ಕೇಂದ್ರದಿAದ ಬಾರದ ಆರ್ಥಿಕ ನೆರವು:ಜುಲೈನಲ್ಲಿ ಅರ್ಜಿ ವಿಚಾರಣೆ

ನವದೆಹಲಿ, ಮೇ ೬: ಬರ ನಿರ್ವಹಣೆಗಾಗಿ ರಾಷ್ಟಿçÃಯ ವಿಪತ್ತು ನಿರ್ವಹಣಾ ನಿಧಿ(ಎನ್‌ಡಿಆರ್‌ಎಫ್)ನಿಂದ ಹಣ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಜುಲೈನಲ್ಲಿ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂಕೋರ್ಟ್ ಸೋಮವಾರ ತಿಳಿಸಿದೆ. ಬರ ನಿರ್ವಹಣೆಗಾಗಿ ಕರ್ನಾಟಕ ಸರ್ಕಾರಕ್ಕೆ ಸುಮಾರು ರೂ. ೩,೪೦೦ ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಏಪ್ರಿಲ್ ೨೯ ರಂದು ಉನ್ನತ ನ್ಯಾಯಾಲಯಕ್ಕೆ ಹೇಳಿತ್ತು. ಇಂದು ಈ ವಿಚಾರ ಕೈಗೆತ್ತಿಕೊಂಡ ನ್ಯಾಯಾಧೀಶರಾದ ಬಿ.ಆರ್. ಗವಾಯಿ ಹಾಗೂ ಸಂದೀಪ್ ಮೆಹ್ತಾ ಅವರನ್ನೊಳಗೊಂಡ ನ್ಯಾಯಪೀಠದ ಮುಂದೆ ಕರ್ನಾಟಕದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಈ ವಿಚಾರದಲ್ಲಿ ಸರ್ಕಾರ ಅಫಿಡವಿಟ್ ಸಲ್ಲಿಸಲಿದೆ ಎಂದು ಹೇಳಿದರು. ನ್ಯಾಯಪೀಠ ವಿಚಾರಣೆಯನ್ನು ಜುಲೈಗೆ ಮುಂದೂಡಿತು. ಕಳೆದ ವಾರ ನಡೆದ ವಿಚಾರಣೆ ಸಂದರ್ಭದಲ್ಲಿ ಕರ್ನಾಟಕಕ್ಕೆ ರೂ. ೩,೪೫೦ ಕೋಟಿ ಬಿಡುಗಡೆ ಮಾಡಲಾಗಿದೆ. ಆದರೆ, ರಾಜ್ಯ ಸರ್ಕಾರ ರೂ. ೧೮,೦೦೦ ಕೋಟಿ ರೂ. ಬಿಡುಗಡೆಗೆ ಮನವಿ ಮಾಡಿರುವುದಾಗಿ ಕಪಿಲ್ ಸಿಬಲ್ ನ್ಯಾಯಾಲಯಕ್ಕೆ ಹೇಳಿದರು. ಎನ್‌ಡಿಆರ್‌ಎಫ್ ಪ್ರಕಾರ ಬರ ಪರಿಹಾರಕ್ಕೆ ಹಣಕಾಸು ನೆರವು ಬಿಡುಗಡೆ ಮಾಡದಿರುವ ಕೇಂದ್ರದ ಕ್ರಮವು ಸಂವಿಧಾನದ ೧೪ ಮತ್ತು ೨೧ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಿದ ರಾಜ್ಯದ ಜನರ ಮೂಲಭೂತ ಹಕ್ಕುಗಳ "ಪೂರ್ವಭಾವಿ ಉಲ್ಲಂಘನೆ" ಎಂದು ಘೋಷಿಸಲು ಅರ್ಜಿಯಲ್ಲಿ ಕೋರಲಾಗಿದೆ.

