ನಾಪೋಕ್ಲು, ಮೇ ೪: ಇಲ್ಲಿಗೆ ಸಮೀಪದ ಚೇರಂಬಾಣೆ ಗ್ರಾಮ ಪಂಚಾಯಿತಿಯ ಬೇಂಗೂರು ಗ್ರಾಮದ ಶ್ರೀ ನಾಡು ಕಡಪಾಲಪ್ಪ ದೇವಾಲಯದ ಪುನರ್‌ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಂಪನ್ನಗೊAಡಿತು.

ದ್ವಾದಶ ನಾಳಿಕೇರ ಗಣಯಾಗ, ನವಗ್ರಹ ಯಾಗ, ರಕ್ಷಾ ಕಲಶ ಪ್ರತಿಷ್ಠೆ, ಬಿಂಬಶುದ್ಧಿ, ಕಡಪಾಲಪ್ಪ ದೇವರ ಪುನರ್ ಪ್ರತಿಷ್ಠೆ, ಜೀವಕುಂಭಾಭಿಷೇಕ, ಮಹಾಗಣಪತಿ ದೇವರ ಪ್ರತಿಷ್ಠೆ, ಶಾಂತಿ ಪೂಜೆ, ಪ್ರಾಯಶ್ಚಿತ ಹೋಮ, ಆಶ್ಲೇಷ ಬಲಿ, ತತ್ವಹೋಮ, ಬ್ರಹ್ಮಕಲಶ, ಮಂಡಲಪೂಜೆ, ಕಡಪಾಲಪ್ಪ ದೇವರಿಗೆ ಶಾಂತಿ ಪ್ರಾಯಶ್ಚಿತ ಹೋಮಗಳು, ತತ್ವ ಕಲಶಾಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ವಿಶೇಷ ಅಲಂಕಾರ ಮಹಾಪೂಜೆ ಮಂಗಳಾರತಿ ಬಳಿಕ ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿತರಣೆ ಆನಂತರ ದೇವರ ದರ್ಶನ ನೃತ್ಯಬಲಿ ನಡೆಯಿತು. ಊರ ಮತ್ತು ಪರವೂರಿನ ಭಕ್ತರು ಅಧಿಕ ಸಂಖ್ಯೆಯಲ್ಲಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಕೊಳಲು ವಾದನ, ಭರತನಾಟ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಗ್ರಾಮದ ಜನರ ಮನಸೂರೆಗೊಂಡವು.

ಬೇAಗೂರು ಗ್ರಾಮದ ಶ್ರೀ ದೇವರ ನೂತನ ಶಿಲಾಮಯ ಗರ್ಭಗುಡಿಯಲ್ಲಿ ಸಪರಿವಾರ ಸಹಿತ ಕಡಪಾಲಪ್ಪ ದೇವರ ಪುನರ್‌ಪ್ರತಿಷ್ಠಾ ಬ್ರಹ್ಮಕಲಶೋತ್ಸವವನ್ನು ಉಡುಪಿ ಪೇಜಾವರ ವಿಶ್ವ ಪ್ರಸನ್ನ ತೀರ್ಥ ನೆರವೇರಿಸಿದರು. ದೇವರ ಅರ್ಚಕ ರಾಧಾಕೃಷ್ಣ ಭಟ್ಟ ಉಪಸ್ಥಿತಿಯಲ್ಲಿ ವೈದಿಕ ವಿದ್ವಾಂಸ ಕಳತೂರು ವೇದಮೂರ್ತಿ ಬ್ರಹ್ಮಶ್ರೀ ಉದಯತಂತ್ರಿ ನೇತೃತ್ವದಲ್ಲಿ, ರಂಜಾಳ ಪೌರೋಹಿತ್ಯ ವಾಚಸ್ಪತಿ ವೇದಮೂರ್ತಿ ಗುರುರಾಜ ಉಪಾಧ್ಯಾಯರ ಮಾರ್ಗದರ್ಶನದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

ಕಾರ್ಯಕ್ರಮದಲ್ಲಿ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ತೇಲಪಂಡ ನಂದ ಮಂದಣ್ಣ, ಉಪಾಧ್ಯಕ್ಷ ಕುಂಚೆಟ್ಟಿರ ಸುಬ್ಬಯ್ಯ, ಕಾರ್ಯದರ್ಶಿ ಕುಂಚೆಟ್ಟಿರ ಗೋಪಾಲ, ಖಜಾಂಚಿ ಪಟ್ಟಮಾಡ ಅಶೋಕ್, ಸದಸ್ಯರಾದ ಕಲ್ಲುಮಾಡಂಡ ವಾಸು, ಕುಂಚೆಟ್ಟಿರ ರಮೇಶ್, ಚೋಕಿರ ಪೊನ್ನಣ್ಣ, ಕಲ್ಲುಮಾಡಂಡ ಅಶೋಕ್, ಕುಂಚೆಟ್ಟಿರ ರಮೇಶ್, ಚೋಕಿರ ಪೊನ್ನಣ್ಣ, ಕೀಪಾಡಂಡ ವಾಸು, ಬೊಳ್ಳಾರ್ಪಂಡ ಚಂಗಪ್ಪ, ತಕ್ಕಮುಖ್ಯಸ್ಥರು, ಚುನಾಯಿತ ಪ್ರತಿನಿಧಿಗಳು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಪ್ರತಿಷ್ಠಾ ಅಷ್ಟ ಬಂಧ ಬ್ರಹ್ಮಕಲಶೋತ್ಸವದಲ್ಲಿ ದೇವರ ಪ್ರದರ್ಶನ ನೃತ್ಯಬಲಿ ನಡೆಯಿತು.