ನು ಮಾಡುವ ಬದಲು ಕಳೆದ ಹತ್ತು ವರ್ಷಗಳಲ್ಲಿ ನಿಮ್ಮ ಸರ್ಕಾರದ ಸಾಧನೆಗಳ ಆಧಾರದ ಮೇಲೆ ಮತ ಕೇಳುವಂತೆ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಯನ್ನು ಒತ್ತಾಯಿಸಿದರು. ಎನ್ಡಿಎ ಅಭ್ಯರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಬರೆದ ಪತ್ರ ಉಲ್ಲೇಖಿಸಿ ಮರು ಪತ್ರ ಬರೆದಿರುವ ಖರ್ಗೆ, ನಿಮ್ಮ ಪತ್ರದಲ್ಲಿ ಸಾಕಷ್ಟು ಹತಾಶೆ ಮತ್ತು ಚಿಂತೆ ಎದ್ದು ಕಾಣುತ್ತಿದೆ. ನಿಮ್ಮ ಪತ್ರದಲ್ಲಿನ ಭಾಷೆ ಪ್ರಧಾನಿ ಕಚೇರಿಗೆ ಹೊಂದಿಕೆಯಾಗುತ್ತಿಲ್ಲ. ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಏನೇ ಸುಳ್ಳು ಹೇಳಿದರೂ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಏನು ಬರೆದಿದೆ ಮತ್ತು ನಾವು ಏನು ಭರವಸೆ ನೀಡಿದ್ದೇವೆ ಎಂಬುದನ್ನು ಸ್ವತಃ ಮತದಾರರು ಓದಿ ಅರ್ಥಮಾಡಿಕೊಳ್ಳುವಷ್ಟು ಬುದ್ಧಿವಂತರಾಗಿದ್ದಾರೆ. ನಮ್ಮ ಖಾತರಿಗಳು ತುಂಬಾ ಸರಳ ಮತ್ತು ಸ್ಪಷ್ಟವಾಗಿದೆ. ನಾವು ಅವರಿಗೆ ಅದನ್ನು ವಿವರಿಸಬೇಕಾಗಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಮೋದಿ ಕ್ಷಮೆಯಾಚಿಸಬೇಕು-ರಾಹುಲ್ ಗಾಂಧಿ
ಶಿವಮೊಗ್ಗ, ಮೇ ೨: ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಹಲವು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದು, ಅವರ ಪರ ಮತಯಾಚಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ. ಶಿವಮೊಗ್ಗದಲ್ಲಿ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು ಪ್ರಜ್ವಲ್ ಪರ ಪ್ರಧಾನಿ ಮತಯಾಚನೆ ನಡೆಸಿದ್ದು, ದೇಶದ ಮಹಿಳೆಯರಲ್ಲಿ ಕ್ಷಮೆಯಾಚಿಸಬೇಕು ಎಂದು ಹೇಳಿದ್ದಾರೆ. ಇದು ಕೇವಲ ಲೈಂಗಿಕ ಹಗರಣವಲ್ಲ ಬದಲಾಗಿ ಸಾಮೂಹಿಕ ಅತ್ಯಾಚಾರ ಪ್ರಕರಣವಾಗಿದೆ. ಹಾಸನದ ಎನ್ಡಿಎ ಅಭ್ಯರ್ಥಿ ಪಜ್ವಲ್ ರೇವಣ್ಣ ೪೦೦ ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ ವೀಡಿಯೋ ಮಾಡಿದ್ದಾನೆ. ಸಾಮೂಹಿಕ ಅತ್ಯಾಚಾರಿಯನ್ನು ಬೆಂಬಲಿಸಿ ಪ್ರಧಾನಿ ಮೋದಿ ಪ್ರಚಾರ ಮಾಡಿದರು. ಈ ಅತ್ಯಾಚಾರಿಗೆ ಮತ ನೀಡಿದರೆ ಅದು ನನಗೂ ನೆರವಾಗುತ್ತದೆ ಎಂದು ರಾಜ್ಯದ ಜನತೆಯ ಮುಂದೆ ಹೇಳಿದರು. ಪ್ರಧಾನಿ ದೇಶದ ತಾಯಂದಿರು, ಸಹೋದರಿಯರಲ್ಲಿ ಕ್ಷಮೆಯಾಚಿಸಬೇಕು ಎಂದು ರಾಹುಲ್ ಹೇಳಿದ್ದಾರೆ.
