ಕುಶಾಲನಗರ, ಮೇ ೨: ಸುಂಟಿಕೊಪ್ಪ ವ್ಯಾಪ್ತಿಯಲ್ಲಿ ನಡೆದ ಅಕ್ರಮ ಮರಹನನ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಕಾಫಿ ತೋಟದ ಮಾಲೀಕ ಸೇರಿದಂತೆ ಇನ್ನಿತರರ ವಿರುದ್ಧ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಂಡಿದ್ದಾರೆ.
ಸುಂಟಿಕೊಪ್ಪ ಸಮೀಪದ ಉಲುಗುಲಿ ಗ್ರಾಮದ ಕಾಫಿ ತೋಟ ಒಂದರಲ್ಲಿ ಮರಗಳನ್ನು ಅಕ್ರಮವಾಗಿ ತೆರವುಗೊಳಿಸಿ ನಿವೇಶನಗಳನ್ನಾಗಿ ಪರಿವರ್ತಿಸುತ್ತಿರುವ ಪ್ರಕರಣದ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಸೋಮವಾರಪೇಟೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎ.ಎ. ಗೋಪಾಲ್ ತಿಳಿಸಿದ್ದಾರೆ.
ತೋಟದ ಮಾಲೀಕ ಗಿರಿಧರ್ ಸೇರಿದಂತೆ ಇನ್ನಿತರರ ವಿರುದ್ಧ ಎಫ್.ಐ.ಆರ್. ದಾಖಲಿಸಿಕೊಂಡು ಇಲಾಖೆಯಿಂದ ನಿಯಮಾನುಸಾರ ಕ್ರಮ ಕೈಗೊಳ್ಳಲಾಗಿದೆ. ಕಲ್ಲು ಗಣಿಗಾರಿಕೆ ಸಂಬAಧ ಪರಿಶೀಲಿಸಲಾಗಿದ್ದು ಗಣಿಗಾರಿಕೆ ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ ಸಂಬAಧಿಸಿದ ಕಂದಾಯ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಗೋಪಾಲ್ ಮಾಹಿತಿ ನೀಡಿದ್ದಾರೆ.