ಮಡಿಕೇರಿ, ಮೇ ೧೪: ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕಕ್ಕೆ ಈಗಾಗಲೇ ಒಪ್ಪಿಗೆ ದೊರೆತಿದ್ದು, ಜಿಲ್ಲೆಯ ಎಲ್ಲಾ ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು, ವಹಿವಾಟು ಕೇಂದ್ರಗಳು, ಉದ್ಯಮಗಳ ನಾಮಫಲಕಗಳಲ್ಲಿ ಶೇ.೬೦ ರಷ್ಟು ಕನ್ನಡ ಭಾಷೆ ಇರಲೇಬೇಕು. ಆ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳು ಹಾಗೂ ಸಂಬAಧಪಟ್ಟ ಇಲಾಖೆಗಳು ಅಗತ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್‌ರಾಜಾ ಸೂಚಿಸಿದ್ದಾರೆ.

ಜಿಲ್ಲೆಯ ಎಲ್ಲಾ ನಾಮಫಲಕಗಳಲ್ಲಿ ಶೇ.೬೦ರಷ್ಟು ಕನ್ನಡ ಭಾಷೆ ಕಡ್ಡಾಯ ಅನುಷ್ಠಾನ ಸಂಬAಧ ಅಧಿಕಾರಿಗಳ ಜೊತೆ ಮಂಗಳವಾರ ನಡೆದ ವೀಡಿಯೋ ಸಂವಾದದಲ್ಲಿ ಅವರು ಮಾತನಾಡಿದರು.

ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ಸಂಬAಧ ಈಗಾಗಲೇ ಅಧಿನಿಯಮ ಜಾರಿಯಾಗಿದ್ದು, ಇದನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಜಿಲ್ಲೆಯ ಗಡಿಭಾಗ ಸೇರಿದಂತೆ ನಗರ, ಪಟ್ಟಣ ಹಾಗೂ ಎಲ್ಲೆಡೆ ಅಳವಡಿಸಿರುವ/ ಅಳವಡಿಸುವ ನಾಮಫಲಕದಲ್ಲಿ ಕಡ್ಡಾಯವಾಗಿ ಶೇ.೬೦ರಷ್ಟು ಕನ್ನಡ ಭಾಷೆಗೆ ಪ್ರಥಮ ಆದ್ಯತೆ ನೀಡಬೇಕು.

‘ಜಿಲ್ಲೆಯ ಸಾರ್ವಜನಿಕ ಸ್ಥಳಗಳಲ್ಲಿನ ನಾಮಫಲಕದಲ್ಲಿ ಕನ್ನಡ ಭಾಷೆ ಬಳಕೆ ಕಡ್ಡಾಯ ಅನುಷ್ಠಾನದ ಬಗ್ಗೆ ಕರೆಗಳು ಬರುತ್ತಿದ್ದು, ಈ ಬಗ್ಗೆ ಸಂಬAಧಪಟ್ಟ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಮತ್ತೊಮ್ಮೆ ಏಳು ದಿನಗಳ ಕಾಲಾವಕಾಶ ನೀಡಿ, ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ ಅನುಷ್ಠಾನಕ್ಕೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್‌ರಾಜಾ ಸ್ಪಷ್ಟ ನಿರ್ದೇಶನ ನೀಡಿದರು.’