‘ಪ್ರಜ್ವಲ್ಗೆ ಕೇಂದ್ರದಿAದ ರಾಜತಾಂತ್ರಿಕ ಪಾಸ್ಪೋರ್ಟ್’
ಕಲಬುರಗಿ, ಮೇ ೨: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕೇಂದ್ರ ಸರ್ಕಾರ ರಾಜತಾಂತ್ರಿಕ (ಡಿಪ್ಲೊಮ್ಯಾಟಿಕ್) ಪಾಸ್ಪೋರ್ಟ್ ಕೊಟ್ಟಿದ್ದರಿಂದಾಗಿ ರಾತ್ರೋರಾತ್ರಿ ದೇಶ ಬಿಟ್ಟು ಹೋಗಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜ್ವಲ್ ಅವರು ಹೊರದೇಶಕ್ಕೆ ಹೋದ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ. ದೂರು ಕೊಡುವುದು ಗಮನಕ್ಕೆ ಬರುತ್ತಿದ್ದಂತೆ ದೇಶ ಬಿಟ್ಟು ಹೋಗಿದ್ದಾರೆ. ವಿದೇಶಕ್ಕೆ ಹೋಗಿರುವ ಟಿಕೆಟ್ಗಳು ನಮಗೆ ಲಭ್ಯವಾಗಿವೆ. ಕೇಂದ್ರ ಸರ್ಕಾರ ಡಿಪ್ಲೊಮ್ಯಾಟಿಕ್ ಪಾಸ್ಪೋರ್ಟ್ ಕೊಟ್ಟಿದ್ದರಿಂದಾಗಿ ಅವರು ರಾತ್ರೋರಾತ್ರಿ ದೇಶ ಬಿಟ್ಟು ಹೋಗಿದ್ದಾರೆ. ರಾಜತಾಂತ್ರಿಕ ಪಾಸ್ಪೋರ್ಟ್ ಹೊಂದಿದವರಿಗೆ ವಿಮಾನ ನಿಲ್ದಾಣಗಳಲ್ಲಿ ಹೆಚ್ಚಿನ ಪ್ರಶ್ನೆಗಳನ್ನು ಕೇಳುವುದಿಲ್ಲ. ಪಾಸ್ಪೋರ್ಟ್ ನೋಡಿದ ತಕ್ಷಣ ಅವರನ್ನು ಹೋಗಿ ಎಂದು ಒಳ ಬಿಡುತ್ತಾರೆ. ಜೆನ್ಯುನ್ ವೀಸಾ ಹೊಂದಿದ್ದರಿAದ ೩೨ರಿಂದ ೪೦ ದೇಶಗಳಲ್ಲಿ ಸುಲಭವಾಗಿ ಹೋಗಬಹುದು. ಹೀಗಾಗಿ, ಪ್ರಜ್ವಲ್ ಅವರ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದು ಮಾಡುವಂತೆ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ ಎಂದು ತಿಳಿಸಿದರು.
ಮೋದಿ ಫೋಟೋ ಬಳಕೆಗೆ ಈಶ್ವರಪ್ಪಗೆ ಅನುಮತಿ
ಶಿವಮೊಗ್ಗ, ಮೇ ೨: ಮೋದಿ ಫೋಟೋ ಬಳಕೆಗೆ ತÀನಗೆ ಅವಕಾಶ ಸಿಕ್ಕಿದ್ದು, ದೂರು ನೀಡಿದ್ದವರಿಗೆ ಮುಖಭಂಗವಾಗಿದೆ ಎಂದು ಕೆ.ಎಸ್. ಈಶ್ವರಪ್ಪ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನರೇಂದ್ರ ಮೋದಿ ಫೋಟೋ ಬಳಸಬಾರದು ಎಂದು ಬಿಜೆಪಿ ನಾಯಕರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಆದರೆ, ಇದೀಗ ಮೋದಿ ಫೋಟೋ ಬಳಸಬೇಡಿ ಎಂದು ದೂರು ನೀಡಿದವರಿಗೆ ಮುಖಭಂಗವಾಗಿದೆ. ಮೋದಿಯವರ ಫೋಟೋ ಬಳಕೆಗೆ ನನಗೆ ಅಧಿಕಾರ ಸಿಕ್ಕಿದೆ. ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡುತ್ತೇನೆ. ಈ ಚುನಾವಣೆಯಲ್ಲಿ ಜೀವನ ಪೂರ್ತಿ ಅವರ ಫೋಟೋ ಬಳಸುತ್ತೇನೆ. ನರೇಂದ್ರ ಮೋದಿಯವರ ವಿಚಾರಧಾರೆಯನ್ನು ನಾನು ಎಲ್ಲರಿಗೂ ತಿಳಿಸುತ್ತೇನೆ ಎಂದು ಹೇಳಿದರು.
