ವೀರಾಜಪೇಟೆ, ಮೇ ೫: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ದಕ್ಷಿಣ, ಕೊಡಗು ಜಿಲ್ಲಾ ಘಟಕದ ವತಿಯಿಂದ ಕೆ.ಎಲ್.ಇ ತಾಂತ್ರಿಕ ವಿಶ್ವವಿದ್ಯಾನಿಲಯದ ಎಂ.ಸಿ.ಎ ವಿಧ್ಯಾರ್ಥಿನಿ ನೇಹಾ ಹಿರೇಮಠ್ ಅವರನ್ನು ಚಾಕು ಇರಿದು ಕೊಲೆ ಮಾಡಿರುವ ಯುವಕನಿಗೆ ಉಗ್ರ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿ ವೀರಾಜಪೇಟೆ ತಹಶೀಲ್ದಾರ್ ಕಚೇರಿಯ ಉಪ ತಹಶೀಲ್ದಾರ್ ಪ್ರದೀಪ್ ಕುಮಾರ್ ಹೆಚ್.ಬಿ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ವಿದ್ಯಾರ್ಥಿ ಪ್ರಮುಖ್ ರಕ್ಷಿತಾ ಹತ್ಯೆ ಆರೋಪಿ ಫಯಾಜ್ನನ್ನು ಉಗ್ರವಾದ ಶಿಕ್ಷೆಗೆ ಗುರಿಪಡಿಸಬೇಕು. ಅಲ್ಲದೆ ನೇಹಾಳ ಕುಟುಂಬಕ್ಕೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ದಕ್ಷಿಣ ಕೊಡಗು ಜಿಲ್ಲಾ ಘಟಕದ ವಿದ್ಯಾರ್ಥಿ ಪ್ರಮುಖರಾದ ಧನೇಶ್ ಪೊನ್ನಣ್ಣ, ಧಕ್ಷ, ದೀಕ್ಷಿತ್ ಪೊನ್ನಮ್ಮ ಮತ್ತು ಸಂಘಟನೆಯ ಸದಸ್ಯರು ಹಾಜರಿದ್ದರು.