ರೇವಣ್ಣ ಮನೆಯಲ್ಲಿ ಎಸ್.ಐ.ಟಿ. ಮಹಜರು

ಬೆಂಗಳೂರು, ಮೇ ೬: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಬಸವನಗುಡಿಯಲ್ಲಿರುವ ಎಚ್.ಡಿ.ರೇವಣ್ಣ ಅವರ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು ನಡೆಸಿದರು. ಕೆ.ಆರ್.ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ ಅವರನ್ನು ಬಂಧಿಸಿರುವ ಅಧಿಕಾರಿಗಳು, ಮೇ ೮ರವರೆಗೆ ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದ್ದಾರೆ. ಅರಮನೆ ರಸ್ತೆಯಲ್ಲಿರುವ ಸಿಐಡಿ ಕಟ್ಟಡದ ಸೆಲ್‌ನಲ್ಲಿ ಇರಿಸಿ ವಿಚಾರಣೆ ನಡೆಸುತ್ತಿದ್ದಾರೆ. ಅಪಹರಣವಾಗಿದ್ದ ಸಂತ್ರಸ್ತೆಯನ್ನು ರಕ್ಷಿಸಿ ಹೇಳಿಕೆ ಪಡೆದಿರುವ ಅಧಿಕಾರಿಗಳು, ಅವರನ್ನು ನ್ಯಾಯಾಧೀಶರ ಎದುರು ಸದ್ಯದಲ್ಲೇ ಹಾಜರುಪಡಿಸಲಿದ್ದಾರೆ. ಸಿಆರ್‌ಪಿಸಿ ೧೬೪ ಅಡಿ ಹೇಳಿಕೆ ದಾಖಲಿಸಲಿದ್ದಾರೆ. ಅದಕ್ಕೂ ಮುನ್ನವೇ ಅವರನ್ನು ಆರೋಪಿ ಮನೆ ಹಾಗೂ ತೋಟದ ಮನೆಗಳಿಗೆ ಕರೆದೊಯ್ದು ಮಹಜರು ನಡೆಸುತ್ತಿದ್ದಾರೆ. ಪೊಲೀಸ್ ಜೀಪಿನಲ್ಲಿ ಸಂತ್ರಸ್ತೆಯನ್ನು ರೇವಣ್ಣ ಅವರ ಬಸವನಗುಡಿ ಮನೆಗೆ ಕರೆದೊಯ್ದಿದ್ದ ಅಧಿಕಾರಿಗಳು, ಒಂದು ಗಂಟೆಗೂ ಹೆಚ್ಚು ಕಾಲ ಮಹಜರು ನಡೆಸಿದರು. ಘಟನೆಯ ಮರುಸೃಷ್ಟಿ ಮಾಡಿ, ವೀಡಿಯೋ ಚಿತ್ರೀಕರಣ ಮಾಡಿಕೊಂಡರು. ಇದೆಲ್ಲ ಅಂಶವನ್ನು ಅಧಿಕಾರಿಗಳು, ದೋಷಾರೋಪ ಪಟ್ಟಿಯಲ್ಲಿ ನಮೂದಿಸಲಿದ್ದಾರೆ.

