ಸಿದ್ದಾಪುರ, ಮೇ ೩ : ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಕಾಮಗಾರಿಗಳನ್ನು ವೀರಾಜಪೇಟೆ ತಾಲೂಕು ಕಾರ್ಯ ನಿರ್ವಹಣಾಧಿಕಾರಿ ಪರಿಶೀಲನೆ ನಡೆಸಿದರು ಈ ಸಂದರ್ಭ ಸಿದ್ದಾಪುರ ಪಂಚಾಯಿತಿ ಕಚೇರಿಯಲ್ಲಿ ಕಾರ್ಯನಿರ್ವಹಣಾಧಿಕಾರಿಯನ್ನು ಭೇಟಿ ಮಾಡಿದ ಕಾರ್ಮಿಕ ಮುಖಂಡ ರಮೇಶ್ ಮಾತನಾಡಿ, ಸಿದ್ದಾಪುರ ಗ್ರಾಮ ಪಂಚಾಯಿತಿ ಜಿಲ್ಲೆಯಲ್ಲಿ ಅತಿ ದೊಡ್ಡ ಗ್ರಾಮ ಪಂಚಾಯಿತಿಯಾಗಿದ್ದು ಖಾಯಂ ಪಿಡಿಓ ನೇಮಕ ಮಾಡುವಂತೆ ಕೋರಿದರು.

ತಾತ್ಕಾಲಿಕ ಕರ್ತವ್ಯ ನಿರ್ವಹಿಸುತ್ತಿರುವ ಪಿಡಿಓ ಅವರಿಂದ ಗ್ರಾಮಸ್ಥರಿಗೆ ಸಕಾಲಕ್ಕೆ ಕೆಲಸ ಕಾರ್ಯಗಳು ನಡೆಯುತ್ತಿಲ್ಲ ಎಂದು ತಿಳಿಸಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೋಹನ್ ಹಾಗೂ ತಾಲೂಕು ಪಂಚಾಯಿತಿ ಕಚೇರಿಯ ಸಿಬ್ಬಂದಿಗಳು ಹಾಜರಿದ್ದರು.