ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ೨ನೇ ಹಂತದ ಚುನಾವಣೆ

ಬೆಂಗಳೂರು, ಮೇ ೭: ೨೦೨೪ನೇ ಸಾಲಿನ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಎರಡನೇ ಹಂತದ ಮತದಾನದ ಪ್ರಕ್ರಿಯೆ ನಡೆಯಿತು. ಬೆಳಿಗ್ಗೆ ೭ ಗಂಟೆಯಿAದ ಮತದಾನ ಆರಂಭಗೊAಡು ಮತದಾರರು ಉತ್ಸಾಹದಿಂದ ತಮ್ಮ ಹಕ್ಕನ್ನು ಚಲಾಯಿಸಿದರು. ರಾಜ್ಯದ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರಾವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲಿ ಚುನಾವಣೆ ನಡೆಯಿತು. ದೇಶದ ಮಹಾರಾಷ್ಟç, ಗುಜರಾತ್, ಉತ್ತರಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ ರಾಜ್ಯಗಳಲ್ಲೂ ಶಾಂತಿಯುತ ಮತದಾನ ನಡೆಯಿತು.

ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆAಗಳೂರು, ಮೇ ೭: ಮಹಿಳೆಯೊಬ್ಬರ ಅಪಹರಣ ಪ್ರಕರಣದ ಆರೋಪಿಯಾಗಿ ಸದ್ಯ ವಿಶೇಷ ತನಿಖಾ ದಳದ (ಎಸ್‌ಐಟಿ) ಬಂಧನದಲ್ಲಿರುವ ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದೂಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಈ ಸಂಬAಧ ಎಸ್‌ಐಟಿಗೆ ನೋಟೀಸ್ ಜಾರಿ ಮಾಡಿದೆ. ಮಹಿಳೆಯೊಬ್ಬರನ್ನು ಅಪಹರಿಸಿದ ಆರೋಪದ ಮೇಲೆ ರೇವಣ್ಣರನ್ನು ಎಸ್‌ಐಟಿ ಶನಿವಾರ ಬಂಧಿಸಿದ್ದು, ಮೇ ೮ ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ. ನ್ಯಾಯಾಲಯ ಶನಿವಾರ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಈ ಕುರಿತಂತೆ ಹೆಚ್.ಡಿ. ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್, ಆರೋಪಿ ಪೊಲೀಸ್ ಕಸ್ಟಡಿಯಲ್ಲಿ ಇರುವಾಗ ಆತ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಬಹುದೇ ಎಂಬ ಬಗ್ಗೆ ಆಕ್ಷೇಪಣೆ ಸಲ್ಲಿಸಿ ಎಂದು ಎಸ್‌ಐಟಿಗೆ ಆದೇಶಿಸಿ ನೋಟೀಸ್ ಜಾರಿ ಮಾಡಿದರು. ವಿಚಾರಣೆಯನ್ನು ತಾ. ೮ ರ ಬೆಳಿಗ್ಗೆ ೧೧ ಗಂಟೆಗೆ ಮುಂದೂಡಿದರು. ವಿಚಾರಣೆ ವೇಳೆ ಅರ್ಜಿದಾರ ರೇವಣ್ಣ ಪರ ಹಾಜರಾಗಿದ್ದ ಹೈಕೋರ್ಟ್ ಹಿರಿಯ ವಕೀಲ ಸಿ.ವಿ. ನಾಗೇಶ್, ಆರೋಪಿಗೆ ಜಾಮೀನು ನೀಡಲು ಸಾಧ್ಯವಿರುವ ಕಾನೂನಿನ ಅಂಶಗಳು ಹಾಗೂ ಸುಪ್ರೀಂಕೋರ್ಟ್ ತೀರ್ಪಿನ ಪೂರ್ವ ನಿದರ್ಶನಗಳನ್ನು ವಿವರಿಸಿದರು.

ಕೇಜ್ರಿವಾಲ್ ಬಂಧನ ಅವಧಿ ವಿಸ್ತರಣೆ

ನವದೆಹಲಿ, ಮೇ ೭: ಅಬಕಾರಿ ಹಗರಣಕ್ಕೆ ಸಂಬAಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನದಲ್ಲಿರುವ ಮುಖ್ಯಮಂತ್ರಿ ಅರವಿಂದ ಕೇಜ್ರ‍್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿ ನ್ಯಾಯಾಲಯ ಮೇ ೨೦ ರವರೆಗೆ ವಿಸ್ತರಿಸಿದೆ. ವೀಡಿಯೋ ಕಾನ್ಫರೆನ್ಸ್ ಮೂಲಕ ಕೇಜ್ರಿವಾಲ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಸಿಬಿಐ ಮತ್ತು ಇ.ಡಿ. ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಕೇಜ್ರಿವಾಲ್ ಹಾಗೂ ಸಹ ಆರೋಪಿ ಚನ್‌ಪ್ರೀತ್ ಸಿಂಗ್ ನ್ಯಾಯಾಂಗ ಬಂಧನದ ಅವಧಿಯನ್ನು ತಾ. ೨೦ ರವರೆಗೆ ವಿಸ್ತರಿಸಿ ಆದೇಶಿಸಿದ್ದಾರೆ.

ಪೆನ್‌ಡ್ರೆöÊವ್ ಪ್ರಕರಣ-ನ್ಯಾಯಾಂಗ ತನಿಖೆಗೆ ಜೆಡಿಎಸ್ ಆಗ್ರಹ

ಮೈಸೂರು, ಮೇ ೭: ಪೆನ್‌ಡ್ರೆöÊವ್ ಪ್ರಕರಣದ ತನಿಖೆಯನ್ನು ಹಾಲಿ ನ್ಯಾಯಾಧೀಶರೊಬ್ಬರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು. ಪೆನ್‌ಡ್ರೆöÊವ್ ಹಂಚಿದವರನ್ನೂ ಬಂಧಿಸಬೇಕು ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಒತ್ತಾಯಿಸಿದರು. ರಾಜ್ಯ ಸರ್ಕಾರವು ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿದ್ದನ್ನು ಮೊದಲ ದಿನವೇ ಜೆಡಿಎಸ್ ಸ್ವಾಗತಿಸಿದ್ದು, ನ್ಯಾಯ ಸಮ್ಮತ ತನಿಖೆಗೆ ಒತ್ತಾಯಿಸಿದ್ದೆವು. ಆದರೆ ಇಡೀ ಪ್ರಕರಣವನ್ನು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ತಮಗೆ ಬೇಕಾದ ರೀತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ. ಯಾರನ್ನು ಬಂಧಿಸಬೇಕು, ಯಾರನ್ನು ಬಿಡಬೇಕು ಎಂದು ಡಿ.ಕೆ. ಶಿವಕುಮಾರ್ ಅಣತಿಯಂತೆ ಎಸ್‌ಐಟಿ ಅಧಿಕಾರಿಗಳು ನಡೆಸುತ್ತಿದ್ದಾರೆ. ಸಿಬಿಐ ತನಿಖೆಗೆ ಕಾಂಗ್ರೆಸ್ ಒಪ್ಪುವುದಿಲ್ಲ. ಹೀಗಾಗಿ ನ್ಯಾಯಾಧೀಶರಿಂದಲೇ ಪ್ರಕರಣದ ತನಿಖೆ ನಡೆಸಬೇಕು ಎಂದು ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