ಹೆಚ್.ಡಿ.ಡಿ.-ಹೆಚ್.ಡಿ.ಕೆ. ಹೆಸರು ಪ್ರಸ್ತಾಪಿಸದಂತೆ ತಡೆಯಾಜ್ಞೆ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೆöÊವ್ ಪ್ರಕರಣ ಮತ್ತು ಮಾಜಿ ಸಚಿವ ಹೆಚ್.ಡಿ. ರೇವಣ್ಣ ವಿರುದ್ಧದ ಅಪಹರಣ ಕೇಸ್‌ಗೆ ಸಂಬAಧಪಟ್ಟAತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಬಳಸದಂತೆ ತಡೆಯಾಜ್ಞೆ ನೀಡಲಾಗಿದೆ. ಉಭಯ ನಾಯಕರು ಸೆಷನ್ಸ್ ಕೋರ್ಟ್ನಿಂದ ತಡೆಯಾಜ್ಞೆ ತಂದಿದ್ದಾರೆ. ಪ್ರಕರಣಗಳ ಬಗ್ಗೆ ಸುದ್ದಿ ಪ್ರಸಾರ ಮಾಡುವಾಗ ತಮ್ಮ ಹೆಸರುಗಳನ್ನು ಬಳಸದಂತೆ ತಡೆಯಾಜ್ಞೆಯನ್ನು ತಂದಿದ್ದಾರೆ. ಇಷ್ಟು ದಿನ ಪ್ರಕರಣದ ಸಂದರ್ಭದಲ್ಲಿ ದೇವೇಗೌಡರ ಕುಟುಂಬದ ಹೆಸರುಗಳನ್ನು ಕೆಲವರು ಪ್ರಸ್ತಾಪ ಮಾಡುತ್ತಿದ್ದರು. ಇದರಿಂದ ಅವರ ಕುಟುಂಬಕ್ಕೆ ತೀವ್ರ ಮುಜುಗರವಾಗಿತ್ತು. ಅಲ್ಲದೆ, ಹೆಚ್.ಡಿ. ಕುಮಾರಸ್ವಾಮಿ ಅವರು ನೇರವಾಗಿಯೇ ಇದರ ಬಗ್ಗೆ ಕಿಡಿಕಾರಿದ್ದರು.

ವೀಡಿಯೋ ಶೇರ್ ಶಿಕ್ಷಾರ್ಹ ಅಪರಾಧ

ಬೆಂಗೂರು, ಮೇ ೬: ಹಲವು ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯದ ವೀಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಆ್ಯಪ್‌ಗಳಲ್ಲಿ ಹಂಚಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಯಾರಾದರೂ ಹಂಚಿಕೊಳ್ಳುವುದು ಪತ್ತೆಯಾದರೆ ಅಂಥವರ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗುದು ಎಂದು ಎಎಸ್‌ಐಟಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಎಸ್‌ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್, ವೀಡಿಯೋ ಹಂಚಿಕೊಳ್ಳುವವರನ್ನು ತಂತ್ರಜ್ಞಾನ ಸಹಾಯದಿಂದ ಪತ್ತೆಹಚ್ಚಲು ಸಾಧ್ಯವಿದೆ. ಸಂತ್ರಸ್ತೆಯರ ಘನತೆ ಹಾಗೂ ಗೌಪ್ಯತೆಗೆ ಕುಂದುAಟು ಮಾಡುವುದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದಿದ್ದಾರೆ.

ಎಸ್.ಸಿ, ಎಸ್.ಟಿ. ಅನುದಾನ ದುರ್ಬಳಕೆ - ಬಿ.ಎಸ್.ವೈ.

ಶಿವಮೊಗ್ಗ, ಮೇ ೬: ಹಿಂದುಳಿದ ಸಮುದಾಯಗಳ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ೨೫ ಸಾವಿರ ಕೋಟಿ ರೂಪಾಯಿಗಳನ್ನು ಕಾಂಗ್ರೆಸ್ ಲಪಟಾಯಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆರೋಪಿಸಿದ್ದಾರೆ. ಶಿವಮೊಗ್ಗದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳ ಕಲ್ಯಾಣಕ್ಕಾಗಿ ಮೀಸಲಿಟ್ಟ ೨೫,೩೯೬ ಕೋಟಿ ರೂಪಾಯಿ ಹಣವನ್ನು ಕಾಂಗ್ರೆಸ್ ಲಪಟಾಯಿಸಿದೆ ಎಂದು ಆರೋಪಿಸಿದರು. ಸಿದ್ದರಾಮಯ್ಯ ವಿಧಾನಸಭಾ ಚುನಾವಣಾ ಗುಂಗಿನಿAದ ಇನ್ನೂ ಹೊರ ಬಂದಿಲ್ಲ. ಬಹುಶಃ ಈಗ ೨೦೨೪ರ ಲೋಕಸಭಾ ಚುನಾವಣೆ ನಡೆಯುತ್ತಿದೆ ಎಂಬುದನ್ನು ಅವರು ಮರೆತಿದ್ದಾರೆ ಎಂಬುದು ನನ್ನ ಭಾವನೆ. ಸರ್ಕಾರ ಅಭಿವೃದ್ಧಿ ಹೊಂದಿಲ್ಲ. ಬರದ ಕುರಿತು ಜನರ ಗಮನ ಸೆಳೆದು ಮತ ಗಳಿಸಬಹುದು ಎಂಬ ಭ್ರಮೆಯಲ್ಲಿದೆ. ಕಾಂಗ್ರೆಸ್ ಸುಳ್ಳಿನ ಆಧಾರದ ಮೇಲೆ ಚುನಾವಣೆ ನಡೆಸುತ್ತಿದೆ. ಅವರಿಗೆ ಅಭಿವೃದ್ಧಿಯ ಬೆಂಬಲ ಕೂಡ ಇಲ್ಲ ಎಂದು ಹೇಳಿದರು.