ಜಾಮೀನು ಕೋರಿ ಸಿಸೋಡಿಯಾ ಅರ್ಜಿ
ನವದೆಹಲಿ, ಮೇ ೨: ದೆಹಲಿ ಅಬಕಾರಿ ನೀತಿ ಹಗರಣ ಸಂಬAಧ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಹಾಗೂ ಭ್ರಷ್ಟಾಚಾರ ಆರೋಪದಲ್ಲಿ ತಮ್ಮ ವಿರುದ್ಧ ಸಿಬಿಐ ಹಾಗೂ ಇ.ಡಿ ದಾಖಲಿಸಿಕೊಂಡಿರುವ ಪ್ರಕರಣದಲ್ಲಿ ಜಾಮೀನು ಕೋರಿ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಹಾಗೂ ನ್ಯಾಯಮೂರ್ತಿ ಮನ್ಮೀತ್ ಪಿ.ಎಸ್ ಅವರ ಪೀಠದ ಮುಂದೆ ಈ ಅರ್ಜಿ ಶುಕ್ರವಾರ ವಿಚಾರಣೆಗೆ ಬರಲಿದೆ. ಆಪಾದಿತರು ಶಾಸಕ ರಾಗಿರುವುದರಿಂದ ಪ್ರಕರಣವನ್ನು ತ್ವರಿತವಾಗಿ ವಿಚಾರಣೆ ನಡೆಸಬೇಕು ಹಾಗೂ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿ ಸಿಸೋಡಿಯಾ ಪರ ವಕೀಲರಾದ ಮೊಹಮ್ಮದ್ ಇರ್ಶಾದ್ ಪೀಠದ ಮುಂದೆ ಕೋರಿದರು.
ಪ್ರಜ್ವಲ್ ವಿರುದ್ಧ ಮತ್ತೊಂದು ಪ್ರಕರಣ
ಬೆಂಗಳೂರು, ಮೇ ೨: ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಬೆದರಿಕೆಯೊಡ್ಡಿರುವ ಆರೋಪದಡಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಮನೆ ಕೆಲಸದ ಮಹಿಳೆ ಹಾಗೂ ಅವರ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಹಾಗೂ ಅವರ ಮಗ ಪ್ರಜ್ವಲ್ ವಿರುದ್ಧ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಮೊದಲ ಪ್ರಕರಣ ದಾಖಲಾಗಿತ್ತು. ಅದೇ ದೂರು ಆಧರಿಸಿ ಎಸ್ಐಟಿ ತನಿಖೆ ನಡೆಸುತ್ತಿದೆ. ಇದರ ನಡುವೆಯೂ ಪ್ರಜ್ವಲ್ ವಿರುದ್ದ ಮತ್ತೊಬ್ಬ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ತನಿಖೆಯನ್ನೂ ಎಸ್ಐಟಿ ಕೈಗೆತ್ತಿಕೊಂಡಿದೆ. ದೂರಿನ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ್, ‘ಮತ್ತೊಬ್ಬ ಮಹಿಳೆ ದೂರು ನೀಡಿದ್ದಾರೆ. ಇದು ಎರಡನೇ ದೂರು. ಮಹಿಳೆಯರು ಧೈರ್ಯವಾಗಿ ಬಂದು ದೂರು ನೀಡಬಹುದು. ತಮಗೆ ಸರ್ಕಾರ ಎಲ್ಲಾ ರೀತಿಯ ಭದ್ರತೆ ನೀಡಲಿದೆ' ಎಂದು ತಿಳಿಸಿದರು.