ಶನಿವಾರಸಂತೆ, ಮೇ ೨: ಹೆಣ್ಣು-ಗಂಡು ಎಂಬ ತಾರತಮ್ಯ ತೋರದೆ ಮಕ್ಕಳನ್ನು ಸುಸಂಸ್ಕೃತರಾಗಿ ರೂಪಿಸುವ ಹೊಣೆಗಾರಿಕೆ ತಂದೆ-ತಾಯಿಯದ್ದು ಎಂದು ಜಾನಪದ ಕಲಾವಿದೆ ಹಾಗೂ ಪದ್ಮಶ್ರೀ ಪುರಸ್ಕೃತೆ ಐಮುಡಿಯಂಡ ರಾಣಿ ಮಾಚಯ್ಯ ಹೇಳಿದರು.

ಸಮೀಪದ ಅಂಕನಹಳ್ಳಿ ತಪೋಕ್ಷೇತ್ರ ಮನೆಹಳ್ಳಿ ಮಠದ ಶ್ರೀಗುರುಸಿದ್ಧವೀರೇಶ್ವರಸ್ವಾಮಿ ಜಾತ್ರಾಮಹೋತ್ಸವದ ಪ್ರಯುಕ್ತ ನಡೆದ ‘ಮಹಿಳಾ ಮಿಲನ’’ ಕಾರ್ಯಕ್ರಮದ “ಧರ್ಮ-ಸಂಸ್ಕೃತಿ-ಮಹಿಳೆ’ ವಿಚಾರಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪೋಷಕರು ಮಕ್ಕಳಿಗೆ ನೀತಿಕಥೆಗಳನ್ನು ಹೇಳಿಕೊಡಬೇಕು. ಹೆಣ್ಣುಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ನಾಯಕತ್ವದ ಗುಣ ಬೆಳೆಸಬೇಕು. ಸಮಾಜದಲ್ಲಿ ಧರ್ಮ, ಸಂಸ್ಕೃತಿ ಉಳಿಸಬೇಕು ಮತ್ತು ಬೆಳೆಸಬೇಕು ಎಂದರು.

ಮುಖ್ಯ ಅತಿಥಿ ಸಾಹಿತಿ ಶ.ಗ.ನಯನತಾರಾ ಪ್ರಾಸ್ತಾವಿಕ ನುಡಿಗಳನ್ನಾಡಿ, ಧರ್ಮ ಮತ್ತು ಸಂಸ್ಕೃತಿ ನಮ್ಮ ದೇಶದ ಜೀವಾಳವಾಗಿದ್ದು, ಇವುಗಳಲ್ಲಿ ಮಹಿಳೆ ಮಹತ್ತರ ಪಾತ್ರ ವಹಿಸುತ್ತಾಳೆ. ಮಠಮಾನ್ಯಗಳಿಂದಾಗಿ ಇಂದು ಸಮಾಜದಲ್ಲಿ ಧರ್ಮ ಮತ್ತು ಸಂಸ್ಕೃತಿ ಉಳಿದಿದೆ ಎಂದರು.

ನಿವೃತ್ತ ರಾಷ್ಟಿçÃಯ ಮಹಿಳಾ ಹಾಕಿ ತರಬೇತುಗಾರ್ತಿ ದೇವರಾಜಮ್ಮ ಮಾತನಾಡಿ, ಆಚಾರ-ವಿಚಾರ, ಪೂಜೆ -ಪುನಸ್ಕಾರಗಳಿಗೆ ಸ್ತಿçà ಮಾದರಿಯಾಗಿದ್ದಾಳೆ. ತಾಯಿಯಾದವಳು ಮಕ್ಕಳಿಗೆ ಸಂಸ್ಕೃತಿಯ ಅರಿವು ಮೂಡಿಸುತ್ತಾಳೆ ಎಂದರು.

ಸಾಹಿತಿ ಫ್ಯಾನ್ಸಿ ಮುತ್ತಣ್ಣ ಮಾತನಾಡಿ, ಪ್ರತಿ ಹೆಣ್ಣಿನ ಸಾಧನೆಯ ಹಿಂದೆ ಮನೆಯ ಸದಸ್ಯರ ಸಹಕಾರವಿರುತ್ತದೆ. ಹೆಣ್ಣಿನ ಸಾಧನೆಗೆ ಗೌರವ ತೋರಬೇಕು ಎಂದರು.

