ರೇಣುಕಾಸ್ವಾಮಿ ಹತ್ಯೆ ಪ್ರಕರಣ-ತನಿಖೆ ಚುರುಕು
ಚಿತ್ರದುರ್ಗ, ಜೂ. ೧೬: ನಟ ದರ್ಶನ್ ತೂಗುದೀಪ ಮತ್ತು ಅವರ ಆಪ್ತೆ ಪವಿತ್ರಾ ಗೌಡ ಪ್ರಮುಖ ಆರೋಪಿಗಳಾಗಿರುವ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರ ತಂಡವು ಭಾನುವಾರ ಸಂತ್ರಸ್ತನ ಅಪಹರಣಕ್ಕೆ ಬಳಸಲಾಗಿದ್ದ ಕಾರನ್ನು ವಶಪಡಿಸಿಕೊಂಡಿದೆ. ಆರೋಪಿಗಳಲ್ಲಿ ಒಬ್ಬನಾದ ರವಿ ಎಂಬಾತ ಚಿತ್ರದುರ್ಗ ಜಿಲ್ಲೆಯ ಅಯ್ಯನಹಳ್ಳಿ ಗ್ರಾಮದ ಮನೆಯೊಂದರಲ್ಲಿ ಕಾರನ್ನು ನಿಲ್ಲಿಸಿದ್ದ. ವಾಹನವನ್ನು ವಶಪಡಿಸಿಕೊಂಡು ಮುಂದಿನ ಕ್ರಮಕೈಗೊಳ್ಳಲಾಗಿದೆ. ಪೊಲೀಸರು ರವಿ ಕುಟುಂಬದವರನ್ನು ವಿಚಾರಣೆಗೊಳಪಡಿಸಿ ಕಾರಿನಲ್ಲಿದ್ದ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕೊಲೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣದಲ್ಲಿ ಎ೧ ಆರೋಪಿಯಾಗಿರುವ ನಟ ದರ್ಶನ್ ಗೆಳತಿ ಪವಿತ್ರಾಗೌಡರ ಮ್ಯಾನೇಜರ್ನನ್ನು ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ೧೬ ಮಂದಿ ಬಂಧನವಾಗಿದ್ದು, ಪವಿತ್ರಾ ಗೌಡ ಮ್ಯಾನೇಜರ್ ದೇವರಾಜ್ನನ್ನು ಮೈಸೂರು ರಸ್ತೆಯಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಅಂತೆಯೇ ಪವಿತ್ರಾ ಗೌಡ ಮನೆಯಲ್ಲಿ ಪೊಲೀಸರು ಮಹಜರು ನಡೆಸಿದ್ದಾರೆ.
ಗುಂಡಿಕ್ಕಿ ರೌಡಿಶೀಟರ್ ಹತ್ಯೆ
ವಿಜಯಪುರ, ಜೂ. ೧೬: ಭೀಮಾ ತೀರದಲ್ಲಿ ಮತ್ತೆ ಗುಂಡಿನ ದಾಳಿ ನಡೆದಿದ್ದು ದುಷ್ಕರ್ಮಿಗಳ ದಾಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಕೊಲೆಯಾಗಿದೆ. ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ನೀವರಗಿ ರಸ್ತೆಯಲ್ಲಿ ಈ ದಾಳಿ ನಡೆದಿದ್ದು, ರೌಡಿಶೀಟರ್ ಅಶೋಕ ಮಲ್ಲಪ್ಪ ಗಂಟಗಲ್ಲಿ ಎಂಬಾತನನ್ನು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಕೊಲೆಗೈದಿದ್ದಾರೆ. ಅಶೋಕ ಮಲ್ಲಪ್ಪ ಗಂಟಗಲ್ಲಿ ಮನೆ ಬಳಿ ಇದ್ದಾಗ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ರೌಡಿಶೀಟರ್ನ ಕೊಲ್ಲಲಾಗಿದೆ. ಮನೆಯಿಂದ ಚಟಚಟಣ ಪಟ್ಟಣಕ್ಕೆ ಆಗಮಿಸುತ್ತಿದ್ದ ವೇಳೆ ಹಂತಕರು ದಾಳಿ ಮಾಡಿದ್ದಾರೆ. ಅಶೋಕ ಬೆನ್ನಿಗೆ ಮೂರಕ್ಕೂ ಅಧಿಕ ಗುಂಡಿಗಳು ತಾಗಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಪೊಲೀಸ್ ಮೂಲಗಳ ಪ್ರಕಾರ ಮೃತ ಅಶೋಕ ಮಲ್ಲಪ್ಪ ಗಂಟಗಲ್ಲಿ ಕೂಡ ಸ್ಥಳೀಯವಾಗಿ ನಟೋರಿಯಸ್ ಆಗಿದ್ದ. ಕೊಲೆ ಹಾಗೂ ಇತರೆ ಕೇಸ್ಗಳಲ್ಲಿ ಅಪರಾಧಿಯಾಗಿದ್ದ. ಇತ್ತೀಚೆಗೆ ಜೈಲಿನಿಂದ ಪೆರೋಲ್ ಮೇಲೆ ಹೊರಬಂದಿದ್ದ ಈತನನ್ನು ಹಳೆ ದ್ವೇಷದಿಂದ ಕೊಲೆ ಮಾಡಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಕೊಲೆಗೀಡಾದ ಅಶೋಕ ಪತ್ನಿ ಚಡಚಣ ಪಟ್ಟಣದ ವಾರ್ಡ್ ನಂ. ೨ರ ಬಿಜೆಪಿ ಸದಸ್ಯೆ.
ಸರ್ಕಾರದ ದುರಾಡಳಿತ ವಿರುದ್ಧ ಜನ ದಂಗೆ ಏಳಬೇಕು : ಹೆಚ್.ಡಿ.ಕೆ.
ಮಂಡ್ಯ, ಜೂ. ೧೬: ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಪ್ರತಿಭಟನೆ ಮಾಡುವುದಕ್ಕಿಂತ, ರಾಜ್ಯ ಸರ್ಕಾರದ ದುರಾಡಳಿತ ವಿರುದ್ಧ ಜನ ದಂಗೆ ಏಳಬೇಕು ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು. ಪಂಚ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಲು ಬೆಲೆ ಏರಿಕೆ ಮಾಡಿರುವುದಾಗಿ ಕಾಂಗ್ರೆಸ್ ಸಚಿವರೇ ಒಪ್ಪಿಕೊಂಡಿದ್ದಾರೆ. ಜನರಿಂದಲೇ ದುಡ್ಡು ವಸೂಲಿ ಮಾಡಿ, ಜನರಿಗೆ ಹಣ ನೀಡಲು ಮುಂದಾಗಿದ್ದಾರೆ. ಈ ಬಗ್ಗೆ ಜನ ಪ್ರತಿಭಟಿಸುವ ಮೂಲಕ ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡಬೇಕು ಎಂದರು.
