ಮುಳ್ಳೂರು, ಜೂ. ೧೬ : ಸಮೀಪದ ಶನಿವಾರಸಂತೆ ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ಶಾಲೆಯಲ್ಲಿ ೨೦೨೪-೨೫ನೇ ಶೈಕ್ಷಣಿಕ ಸಾಲಿನಲ್ಲಿ ಶಿಕ್ಷಣದ ಪ್ರಾಥಮಿಕ ಹಂತವಾದ ಪಿಕೆಜಿ, ಎಲ್ಕೆಜಿ ಮತ್ತು ಯುಕೆಜಿ ತರಗತಿಗಳಿಗೆ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮ ನಡೆಯಿತು.
ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೋಷಕರ ಸಮ್ಮುಖದಲ್ಲಿ ಅಕ್ಷರಾಭ್ಯಾಸ ಮಾಡಿಸಲಾಯಿತು. ಪುರೋಹಿತರಾದ ಹೆಚ್.ಎನ್. ಸತ್ಯನಾರಾಯಣ ನೇತೃತ್ವದಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ನಡೆಯಿತು. ಅಕ್ಷರಾಭ್ಯಾಸ ಕಾರ್ಯಕ್ರಮ ಮೊದಲು ಗಣಪತಿ ಮತ್ತು ಶಾರದ ಪೂಜೆಯನ್ನು ನೆರವೇರಿಸಲಾಯಿತು. ನಂತರ ವಿದ್ಯಾರ್ಥಿಗಳಿಗೆ ಬಾಳೆ ಎಲೆಯಲ್ಲಿ ಓಂಕಾರವನ್ನು ಹಾಗೂ ಶ್ರೀಕಾರವನ್ನು ಬರೆಸಲಾಯಿತು. ಈ ಸಂದರ್ಭ ವಿದ್ಯಾಸಂಸ್ಥೆ ಪ್ರಾಂಶುಪಾಲೆ ಡಿ. ಸುಜಲಾದೇವಿ, ಶಾಲೆಯ ಶಿಕ್ಷಕರು, ಪೋಷಕರು ಹಾಜರಿದ್ದರು.