ಮಡಿಕೇರಿ, ಜೂ. ೫: ಕೊಡಗು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ ಜಿಲ್ಲೆಗಳನ್ನು ಒಳಗೊಂಡ ಕರ್ನಾಟಕ ವಿಧಾನ ಪರಿಷತ್ತಿನ ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ತಾ. ೬ ರಂದು (ಇಂದು) ಪ್ರಕಟವಾಗಲಿದೆ.

ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ತಾ. ೩ ರಂದು ನೈಋತ್ಯ ಕ್ಷೇತ್ರದ ಚುನಾವಣೆ ನಡೆದಿತ್ತು. ರಾಜಕೀಯ ಪಕ್ಷಗಳ ಚಿಹ್ನೆಯಡಿ ಚುನಾವಣೆ ನಡೆಯದಿದ್ದರೂ, ಮೇಲ್ಮನೆ ಪ್ರತಿನಿಧಿ ಆಗುವ ಕಾರಣಕ್ಕೆ ಈ ಚುನಾವಣೆ ರಾಜಕೀಯ ಪಕ್ಷಗಳಿಗೆ ಮಹತ್ವವಾಗಿದೆ.

ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ನಡುವಿನ ನೇರ ಹಣಾಹಣಿ ಈ ಚುನಾವಣೆಯಲ್ಲಿ ಕಂಡು ಬಂದಿದೆ. ಜೊತೆಗೆ ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆ ಪದವೀಧರ ಕ್ಷೇತ್ರದಲ್ಲಿ ಪಕ್ಷೇತರರಾಗಿ ಸ್ಪರ್ಧೆ ಮಾಡಿರುವುದು ರೋಚಕತೆ ಸೃಷ್ಟಿಸಿದೆ.

ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್‌ನಿAದ ಆಯನೂರು ಮಂಜುನಾಥ್, ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಡಾ. ಧನಂಜಯ ಸರ್ಜಿ, ಪಕ್ಷೇತರರಾಗಿ ಮಾಜಿ ಶಾಸಕ ಕೆ. ರಘುಪತಿ ಭಟ್, ಜಿ.ಸಿ. ಪಟೇಲ್, ದಿನಕರ ಉಳ್ಳಾಲ್, ಎಸ್.ಪಿ. ದಿನೇಶ್, ಬಿ. ಮಹಮ್ಮದ್ ತುಂಬೆ, ಡಾ. ಶೇಖ್ ಬಾವ, ಜಿ.ಆರ್. ಷಡಾಕ್ಷರಪ್ಪ, ಷಹಾರಾಜ್ ಮುಜಾಹಿದ್ ಸಿದ್ದಿಕ್ಕಿ ಸ್ಪರ್ಧೆ ಮಾಡಿದ್ದಾರೆ.

ಶಿಕ್ಷಕರ ಕ್ಷೇತ್ರಕ್ಕೆ ಕಾಂಗ್ರೆಸ್‌ನಿAದ ಕೆ.ಕೆ. ಮಂಜುನಾಥ್ ಕುಮಾರ್ ಹಾಗೂ ಮೈತ್ರಿ ಅಭ್ಯರ್ಥಿಯಾಗಿ ಎಸ್.ಎಲ್. ಭೋಜೇಗೌಡ ಕಣದಲ್ಲಿದ್ದಾರೆ. ಪಕ್ಷೇತರರಾಗಿ ಡಾ. ಅರುಣ್ ಹೊಸಕೊಪ್ಪ, ಡಾ. ನರೇಶ್ಚಂದ್ ಹೆಗ್ಡೆ, ನಂಜೇಶ್ ಬೆಣ್ಣೂರು, ಟಿ. ಭಾಸ್ಕರ್ ಶೆಟ್ಟಿ, ಕೆ.ಕೆ. ಮಂಜುನಾಥ್ ಕುಮಾರ್, ಡಾ. ಎಸ್.ಆರ್. ಹರೀಶ್ ಆಚಾರ್ಯ ಕಣದಲಿದ್ದಾರೆ. ಬೆಳಿಗ್ಗೆ ೮ ಗಂಟೆಗೆ ಪ್ರಕ್ರಿಯೆ ಆರಂಭಗೊಳ್ಳಲಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶ ಹೊರಬೀಳಲಿದೆ. ಮೈಸೂರಿನಲ್ಲಿ ಈ ಸಂಬAಧ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.