ಪ್ರಜ್ವಲ್ ಪತ್ತೆಗೆ ೧೯೬ ರಾಷ್ಟçಗಳಿಗೆ ಮಾಹಿತಿ

ಬೆಂಗಳೂರು, ಮೇ ೭: ಹಲವು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬAಧಿಸಿದAತೆ ವಿದೇಶದಲ್ಲಿರುವ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಈಗಾಗಲೇ ರೆಡ್ ಕಾರ್ನರ್ ಹಾಗೂ ಬ್ಲೂ ಕಾರ್ನರ್ ನೋಟೀಸ್ ಜಾರಿ ಮಾಡಲಾಗಿದ್ದು, ೧೯೬ ರಾಷ್ಟçಗಳಿಗೆ ಮಾಹಿತಿ ರವಾನಿಸಿರುವುದಾಗಿ ಇಂಟರ್‌ಫೋಲ್ ಮಾಹಿತಿ ನೀಡಿರುವುದಾಗಿ ಎಸ್‌ಐಟಿ ತಿಳಿಸಿದೆ. ಪ್ರಜ್ವಲ್ ರೇವಣ್ಣ ಯಾವುದೇ ವಿಮಾನ ನಿಲ್ದಾಣ, ಬಂದರು, ಗಡಿಯಲ್ಲಿ ಕಾಣಿಸಿ ಕೊಂಡರೆ ಮಾಹಿತಿ ನೀಡಲಾಗುವುದು ಎಂದು ಇಂಟರ್ ಪೋಲ್‌ನಿಂದ ಎಸ್‌ಐಟಿಗೆ ನಿನ್ನೆ ಸಂಜೆ ಮಾಹಿತಿ ಲಭ್ಯವಾಗಿದೆ ಎಂದು ತಿಳಿದುಬಂದಿದೆ. ಯಾವುದೇ ಒಬ್ಬ ವ್ಯಕ್ತಿಯ ಕುರಿತಾಗಿ ಹೆಚ್ಚಿನ ಮಾಹಿತಿ ಸಂಗ್ರಹ ಮಾಡಲು, ಆತನ ಗುರುತು, ಆತ ಇರುವ ನಿಖರ ಸ್ಥಳ ಹಾಗೂ ಆತನ ಚಟುವಟಿಕೆಗಳನ್ನು ಗಮನಿಸಿ ಅಪರಾಧಿಕ ಕೃತ್ಯಗಳ ತನಿಖಾ ತಂಡಕ್ಕೆ ನೆರವಾಗಲು ಬ್ಲೂ ನೋಟೀಸ್ ಜಾರಿ ಮಾಡಲಾಗುತ್ತದೆ. ಸದ್ಯ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಇದೇ ನೋಟೀಸ್ ಜಾರಿಯಾಗಿದೆ. ಬ್ಲೂ ಕಾರ್ನರ್ ನೋಟೀಸ್ ಮೂಲಕ ಪ್ರಜ್ವಲ್ ರೇವಣ್ಣ ಯಾವ ದೇಶದಲ್ಲಿದ್ದಾರೆ, ಅವರು ಏನು ಮಾಡುತ್ತಿದ್ದಾರೆ ಎಂಬುದರ ಮಾಹಿತಿ ಇಂಟರ್ ಫೋಲ್‌ನಿಂದ ಎಸ್‌ಐಟಿಗೆ ಲಭ್ಯವಾಗಲಿದೆ.

ಕವಿತಾ ನ್ಯಾಯಾಂಗ ಬಂಧನ ವಿಸ್ತರಣೆ

ನವದೆಹಲಿ, ಮೇ ೭: ಅಬಕಾರಿ ನೀತಿ ಹಗರಣಕ್ಕೆ ಸಂಬAಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ತಾ. ೧೪ ರವರೆಗೆ ಇಲ್ಲಿನ ಕೋರ್ಟ್ ವಿಸ್ತರಿಸಿದೆ. ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಕಾರಣ ಕವಿತಾ ಅವರನ್ನು ಮಂಗಳವಾರ ಕೋರ್ಟ್ ಎದುರು ಹಾಜರುಪಡಿಸಲಾಗಿತ್ತು. ಸಿಬಿಐ, ಇ.ಡಿ. ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಿದರು. ವಿಚಾರಣೆ ವೇಳೆ ಇ.ಡಿ. ತನಿಖೆಯು ಪ್ರಮುಖ ಹಂತದಲ್ಲಿದೆ. ಒಂದು ವಾರದ ಒಳಗಾಗಿ ಕವಿತಾ ಅವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಬಹುದು ಎಂದು ತಿಳಿಸಿತು.