ಜಿಲ್ಲೆಯಲ್ಲಿರುವ ಎಲ್ಲಾ ಅಂಗಡಿ, ಹೊಟೇಲ್, ವಾಣಿಜ್ಯ ಸಂಕೀರ್ಣ, ಕೈಗಾರಿಕೋದ್ಯಮ, ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳು ಹಾಗೂ ಪ್ರವಾಸೋದ್ಯಮ ಕೇಂದ್ರಗಳ ನಾಮಫಲಕಗಳಲ್ಲಿ ಶೇ.೬೦ ರಷ್ಟು ಕನ್ನಡ ಭಾಷಾ ಬಳಕೆ ಕಡ್ಡಾಯವಾಗಿದ್ದು, ಈ ಸಂಬAಧ ತಮ್ಮ ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ನಾಮಫಲಕಗಳಲ್ಲಿ ಕನ್ನಡ ಭಾಷೆ ಅನುಷ್ಠಾನ ಸಂಬAಧ ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ ಕಾಯ್ದೆಯಂತೆ ಕ್ರಮವಹಿಸಬೇಕು. ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ, ಮಂಜೂರಾತಿ ಪಡೆದ ಎಲ್ಲಾ ಸಂಸ್ಥೆಗಳಿಗೂ ಈ ಕಾಯ್ದೆ ಅನ್ವಯವಾಗಲಿದೆ. ಖಾಸಗಿ ಶಾಲಾ ಕಾಲೇಜುಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನರಂಜನಾ ಕೇಂದ್ರಗಳು, ಹೊಟೇಲ್ ಸೇರಿದಂತೆ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ನಾಮಫಲಕಗಳ ಮೇಲ್ಬಾಗದಲ್ಲಿ ಕನ್ನಡ ಭಾಷೆಯನ್ನು ಶೇ.೬೦ ರಷ್ಟು ಪ್ರದರ್ಶಿಸಬೇಕು, ಬರೆಸಿರಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ಜಿ.ಪಂ. ಸಿಇಒ ವರ್ಣಿತ್ ನೇಗಿ ಮಾತನಾಡಿ, ನಾಮಫಲಕಗಳಲ್ಲಿ ಶೇ.೬೦ ರಷ್ಟು ಕನ್ನಡ ಭಾಷೆ ಬಳಕೆಗೆ ಸಂಬAಧಿಸಿದAತೆ ತಾ.ಪಂ.ಮತ್ತು ಗ್ರಾ.ಪಂ.ಮೂಲಕ ತ್ವರಿತ ಕ್ರಮ ಕೈಗೊಳ್ಳಲಾಗುವುದು ಎಂದರು. ಪೌರಾಯುಕ್ತ ವಿಜಯ್ ಮಾತನಾಡಿ, ಈಗಾಗಲೇ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗಿದ್ದು, ನಾಮಫಲಕದಲ್ಲಿ ಶೇ.೬೦ ರಷ್ಟು ಕನ್ನಡ ಭಾಷೆ ಬಳಕೆ ಸಂಬAಧಿಸಿದAತೆ ನಗರದ ೧೫೦ ಅಂಗಡಿಗಳಿಗೆ ನೋಟೀಸ್ ಜಾರಿ ಮಾಡಲಾಗಿದೆ. ಅನುಷ್ಠಾನ ಸಂಬAಧ ತಂಡ ರಚಿಸಲಾಗಿದೆ. ಈ ಬಗ್ಗೆ ವರದಿ ನೀಡಲಾಗುವುದು ಎಂದರು.

ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ದಿನೇಶ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ.ಬಸಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಎಂ.ಚAದ್ರಕಾAತ್, ತಾ.ಪಂ. ಇಒ ಎಂ.ನಾಗಮಣಿ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕಿ ಅನಿತಾ ಭಾಸ್ಕರ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟರಾಜು, ಪುರಸಭೆ ಮುಖ್ಯಾಧಿಕಾರಿಗಳಾದ ಕೃಷ್ಣಪ್ರಸಾದ್ (ಕುಶಾಲನಗರ), ಚಂದ್ರಕುಮಾರ್ (ವೀರಾಜಪೇಟೆ), ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕ್ಯ ನಾಯಕ್, ತಹಶೀಲ್ದಾರರು ಇತರರು ನಾಮಫಲಕಗಳಲ್ಲಿ ಕನ್ನಡ ಅನುಷ್ಠಾನ ಸಂಬAಧ ಹಲವು ಮಾಹಿತಿ ನೀಡಿದರು.