ಮತ್ತೋರ್ವ ಸಾಹಿತಿ ಜಲಾ ಕಾಳಪ್ಪ ಮಾತನಾಡಿ, ಮನೇಹಳ್ಳಿಮಠದ ಜಾತ್ರಾ ಮಹೋತ್ಸವ ಪ್ರಯುಕ್ತ ಮಹಿಳಾ ಮಿಲನ ಕಾರ್ಯಕ್ರಮ ಹಮ್ಮಿಕೊಂಡು ಸಾಧಕ ಮಹಿಳೆಯರನ್ನು ಸನ್ಮಾನಿಸಿರುವುದು ಶ್ಲಾಘನೀಯ ಎಂದರು.

ಆಯುರ್ವೇದ ವೈದ್ಯೆ ಡಾ.ವಿನ್ಯಾಸ, ಆಯುರ್ವೇದ ಪದ್ಧತಿ, ಚಿಕಿತ್ಸೆ ಬಗ್ಗೆ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಕಲಾವಿದೆ ರಾಣಿ ಮಾಚಯ್ಯ, ಹಾಕಿ ತರಬೇತುಗಾರ್ತಿ ದೇವರಾಜಮ್ಮ, ಸಾಹಿತಿಗಳಾದ ಶ.ಗ.ನಯನತಾರಾ, ಫ್ಯಾನ್ಸಿಮುತ್ತಣ್ಣ, ಜಲಾ ಕಾಳಪ್ಪ, ಶರ್ಮಿಳಾ ರಮೇಶ್, ಗೀತಾಂಜಲಿ, ಮುಖ್ಯಶಿಕ್ಷಕಿ ಪ್ರೇಮಾ, ಬಸ್ ನಿರ್ವಾಹಕಿ ಮಾಯಾಗಿರೀಶ್, ಸಮಾಜ ಸೇವಕಿ ಅನಿತಾ ತೋಟಪ್ಪಶೆಟ್ಟಿ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬೆಂಗಳೂರಿನ ನ್ಯಾಯಾಧೀಶೆ ಜಯಶ್ರೀ ಮಾತನಾಡಿ, ಪೋಷಕರು ಮಕ್ಕಳನ್ನು ಮಾದಕ ದ್ರವ್ಯ ಸೇವನೆಯಿಂದ ದೂರವಿಡಬೇಕು. ಚಿಕ್ಕಂದಿನಿAದಲೇ ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರದ ಅರಿವು ಮೂಡಿಸಬೇಕು ಎಂದು ಹೇಳಿದರು.

ಶ್ರೀತಪೋವನ ಕ್ಷೇತ್ರ ಮನೇಹಳ್ಳಿ ಮಠಾಧೀಶ ಮಹಾಂತ ಶಿವಲಿಂಗ ಸ್ವಾಮೀಜಿ, ಮುದ್ದಿನಕಟ್ಟೆ ಮಠಾಧೀಶ ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಬಸವಪಟ್ಟಣ ತೊಂÃಟದಾರ್ಯ ಮಠಾಧೀಶ ಸ್ವತಂತ್ರ ಬಸವಲಿಂಗ ಸ್ವಾಮೀಜಿ, ಕಲ್ಲಳ್ಳಿ ಮಠಾಧೀಶ ರುದ್ರಮುನಿ ಸ್ವಾಮೀಜಿ, ಚಂಗಡಹಳ್ಳಿ ಮಠಾಧೀಶ ಬಸವ ಮಹಾಂತ ಸ್ವಾಮೀಜಿ, ತೊರೆನೂರು ವಿರಕ್ತ ಮಠಾಧೀಶ ಮಲ್ಲೇಶ ಸ್ವಾಮೀಜಿ, ಮಠದ ಕಾರ್ಯಕ್ರಮ ಆಯೋಜಕ ಎಸ್.ಮಹೇಶ್ ಹಾಗೂ ಕ್ಷೇತ್ರದ ಸ್ವಯಂ ಸೇವಕರು ಉಪಸ್ಥಿತರಿದ್ದರು.

ಸಾಹಿತಿಗಳಾದ ಶರ್ಮಿಳಾ ರಮೇಶ್, ಗೀತಾಂಜಲಿ, ಮುಖ್ಯಶಿಕ್ಷಕಿ ಪ್ರೇಮಾ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.