ಪೊನ್ನಂಪೇಟೆ, ಮೇ ೫: ಉತ್ತಮ ರೀತಿಯ ಆಡಳಿತ ವ್ಯವಸ್ಥೆಯೊಂದಿಗೆ ಪೊನ್ನಂಪೇಟೆ ತಾಲೂಕನ್ನು ಜಿಲ್ಲೆಯ ಲ್ಲಿಯೇ ಮಾದರಿ ತಾಲೂಕಾಗಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗು ವುದು ಎಂದು ಪೊನ್ನಂಪೇಟೆ ತಾಲೂಕು ತಹಶೀಲ್ದಾರ್ ಮೋಹನ್ ಕುಮಾರ್ ಹೇಳಿದರು.

ಪೊನ್ನಂಪೇಟೆ ನಾಗರಿಕ ವೇದಿಕೆ ವತಿಯಿಂದ ಗೋಲ್ಡನ್ ಗೇಟ್ ಹೊಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಪೊನ್ನಂಪೇಟೆ ತಾಲೂಕಿಗೆ ಸಂಬAಧಿಸಿದ ಕುಂದುಕೊರತೆಗಳನ್ನು ಸರಿಪಡಿಸಿಕೊಂಡು, ಎಲ್ಲಾ ಸಿಬ್ಬಂದಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಹಿರಿಯರ ಮಾರ್ಗದರ್ಶನದಲ್ಲಿ ಜನಪರವಾಗಿ ಕೆಲಸ ನಿರ್ವಹಿಸಲಾಗುವುದು ಎಂದರು.

ಇದೇ ಸಂದರ್ಭ ಪೊನ್ನಂಪೇಟೆ ತಾಲೂಕು ಭೂ ಮಾಪನ ಇಲಾಖೆಯ ಸಹಾಯಕ ನಿರ್ದೇಶಕ ಬಾನಂಗಡ ಅರುಣ್ ಅವರನ್ನು ನಾಗರಿಕ ವೇದಿಕೆ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅರುಣ್ ಅವರು ಸರ್ವೇ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆಯ ನಡುವೆಯೂ, ಇಲಾಖೆಗೆ ಸಂಬAಧಿಸಿದ ಕೆಲಸಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಲಾಗುತ್ತಿದೆ.

ಸರ್ವೆ ಇಲಾಖೆಗೆ ಸಂಬAಧಿಸಿದAತೆ ಯಾವುದೇ ಸಮಸ್ಯೆ ಇದ್ದರೂ ಸಾರ್ವಜನಿಕರು ಕಚೇರಿಗೆ ಬಂದು ಮಾಹಿತಿ ನೀಡಿದಲ್ಲಿ, ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದರು.

ಈ ಸಂದರ್ಭ ನಾಗರಿಕ ವೇದಿಕೆ ಅಧ್ಯಕ್ಷ ಸಿ. ಎನ್. ವಿಶ್ವನಾಥ್, ಉಪಾಧ್ಯಕ್ಷ ಆಲಿರ ಎರ್ಮು ಹಾಜಿ, ನಿರ್ದೇಶಕರಾದ ಎಂ.ಪಿ. ಅಪ್ಪಚ್ಚು, ಕೆ.ಎಂ. ಗಣಪತಿ, ಎ.ಬಿ. ದೇವಯ್ಯ ಮಾತನಾಡಿ, ತಾಲೂಕು ಕಚೇರಿಯ ಕುಂದು-ಕೊರತೆಗಳ ಬಗ್ಗೆ ವಿವರಿಸಿದರು. ತಾಲೂಕು ಕಚೇರಿಯ ಸಿಬ್ಬಂದಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸುವ ಮೂಲಕ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ, ಪೊನ್ನಂಪೇಟೆ ತಾಲೂಕು ಜಿಲ್ಲೆಗೆ ಮಾದರಿಯಾಗಲಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನಾಗರಿಕ ವೇದಿಕೆ ಕಾರ್ಯದರ್ಶಿ ಕೃಷ್ಣರಾಜೇಂದ್ರ, ಮಾಜಿ ಅಧ್ಯಕ್ಷ ಪಿ.ಬಿ. ಪೂಣಚ್ಚ, ನಿರ್ದೇಶಕರಾದ ಎಂ.ಪಿ. ಲಕ್ಷö್ಮಣ್, ಪಿ.ಬಿ. ದಿನೇಶ್ ಮತ್ತು ಆಶಾ ಪ್ರಕಾಶ್ ಇದ್ದರು.