ಬೆಂಗಳೂರು, ಮೇ ೪: ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬAಧಿಸಿ ದಂತೆ ನಿರೀಕ್ಷಣಾ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದ ಬೆನ್ನಲ್ಲೇ ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಜೆಡಿಎಸ್ ರಾಷ್ಟಿçÃಯ ಘಟಕದ ಅಧ್ಯಕ್ಷ ಹೆಚ್.ಡಿ. ದೇವೇಗೌಡ ಅವರ ಪದ್ಮನಾಭನಗರದಲ್ಲಿರುವ ಮನೆಯಲ್ಲಿ ಹೆಚ್.ಡಿ. ರೇವಣ್ಣ ವಾಸ್ತವ್ಯ ಹೂಡಿದ್ದರು. ಜಾಮೀನು ನಿರಾಕರಣೆ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳ ತಂಡ ದೇವೇಗೌಡ ಅವರ ಮನೆಗೆ ತೆರಳಿ ಬಂಧಿಸಿದೆ.
ಮನೆ ಹೊರಗೆ ಹಾಗೂ ಒಳಗೆ ಹಲವು ನಿಮಿಷ ಶೋಧ ನಡೆಸಿದ ಅಧಿಕಾರಿ ತಂಡ ಅಂತಿಮವಾಗಿ ಮನೆಯಲ್ಲಿರುವುದು ಖಾತರಿಪಡಿಸಿ ಕೊಂಡ ನಂತರ ಅಧಿಕಾರಿಗಳು ಹೆಚ್.ಡಿ. ರೇವಣ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ. ಅವರನ್ನು ಸಿಐಡಿ ಕಚೇರಿಗೆ ಕರೆತಂದ ನಂತರ ವೈದ್ಯಕೀಯ ಪರೀಕ್ಷೆಗೂ ಒಳಪಡಿಸಲಾಯಿತು.
ಮಧ್ಯಂತರ ನಿರೀಕ್ಷಣಾ ಜಾಮೀನು ವಜಾಗೊಳ್ಳುತ್ತಿದ್ದಂತೆ ಹೆಚ್.ಡಿ ರೇವಣ್ಣಗೆ ಬಂಧನದ ಭೀತಿ ಶುರುವಾಗಿತ್ತು. ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಹೆಚ್.ಡಿ. ದೇವೇಗೌಡ ಅವರ ನಿವಾಸಕ್ಕೆ ಎಸ್.ಐ.ಟಿ. ಅಧಿಕಾರಿಗಳು ಆಗಮಿಸಿದ್ದರು. ಅಪಹರಣ ಪ್ರಕರಣದಲ್ಲಿ ಹೆಚ್.ಡಿ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ವಜಾಗೊಳಿಸಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಮೇ ೬ಕ್ಕೆ ಮುಂದೂಡಿತ್ತು.
ಮಹಿಳೆಯ ರಕ್ಷಣೆ
ಅಪಹರಣಕ್ಕೀಡಾಗಿದ್ದ ಮನೆ ಕೆಲಸದಾಕೆಯನ್ನು ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. ಏಪ್ರಿಲ್ ೨೯ರಂದು ರೇವಣ್ಣ ಅವರ ಸಂಬAಧ ಸತೀಶ್ ಬಾಬು ಎಂಬವರು ಸಂತ್ರಸ್ತ ಮಹಿಳೆಯನ್ನು ಆಕೆಯ ಮನೆಯಿಂದ ಕರೆದೊಯ್ದಿದ್ದರು. ಈ ಸಂಬAಧ ತನಿಖೆ ತೀವ್ರಗೊಳಿಸಿದ್ದ ಎಸ್ಐಟಿ ಅಧಿಕಾರಿಗಳು ಮೈಸೂರಿನ ಹುಣಸೂರು ತಾಲೂಕಿನ ಕಾಳೇನಹಳ್ಳಿಯಲ್ಲಿ ಸಂತ್ರಸ್ತ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ರೇವಣ್ಣರ ಪಿಎ ರಾಜಶೇಖರ ಎಂಬುವರ ತೋಟದ ಮನೆಯಲ್ಲಿದ್ದ ಮಹಿಳೆಯನ್ನು ರಕ್ಷಿಸಿರುವ ಅಧಿಕಾರಿಗಳು ಆಕೆಯನ್ನು ಸುರಕ್ಷಿತವಾಗಿ ಕರೆದೊಯ್ದಿದ್ದಾರೆ.