ಕಾರ್ಪೋರೇಟರ್‌ಗೆ ಡಿ.ಕೆ.ಶಿ. ಕಪಾಳಮೋಕ್ಷ

ಬೆಂಗಳೂರು, ಮೇ ೬: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಲೋಕಸಭಾ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಪೊರೇಟರ್‌ಗೆ ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾದ ವೀಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಈ ವೀಡಿಯೋವನ್ನು ಹಂಚಿಕೊAಡಿರುವ ರಾಜ್ಯ ಬಿಜೆಪಿ, ಕಳೆದ ರಾತ್ರಿ ಡಿ.ಕೆ. ಶಿವಕುಮಾರ್ ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿಯವರ ಪರ ಚುನಾವಣಾ ಪ್ರಚಾರ ನಡೆಸು ತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಿದೆ. ಕಾಂಗ್ರೆಸ್ ಕಾರ್ಯಕರ್ತರು “ಡಿಕೆ, ಡಿಕೆ” ಎಂದು ಘೋಷಣೆಗಳನ್ನು ಕೂಗುತ್ತಿದ್ದರು. ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಕಾರಿನಿಂದ ಕೆಳಗಿಳಿದು ಬಂದ ತಕ್ಷಣ ಅವರ ಹೆಗಲ ಮೇಲೆ ಕೈಹಾಕಿದ ಕಾಂಗ್ರೆಸ್ ಕಾರ್ಪೊರೇಟರ್ ಅಲ್ಲಾವುದ್ದೀನ್ ಮನಿಯಾರ್ ಅವರ ಕಪಾಳಕ್ಕೆ ಬಾರಿಸಿದ್ದಾರೆ ಎಂದು ತಿಳಿಸಿದೆ.

ಆದೇಶ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ ಹೇಮಂತ್ ಸೊರೆನ್

ನವದೆಹಲಿ, ಮೇ ೬: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಬಂಧನದ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಜಾರ್ಖಂಡ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಮುಖ್ಯನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠದ ಮುಂದೆ ಮನವಿ ಮಾಡಿದ ಸೊರೆನ್ ಪರ ವಕೀಲ ಕಪಿಲ್ ಸಿಬಲ್, ಅರ್ಜಿಯನ್ನು ತ್ವರಿತವಾಗಿ ವಿಚಾರಣೆ ನಡೆಸಬೇಕು ಎಂದು ಕೋರಿದರು. ಮೇ ೧೩ ರಿಂದ ಜಾರ್ಖಂಡ್‌ನಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಸೊರೆನ್ ಅವರಿಗೆ ತಮ್ಮ ಪಕ್ಷ ಜೆಎಂಎA ಪರ ಪ್ರಚಾರ ಮಾಡಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದರು.