ನಾಪೋಕ್ಲು, ಮೇ ೪: ಸಮೀಪದ ಬೇತು ಗ್ರಾಮದ ಮಕ್ಕಿ ಶಾಸ್ತಾವು ದೇವರ ವಾರ್ಷಿಕ ಉತ್ಸವ ಎರಡು ದಿನಗಳ ಕಾಲ ಅತ್ಯಂತ ವಿಜೃಂಭಣೆಯಿAದ ಜರುಗಿ ಸಂಪನ್ನಗೊAಡಿತು.

ಶನಿವಾರ ದೇವಾಲಯದ ಆವರಣದಲ್ಲಿ ನಡೆದ ಎರಡು ಪ್ರಮುಖ ಕೋಲಗಳೊಂದಿಗೆ ಉತ್ಸವ ಕೊನೆಗೊಂಡಿತು. ಮಕ್ಕಿ ಶಾಸ್ತಾವು ಸನ್ನಿಧಿಯಲ್ಲಿ ಬೆಳಗ್ಗಿನಿಂದಲೇ ವಿವಿಧ ಕೋಲಗಳು, ಶಾಸ್ತಾವು ದೇವರಿಗೆ ಸೇವೆಗಳು ನಡೆದು ಬೆಳಿಗ್ಗೆ ಅಜ್ಜಪ್ಪ ಕೋಲ ಹಾಗೂ ಮಧ್ಯಾಹ್ನ ವಿಷ್ಣುಮೂರ್ತಿ ಕೋಲ ಮೇಲೇರಿ ಗಮನ ಸೆಳೆದವು.

ಭಕ್ತರು ಅಧಿಕ ಸಂಖ್ಯೆಯಲ್ಲಿ ಉತ್ಸವದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ವೀಕ್ಷಿಸಿದರು. ಭಕ್ತರಿಂದ ದೇವರಿಗೆ ವಿವಿಧ ರೀತಿಯ ಹರಕೆಗಳನ್ನು ಸಲ್ಲಿಸಿ ತೀರ್ಥಪ್ರಸಾದ ಸ್ವೀಕರಿಸಿ ಪುನೀತರಾದರು. ದೇವಾಲಯದ ವತಿಯಿಂದ ಉತ್ಸವದಲ್ಲಿ ಭಾಗವಹಿಸಿದ ಭಕ್ತರಿಗೆ ಅನ್ನದಾನ ಏರ್ಪಡಿಸಲಾಗಿತ್ತು.

ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿ ಪದಾಧಿಕಾರಿಗಳು, ತಕ್ಕ ಮುಖ್ಯಸ್ಥರು, ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಸಮೀಪದ ಬೇತು ಗ್ರಾಮದಲ್ಲಿರುವ ನಿಸರ್ಗ ರಮಣೀಯ ತಾಣಗಳಲ್ಲಿ ಒಂದಾದ ಶ್ರೀ ಮಕ್ಕಿ ಶಾಸ್ತಾವು ದೇವಾಲಯದಲ್ಲಿ ವಾರ್ಷಿಕ ಉತ್ಸವದ ಅಂಗವಾಗಿ ಶುಕ್ರವಾರ ಎತ್ತುಹೋರಾಟ ಮತ್ತು ತೋತ ತೆರೆ ನಡೆಯಿತು.

ಶ್ರೀ ಮಕ್ಕಿಶಾಸ್ತಾವು ಉತ್ಸವ ಎರಡು ದಿನದ ಕಾರ್ಯಕ್ರಮ. ಶುಕ್ರವಾರ ರಾತ್ರಿ ದೀಪಾರಾಧನೆ ಜರುಗಿತು. ಅದಕ್ಕಿಂತ ಮುನ್ನಾ ದಿನ ಕೊಟ್ಟಿಪಾಡುವೊ ಕಾರ್ಯಕ್ರಮ ಜರುಗಿತು.