ಪೊನ್ನAಪೇಟೆ, ಮೇ ೬: ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಉಪ ಪ್ರಾಂಶುಪಾಲರು ಹಾಗೂ ಆಂಗ್ಲ ಭಾಷಾ ವಿಭಾಗ ಮುಖ್ಯಸ್ಥೆ ಡಾ. ಎ.ಎಸ್. ಪೂವಮ್ಮ ಅವರು ವಯೋನಿವೃತ್ತಿ ಹೊಂದಿದ್ದು, ಅವರಿಗೆ ಕಾವೇರಿ ಕಾಲೇಜು ಬಳಗದ ವತಿಯಿಂದ ಬೀಳ್ಕೊಡುಗೆ ನೀಡಲಾಯಿತು. ಪ್ರಾಂಶುಪಾಲ ಡಾ. ಎಂ.ಬಿ. ಕಾವೇರಿಯಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಹಿರಿಯ ಉಪನ್ಯಾಸಕಿ ಪ್ರೊ. ಎಂ.ಎಸ್. ಭಾರತಿ ಹಾಗೂ ಎಲ್ಲಾ ಉಪನ್ಯಾಸಕರು ಹಾಗೂ ಆಡಳಿತಾತ್ಮಕ ಸಿಬ್ಬಂದಿ ಉಪಸ್ಥಿತರಿದ್ದರು.