ಸುAಟಿಕೊಪ್ಪ, ಮೇ ೪: ಕೊಡಗರಹಳ್ಳಿಯ ಕುಂದೂರುಮೊಟ್ಟೆ ಚಾಮುಂಡೇಶ್ವರಿ ಸೇವಾ ಸಮಿತಿ ವತಿಯಿಂದ ಶ್ರೀ ಮಹಾವಿಷ್ಣು, ಶ್ರೀ ಚಾಮುಂಡೇಶ್ವರಿ, ರಕ್ತೇಶ್ವರಿ ಪರಿವಾರ ದೇವರುಗಳ ೪೬ನೇ ವಾರ್ಷಿಕ ಮಹೋತ್ಸವಕ್ಕೆ ತಾ. ೨೯ ರಿಂದ ೧ ರವರೆಗೆ ವಿವಿಧ ಪೂಜೆ ಮತ್ತು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿಧ್ಯುಕ್ತವಾಗಿ ನಡೆದು ಬುಧವಾರ ಸಂಪನ್ನಗೊAಡಿತು. ತಾ. ೨೯ ಸೋಮವಾರ ಪೂರ್ವಾಹ್ನ ಗಣಪತಿ ಹೋಮ ಮತ್ತು ಕೊಡಿ ಏರಿಸುವುದರೊಂದಿಗೆ ಪೂಜಾ ಕಾರ್ಯಕ್ರಮಗಳು ಪ್ರಾರಂಭಗೊAಡಿದ್ದವು. ಇದರ ಅಂಗವಾಗಿ ದೇವಾಲಯ ಸೇರಿದಂತೆ ತಳಿರು ತೋರಣ ವಿದ್ಯುತ್ ದೀಪಾಲಂಕಾರಗಳಿAದ ಸಿಂಗರಿಸಲಾಗಿತ್ತು. ಸುತ್ತಮುತ್ತಲ ಗ್ರಾಮಗಳ ನೂರಾರು ಮಂದಿ ೩ ದಿನ ಕಾಲ ನಡೆದ ವಾರ್ಷಿಕ ಮಹೋತ್ಸವದಲ್ಲಿ ಭಾಗಿಯಾಗಿದ್ದರು. ಸಂಜೆ ೭ ಗಂಟೆಯಿAದ ದೀಪಾರಾಧನೆ ಏಳು ಸುತ್ತಿನ ಪ್ರದಕ್ಷಿಣೆ ಹಾಗೂ ಶ್ರೀ ಚಾಮುಂಡಿ ತಂಡದಿAದ ಚಂಡೆ ಮೇಳ ಜರುಗಿತು. ಮಂಗಳವಾರದAದು ಶ್ರೀ ಚಾಮುಂಡೇಶ್ವರಿ ದೇವಿಯ ಅಭಿಷೇಕ ಪೂಜೆಯೊಂದಿಗೆ ಭಕ್ತರ ಹರಕೆ ಮತ್ತು ಬೇಡಿಕೆಗಳು ನಡೆದವು. ಮಂಗಳವಾರ ರಾತ್ರಿಯಿಂದ ವಿವಿಧ ದೈವಗಳ ಕೋಲ ನಡೆದ ಸಂದರ್ಭ ಆಕರ್ಷಕ ಪಟಾಕಿ ಮತ್ತು ಸಿಡಿಮದ್ದಿನ ಕಾರ್ಯಕ್ರಮ ಬಾನಂಗಳದಲ್ಲಿ ಚೆಲುವಿನ ಚಿತ್ತಾರವನ್ನು ಬಿಡಿಸುವ ಮೂಲಕ ಭಕ್ತರು ವಯಸ್ಕರು ಎನ್ನದೆ ನೆರೆದಿದ್ದ ಜನಸ್ತೋಮದ ಮನಸೂರೆಗೊಂಡಿತು.

ಬುಧವಾರ ಪೂರ್ವಾಹ್ನ ಅಜ್ಜಪ್ಪ ಕೋಲ, ವಿಷ್ಣುಮೂರ್ತಿ ಕೋಲ, ರಕ್ತೇಶ್ವರಿ ಹಾಗೂ ಚಾಮುಂಡೇಶ್ವರಿ ಕೋಲದೊಂದಿಗೆ ರಾತ್ರಿ ೮ ಗಂಟೆಗೆ ಶ್ರೀದೇವಿ ನೇವೈದ್ಯದೊಂದಿಗೆ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ತೆರೆಬಿದ್ದಿತು.