ಸೋಮವಾರಪೇಟೆ, ಮೇ ೪: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ತಾ. ೫ರಂದು ( ಇಂದು) ಇಲ್ಲಿನ ಕನ್ನಡ ಸಾಹಿತ್ಯ ಭವನದಲ್ಲಿ ೧೧೦ನೇ ಸಂಸ್ಥಾಪನ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ.

ಅಪರಾಹ್ನ ೪ ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಪೊಲೀಸ್ ಇನ್ಸ್ಪೆಕ್ಟರ್ ಕೆ.ಎಂ. ವಸಂತ್ ಕುಮಾರ್ ಉದ್ಘಾಟಿಸಲಿದ್ದು, ಪರಿಷತ್ತಿನ ಮಾಜಿ ಅಧ್ಯಕ್ಷರು ಹಾಗೂ ದತ್ತಿ ಕಾರ್ಯಕ್ರಮದ ದಾನಿಗಳಾದ ಜೆ.ಸಿ. ಶೇಖರ್, ಸಾಹಿತಿಗಳಾದ ಜಲಜಾ ಶೇಖರ್ ದಂಪತಿಯನ್ನು ಸನ್ಮಾನಿಸಲಾಗುವುದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಡಿ. ವಿಜೇತ್ ವಹಿಸಲಿದ್ದಾರೆ ಎಂದು ಗೌರವ ಕಾರ್ಯದರ್ಶಿ ಜ್ಯೋತಿ ಅರುಣ್ ತಿಳಿಸಿದ್ದಾರೆ.