ಬೆಂಗಳೂರು, ಜೂ. ೧೧: ಬೆಂಗಳೂರಿನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಗೌಡ ಸೇರಿದಂತೆ ೧೩ ಮಂದಿ ಆರೋಪಿಗಳನ್ನು ಮ್ಯಾಜಿಸ್ಟೆçÃಟ್ ಕೋರ್ಟ್ ೬ ದಿನ ಪೊಲೀಸ್ ಕಸ್ಟಡಿಗೆ ನೀಡಿದೆ. ರೇಣುಕಾಸ್ವಾಮಿ ಅಪಹರಣ, ಕೊಲೆ ಪ್ರಕರಣಕ್ಕೆ ಸಂಬAಧಿಸಿದAತೆ ಪವಿತ್ರಾ ಗೌಡ ಪ್ರಮುಖ ಆರೋಪಿಯಾಗಿದ್ದರೆ. ದರ್ಶನ್ ಎರಡನೇ ಆರೋಪಿಯಾಗಿದ್ದಾರೆ. ಬಂಧಿತ ೧೩ ಆರೋಪಿಗಳಿಗೆ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿದ ಪೊಲೀಸರು ನಂತರ ಬೆಂಗಳೂರಿನ ಮ್ಯಾಜಿಸ್ಟೆçÃಟ್ ಕೋರ್ಟ್ ಮುಂದೆ ಹಾಜರುಪಡಿಸಿದರು.

ಪ್ರಕರಣದ ವಿಚಾರಣೆ ನಡೆಸಿದ ಮ್ಯಾಜಿಸ್ಟೆçÃಟ್ ಕೋರ್ಟ್ನ ನ್ಯಾಯಮೂರ್ತಿ ವಿಶ್ವನಾಥ ಗೌಡರ್ ಅವರು, ನಟ ದರ್ಶನ್, ಪವಿತ್ರ ಗೌಡ, ವಿ. ವಿನಯ್, ಆರ್. ನಾಗರಾಜು, ಎಂ. ಲಕ್ಷö್ಮಣ್, ಎಸ್. ಪ್ರದೋಶ್, ಕೆ. ಪವನ್, ದೀಪಕ್ ಕುಮಾರ್, ನಂದೀಶ್, ಕಾರ್ತಿಕ್, ನಿಖಿಲ್ ನಾಯಕ್, ಕೇಶವಮೂರ್ತಿ, ರಾಘವೇಂದ್ರ ಅಲಿಯಾಸ್ ರಾಘು ಎಲ್ಲಾ ಆರೋಪಿಗಳನ್ನು ೬ ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.

ಕೊಲೆ ಪ್ರಕರಣಕ್ಕೆ ಸಂಬAಧಿಸಿದAತೆ ಅಪಹರಣ ಮಾಡಿದ ಸ್ಥಳ, ಕೊಲೆಯಾದ ಸ್ಥಳ, ಶವ ಎಸೆದ ಜಾಗಗಳಲ್ಲಿ ಸ್ಥಳ ಮಹಜರು ನಡೆಸಬೇಕಿದ್ದು, ಹೀಗಾಗಿ ೧೪ ದಿನಗಳ ಕಾಲ ಆರೋಪಿಗಳನ್ನು ಕಸ್ಟಡಿಗೆ ನೀಡುವಂತೆ ಪೊಲೀಸರು ಕೇಳಿದ್ದರು. ಇದಕ್ಕೆ ದರ್ಶನ್ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದು, ಪೊಲೀಸ್ ಕಸ್ಟಡಿಗೆ ನೀಡುವ ಅಗತ್ಯವಿಲ್ಲ ಎಂದು ವಾದಿಸಿದ್ದರು.