ಮಡಿಕೇರಿ, ಮೇ ೪: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ನೀಡುವ ಪ್ರತಿಷ್ಠಿತ ಪ.ಗೋ. ಪ್ರಶಸ್ತಿಗೆ ವಾರ್ತಾಭಾರತಿ ಕೊಡಗು ಜಿಲ್ಲೆಯ ವಿಶೇಷ ವರದಿಗಾರ ಕೆ.ಎಂ. ಇಸ್ಮಾಯಿಲ್ ಕಂಡಕರೆ ಆಯ್ಕೆಯಾಗಿದ್ದಾರೆ.
‘ರಸ್ತೆ ಕೊಡಿ ಇಲ್ಲದಿದ್ದರೆ ಸಾವಿಗೆ ದಾರಿ ಮಾಡಿಕೊಡಿ’ ಎಂಬ ವರದಿಗೆ ಈ ಪ್ರಶಸ್ತಿ ಲಭಿಸಿದೆ.
ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ತಾ. ೯ರಂದು ಬೆಳಿಗ್ಗೆ ೧೧ ಗಂಟೆಗೆ ಮಂಗಳೂರು ಪತ್ರಿಕಾ ಭವನದಲ್ಲಿ ನಡೆಯಲಿದೆ. ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್. ಧರ್ಮ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಅತಿಥಿಯಾಗಿ ಭಾಗವಹಿಸುವರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸುವರು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.