ಮಡಿಕೇರಿ, ಮೇ ೩: ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರದ, ನೈರುತ್ಯ ಶಿಕ್ಷಕರ ಕ್ಷೇತ್ರದ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ದ್ವೆöÊವಾರ್ಷಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗವು ಚುನಾವಣಾ ಕಾರ್ಯಸೂಚಿಯನ್ನು ಹೊರಡಿಸಿದೆ.

ತಾ. ೯ ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ತಾ. ೧೬ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ತಾ. ೧೭ ರಂದು ನಾಮಪತ್ರಗಳ ಪರಿಶೀಲನೆ, ತಾ. ೨೦ ರಂದು ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಜೂನ್ ೩ ರಂದು ಬೆಳಿಗ್ಗೆ ೮ ಗಂಟೆಯಿAದ ಸಂಜೆ ೪ ಗಂಟೆಯವರೆಗೆ ಮತದಾನ ನಡೆಯಲಿದೆ. ಜೂನ್ ೬ ರಂದು ಮತ ಎಣಿಕೆ ನಡೆಯಲಿದೆ.

ಈ ಚುನಾವಣೆಗೆ ಸ್ಪರ್ಧಿಸುವ ವ್ಯಕ್ತಿಗಳ ವಯಸ್ಸು ೩೦ ವರ್ಷಗಳಿಗೆ ಕಡಿಮೆ ಇರಕೂಡದು ಮತ್ತು ಅವರು ಕರ್ನಾಟಕದ ಯಾವುದಾದರು ಒಂದು ವಿಧಾನಸಭಾ ಕ್ಷೇತ್ರದಲ್ಲಿ ಮತದಾರ ರಾಗಿರಬೇಕು ಮತ್ತು ಅವರು ಯಾವುದೇ ಕಾನೂನಿನ ಅಡಿಯಲ್ಲಿ ಅನರ್ಹರಾಗಿರಬಾರದು. ಚಾಲ್ತಿ ಯಲ್ಲಿರುವ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೋಂದಾ ಯಿತವಾಗಿರುವ ಬಗ್ಗೆ ಸಂಬAಧಿಸಿದ ಮತದಾರರ ನೋಂದಣಾಧಿಕಾರಿ/ ಸಹಾಯಕ ಮತದಾರರ ನೋಂದಣಾ ಧಿಕಾರಿಗಳಿಂದ

(ಮೊದಲ ಪುಟದಿಂದ) ಪಡೆದ ಮತದಾರರ ಪಟ್ಟಿಯ ದೃಢೀಕೃತ ನಕಲನ್ನು ಹಾಜರುಪಡಿಸಬೇಕು. ನೈರುತ್ಯ ಪದವೀಧರರ ಕ್ಷೇತ್ರದ, ನೈರುತ್ಯ ಶಿಕ್ಷಕರ ಕ್ಷೇತ್ರದ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೋಂದಾಯಿತವಾಗಿರುವವರು ಮಾತ್ರ ಈ ಚುನಾವಣೆಯಲ್ಲಿ ಮತದಾರರಾಗಿ ರುತ್ತಾರೆ. ಈ ಚುನಾವಣೆಗೆ ಸಂಬAಧಿಸಿ ದಂತೆ ಚುನಾವಣಾ ಧಿಕಾರಿಗಳು

ಹಾಗೂ ಕ್ಷೇತ್ರ ವ್ಯಾಪ್ತಿಯು ಇಂತಿವೆೆ. ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು (ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳು ಮತ್ತು ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ಚನ್ನಗಿರಿ ತಾಲೂಕು ಕ್ಷೇತ್ರ ವ್ಯಾಪ್ತಿಗೆ). ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು (ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಹಾಸನ ಜಿಲ್ಲಾ ವ್ಯಾಪ್ತಿಗೆ).

ಚುನಾವಣೆಗೆ ಸ್ಪರ್ಧಿಸಲಿಚ್ಛಿಸುವ ಅಭ್ಯರ್ಥಿಗಳು ತಾ. ೯ ರಿಂದ ತಾ. ೧೬ ರವರೆಗೆ (ಸಾರ್ವತ್ರಿಕ ರಜಾ ದಿನಗಳನ್ನು ಹೊರತುಪಡಿಸಿ) ಮೈಸೂರು, ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಬೆಳಿಗ್ಗೆ ೧೧ ಗಂಟೆಯಿAದ ಮಧ್ಯಾಹ್ನ ೩ ಗಂಟೆಯವರೆಗೆ ನಾಮಪತ್ರ ಸಲ್ಲಿಸಬಹುದು. ತಾ. ೧೦ ರಿಂದ ತಾ. ೧೨ ರವರೆಗೆ ನೆಗೋಷಿಯೇಬಲ್ ಇನ್ಸ್ಟ್ಟುಮೆಂಟ್ ಆಕ್ಟ್ ಮೇರೆಗೆ ಸಾರ್ವತ್ರಿಕ ರಜಾ ದಿನವಾಗಿರುವುದರಿಂದ ಆ ದಿನಗಳಂದು ನಾಮಪತ್ರ ಸ್ವೀಕರಿಸಲಾಗುವುದಿಲ್ಲ.

ನಾಮಪತ್ರಗಳ ನಮೂನೆಗಳನ್ನು ಪ್ರಾದೇಶಿಕ ಆಯುಕ್ತರು, ಮೈಸೂರು ವಿಭಾಗ, ಮೈಸೂರು ಇವರ ಕಚೇರಿಯಿಂದ ಪಡೆಯಬಹುದು. ಈ ಚುನಾವಣೆಯ ಸಂಬAಧದಲ್ಲಿ ಸ್ಪರ್ಧಿಸಲಿಚ್ಛಿಸುವವರು ೧೯೫೧ ರ ಪ್ರಜಾ ಪ್ರಾತಿನಿಧ್ಯ ಅಧಿನಿಯಮದ ೩೩ ನೇ ನಿಯಮದ ಪ್ರಕಾರ ಪ್ರತಿ ಅಭ್ಯರ್ಥಿಯ ನಾಮಪತ್ರದಲ್ಲಿ ಸಂಬAಧಿಸಿದ ಕ್ಷೇತ್ರದ ಮತದಾರರ ಪಟ್ಟಿಯಲ್ಲಿರುವ ಕನಿಷ್ಟ ೧೦ ಮತದಾರರು ಪ್ರಸ್ತಾಪಕರಾಗಿ (ಪ್ರೊಪೋಸರ್) ಸಹಿ ಮಾಡಿರಬೇಕು. ಪ್ರತಿ ಅಭ್ಯರ್ಥಿ ರೂ.೧೦ ಸಾವಿರ ಠೇವಣಿ ಮಾಡಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರು ರೂ. ೫ ಸಾವಿರ ಠೇವಣಿ ಮಾಡಬೇಕು. ಅಭ್ಯರ್ಥಿಯು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದಲ್ಲಿ ಸಕ್ಷಮ ಪ್ರಾಧಿಕಾರದಿಂದ ಪಡೆದ ಜಾತಿ ದೃಢೀಕರಣ ಪತ್ರ ಲಗತ್ತಿಸಬೇಕು.