‘ಕಾಂಗ್ರೆಸ್ ಸಾಹಿತಿ, ವಿದ್ವಾಂಸರನ್ನು ಗುಲಾಮರನ್ನಾಗಿಸಿಕೊಂಡಿದೆ’
ಬೆAಗಳೂರು, ಜೂ. ೧೬: ಕಾಂಗ್ರೆಸ್ ಸರ್ಕಾರ ಸಾಹಿತಿಗಳು ಮತ್ತು ವಿದ್ವಾಂಸರನ್ನು ತನ್ನ ಧೋರಣೆಯ ಗುಲಾಮರನ್ನಾಗಿಸಿಕೊಂಡಿದೆ ಎಂದು ಶಾಸಕ ಹಾಗೂ ಬಿಜೆಪಿ ಪ್ರಧಾನಕಾರ್ಯದರ್ಶಿ ವಿ.ಸುನಿಲ್ಕುಮಾರ್ ಕಿಡಿಕಾರಿದ್ದಾರೆ. ಸಾಹಿತ್ಯ-ಸಂಸ್ಕೃತಿ ಹಾಗೂ ಸೃಜನಶೀಲ ಕ್ಷೇತ್ರ ರಾಜಕೀಯ ಒತ್ತಡದಿಂದ ಅತೀತರಾಗಿರಬೇಕು ಎಂದು ಪ್ರತಿಪಾದಿಸುತ್ತಿದ್ದ ಅನೇಕ ಪ್ರಬುದ್ಧರು ಸಭೆಯೊಂದರಲ್ಲಿ ಭಾಗವಹಿಸಿ ಹಾದಿಬೀದಿಯಲ್ಲಿ ಗೂಂಡಾಗಿರಿ ನಡೆಸುತ್ತಿದ್ದ ನಲಪಾಡ್ ಎದುರು ಕೈಕಟ್ಟಿ ನಿಂತಿದ್ದು ಅಸಹ್ಯದ ಪರಮಾವಧಿ ಎಂದು ಅವರು ಟೀಕಿಸಿದ್ದಾರೆ. ನಾಡಿನ ಸಾಹಿತ್ಯ, ಸಂಗೀತ, ಕನ್ನಡ-ಸಂಸ್ಕೃತಿ, ಜಾನಪದ, ಯಕ್ಷಗಾನ, ಶಿಲ್ಪಕಲೆ ಸೇರಿ ವಿವಿಧ ಅಕಾಡೆಮಿಗಳ ಅಧ್ಯಕ್ಷರು ಹಾಗೂ ಸದಸ್ಯರನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಕಚೇರಿಗೆ ಕರೆಸಿಕೊಂಡು ಇಂತಹ ಹುದ್ದೆಗಳು ರಾಜಕಾರಣಕ್ಕೆ ಮೆಟ್ಟಿಲು ಎಂಬ ಸಲಹೆಯನ್ನೂ ನೀಡಿದ್ದಾರೆ. ಕರೆಸಿಕೊಂಡವರು ಮತ್ತು ಬಂದವರು ಇಬ್ಬರಿಗೂ ನಾಚಿಗೆ ಆಗಬೇಕು ಎಂದು ಹರಿಹಾಯ್ದಿದ್ದಾರೆ. ಅಧಿಕಾರಿಗಳನ್ನು ಆಳುವ ಸರ್ಕಾರದ ಆಳಾಗಿ ಮಾಡಿಕೊಂಡಿದ್ದ ರಾಜ್ಯ ಸರ್ಕಾರ, ಇದೀಗ ಸಾಹಿತಿಗಳು ಹಾಗೂ ವಿದ್ವಾಂಸರನ್ನು ತನ್ನ ಧೋರಣೆಯ ಗುಲಾಮರನ್ನಾಗಿಸಿಕೊಂಡಿದೆ. ಅಕಾಡೆಮಿಗಳ ಸಭೆಯನ್ನು ವಿಧಾನಸೌಧ ಅಥವಾ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಸಿ ಸಂವಾದ ನಡೆಸಿದ್ದರೆ ಒಂದು ಲೆಕ್ಕ. ಆದರೆ, ಕೆಪಿಸಿಸಿ ಕಚೇರಿಯಲ್ಲಿ... ದೊಡ್ಡವರೆಲ್ಲ ಜಾಣರಲ್ಲ... ಬಿತ್ತಿದ್ದೇ ಬೆಳೆಯತ್ತಿದೆ. ಅನುಭವಿಸಿ ಎಂದು ಹೇಳಿದ್ದಾರೆ.
