ಸುಂಟಿಕೊಪ್ಪ, ಮೇ ೧೫: ಇಲ್ಲಿನ ಗುಡ್ಡಪ್ಪ ರೈ ಬಡಾವಣೆಯಲ್ಲಿ ನೆಲೆಗೊಂಡಿರುವ ಶ್ರೀ ಹುಲಿ ಮಸಣಿಕಮ್ಮ ದೇವಸ್ಥಾನದ ವಾರ್ಷಿಕೋತ್ಸವ ಮಂಗಳವಾರ ಶ್ರದ್ಧಾಭಕ್ತಿಯಿಂದ ನೂರಾರು ಭಕ್ತಾದಿಗಳ ಸಮ್ಮುಖದಲ್ಲಿ ವಿಜೃಂಭಣೆಯಿAದ ನೆರವೇರಿತು. ವಾರ್ಷಿಕೋತ್ಸವದ ಅಂಗವಾಗಿ ದೇವಾಲಯವನ್ನು ತಳಿರು ತೋರಣ ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.

ಈ ಸಂದರ್ಭ ದೇವಿಗೆ ಬೆಳಿಗ್ಗೆ ೭ ಗಂಟೆಯಿAದ ವಿಶೇಷ ಪೂಜಾ ಕಾರ್ಯಕ್ರಮ ನಡೆದು ನಂತರ ೯.೩೦ ರಿಂದ ೧೧ ಗಂಟೆವರೆಗೆ ದೇವಿ ಅರ್ಪಣೆ ನಡೆಯಿತು. ಮಧ್ಯಾಹ್ನ ಒಂದು ಗಂಟೆಗೆ ಮಹಾಪೂಜೆ ನೆರವೇರಿಸಲಾಯಿತು. ಮಹಾ ಮಂಗಳಾರತಿಯೊAದಿಗೆ ಭಕ್ತಾದಿಗಳಿಗೆ ಪ್ರಸಾದ ವಿತರಿಸಲಾಯಿತು. ಸಂಜೆ ೩ ಗಂಟೆಯಿAದ ೫ ಗಂಟೆಯವರೆಗೆ ನೆರೆದಿದ್ದ ಭಕ್ತರಿಗೆ ಅನ್ನಸಂತರ್ಪಣೆ ಮಾಡಲಾಯಿತು.

ಸೂಂಟಿಕೊಪ್ಪ ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ನೂರಾರು ಭಕ್ತಾದಿಗಳು ಆಗಮಿಸಿ ಹರಕೆಗಳನ್ನು ಒಪ್ಪಿಸಿ ತಮ್ಮ ಇಷ್ಟಾರ್ಥಗಳನ್ನು ಈಡೇರಿಸುವಂತೆ ಮಸಣಿಕಮ್ಮ ದೇವರಲ್ಲಿ ಪ್ರಾರ್ಥಿಸಿದರು. ಗ್ರಾಮದ ಸುತ್ತಮುತ್ತಲಿನ ನೂರಾರು ಭಕ್ತಾದಿಗಳು ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡರು.

ಈ ಸಂದರ್ಭ ಶ್ರೀ ಹುಲಿ ಮಸಣಿಕಮ್ಮ ದೇವಸ್ಥಾನದ ಸಮಿತಿ ಅಧ್ಯಕ್ಷ ಅರುಣ, ಪ್ರಧಾನ ಕಾರ್ಯದರ್ಶಿ ಸೂರ್ಯ, ಸಹ ಕಾರ್ಯದರ್ಶಿ ಸತೀಶ, ಖಜಾಂಚಿ ಬಿ.ಬಿ. ಜಿನ್ನಪ್ಪ, ಗೌರವ ಅಧ್ಯಕ್ಷ ರಾಜ ಹಾಗೂ ಸದಸ್ಯರು ಹಾಜರಿದ್ದರು.