ಕುಶಾಲನಗರ, ಮೇ ೪: ಕುಶಾಲನಗರ ತಾಲೂಕಿನ ಗ್ರಾಮಾಂತರ ಪ್ರದೇಶಗಳ ವ್ಯಾಪ್ತಿಯಲ್ಲಿ ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಸರಬರಾಜು ನಿರಂತರವಾಗಿ ನಡೆಯುತ್ತಿದೆ ಎಂದು ಕುಶಾಲನಗರ ತಾಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ ತಿಳಿಸಿದ್ದಾರೆ.

ಗುಡ್ಡೆಹೊಸೂರು, ಕೂಡಿಗೆ, ಶಿರಂಗಾಲ ಸೇರಿದಂತೆ ಕಾವೇರಿ ನದಿ ತಟದ ಗ್ರಾಮಗಳಲ್ಲಿ ಕಳೆದ ಎರಡು ತಿಂಗಳ ಅವಧಿಯಲ್ಲಿ ೪೦೦ಕ್ಕೂ ಅಧಿಕ ಟ್ಯಾಂಕರ್ ಕುಡಿಯುವ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳ ಮೂಲಕ ಬೇಡಿಕೆಗೆ ತಕ್ಕಂತೆ ನೀರಿನ ಪೂರೈಕೆ ನಡೆದಿದೆ.

ಗುಡ್ಡೆಹೊಸೂರು, ಕೂಡಿಗೆ, ಶಿರಂಗಾಲ ಗ್ರಾಮಗಳಿಗೆ ಹೆಚ್ಚಿನ ನೀರಿನ ಬೇಡಿಕೆ ಇದ್ದ ಹಿನ್ನೆಲೆಯಲ್ಲಿ ಹೆಚ್ಚುವರಿ ಟ್ಯಾಂಕರ್‌ಗಳನ್ನು ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.