ಮಡಿಕೇರಿ ಮೇ ೫: ಕೊಡವಾಮೆ ಸಂಘಟನೆಯ ಅಧೀನದ ಬುಡಕಟ್ಟು ಸಂಸ್ಕೃತಿ ಅಧ್ಯಯನ ಕೇಂದ್ರದ ಮಚ್ಚಮಾಡ ಲಾಲ ಕುಟ್ಟಪ್ಪ ಅವರು ಬರೆದ ಮೂಪಾಜೆ ನಿಗಂಟ್ ಶಬ್ದಗೂಡ್ ಪುಸ್ತಕ ಬಿಡುಗಡೆ ಕಾರ್ಯಕ್ರಮ ತಾ. ೧೪ ರಂದು ನಡೆಯಲಿದೆ.
ಅಂದು ಸಂಜೆ ೪ ಗಂಟೆಗೆ ವೀರಾಜಪೇಟೆ ಕೊಡವ ಸಮಾಜದಲ್ಲಿ ಕಾರ್ಯಕ್ರಮ ನಡೆಯಲಿದೆ. ಮಂಗಳೂರು ವಿ.ವಿ.ಯ ನಿವೃತ್ತ ಕುಲಪತಿ ಹಾಗೂ ಬುಡಕಟ್ಟು ಸಂಸ್ಕೃತಿ ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ. ಕಂಡ್ರತAಡ ಕಾವೇರಿಯಪ್ಪ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅತಿಥಿಗಳಾಗಿ ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ, ಎಂ.ಎಲ್.ಸಿ. ಸುಜಾ ಕುಶಾಲಪ್ಪ, ಹಿರಿಯ ಸಾಹಿತಿ ಬಾಚರಣಿಯಂಡ ಅಪ್ಪಣ್ಣ, ಕೊಡವ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಬ್ರಹ್ಮಗಿರಿ ಪತ್ರಿಕೆ ಸಂಪಾದಕ ಉಳ್ಳಿಯಡ ಎಂ. ಪೂವಯ್ಯ, ರಾಜ್ಯ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ವೀರಾಜಪೇಟೆ ಕೊಡವ ಸಮಾಜದ ಅಧ್ಯಕ್ಷ ಕುಂಬೆರ ಎ. ಮನುಕುಮಾರ್ ಪಾಲ್ಗೊ ಳ್ಳಲಿದ್ದಾರೆ.