ಇವಿಎಂ ‘ಬ್ಲಾö್ಯಕ್ಬಾಕ್ಸ್’ ಇದ್ದಂತೆ - ರಾಹುಲ್
ನವದೆಹಲಿ, ಜೂ. ೧೬: ಭಾರತದಲ್ಲಿ ವಿದ್ಯುನ್ಮಾನ ಮತಯಂತ್ರಗಳು (ಇವಿಎಂ) ‘ಬ್ಲ್ಯಾಕ್ ಬಾಕ್ಸ್' ಇದ್ದಂತೆ. ಅವುಗಳ ಪರಿಶೀಲನೆಗೆ ಯಾರಿಗೂ ಅವಕಾಶ ನೀಡಲಾಗುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ. ಈ ಕುರಿತು ‘ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಅವರು, ಭಾರತದ ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ. ಶಿವಸೇನಾ ಅಭ್ಯರ್ಥಿಯ ಸಂಬAಧಿ ಯೊಬ್ಬ, ವಾಯವ್ಯ ಮುಂಬೈ ಕ್ಷೇತ್ರದಿಂದ ೪೮ ಮತಗಳಿಂದ ಆಯ್ಕೆಯಾಗಿದ್ದು, ಅವರ ಬಳಿ ಇವಿಎಂ ತೆರೆಯಬಲ್ಲ ಫೋನ್ ಇದೆ ಎಂಬುದರ ಕುರಿತ ಮಾಧ್ಯಮ ವರದಿಯನ್ನು ಸಹ ಅವರು ‘ಎಕ್ಸ್' ಖಾತೆಯಲ್ಲಿ ಹಂಚಿಕೊAಡಿದ್ದಾರೆ. ಅಲ್ಲದೇ, ಇವಿಎಂಗಳನ್ನು ತೆಗೆದು ಹಾಕಬೇಕು ಎಂಬುದಾಗಿ ಉದ್ಯಮಿ ಇಲಾನ್ ಮಸ್ಕ್ ಪ್ರತಿಪಾದಿಸಿದ್ದು, ಅವರ ಮಾತು ಗಳಿರುವ ಪೋಸ್ಟ್ ಅನ್ನು ಸಹ ರಾಹುಲ್ ಗಾಂಧಿ ಹಂಚಿಕೊAಡಿದ್ದಾರೆ. ಸಂಬAಧಿಸಿದ ಸಂಸ್ಥೆಗಳಲ್ಲಿ ಉತ್ತರದಾಯಿತ್ವದ ಕೊರತೆ ಇದ್ದಾಗ, ಪ್ರಜಾಪ್ರಭುತ್ವ ವ್ಯವಸ್ಥೆ ಎಂಬುದು ಕಪಟ ಎನಿಸುತ್ತದೆ ಹಾಗೂ ವಂಚನೆಗೆ ಅವಕಾಶ ಮಾಡಿಕೊಡುತ್ತದೆ ಎಂದೂ ರಾಹುಲ್ ಗಾಂಧಿ ಹೇಳಿದ್ದಾರೆ.
ನೀಟ್ ಪರೀಕ್ಷೆಯಲ್ಲಿ ಅಕ್ರಮಗಳು ಬೆಳಕಿಗೆ-ಧರ್ಮೇಂದ್ರ ಪ್ರಧಾನ್
ನವದೆಹಲಿ, ಜೂ. ೧೬: ನೀಟ್ ಪರೀಕ್ಷೆಗೆ ಸಂಬAಧಿಸಿದAತೆ ಕೆಲವು ಅಕ್ರಮಗಳು ಬೆಳಕಿಗೆ ಬಂದಿವೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಭಾನುವಾರ ಹೇಳಿದ್ದಾರೆ. ಸುಪ್ರೀಂಕೋರ್ಟ್ನ ಶಿಫಾರಸಿನ ಮೇರೆಗೆ ೧,೫೬೩ ಅಭ್ಯರ್ಥಿಗಳಿಗೆ ಮರು ಪರೀಕ್ಷೆ ನಡೆಸಲು ಆದೇಶ ನೀಡಲಾಗಿದೆ. ಎರಡು ಸ್ಥಳಗಳಲ್ಲಿ ಕೆಲವು ಅಕ್ರಮಗಳು ಬೆಳಕಿಗೆ ಬಂದಿವೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಲಿದೆ ಎಂದು ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಭರವಸೆ ನೀಡಿದರು. ರಾಷ್ಟಿçÃಯ ಪರೀಕ್ಷಾ ಸಂಸ್ಥೆಯಲ್ಲಿ (ಎನ್ಟಿಎ) ಸುಧಾರಣೆಯ ಅಗತ್ಯವಿದೆ. ಸಂಸ್ಥೆಯ ಹಿರಿಯ ಅಧಿಕಾರಿಗಳು ತಪ್ಪಿತಸ್ಥರೆಂದು ಕಂಡುಬAದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಧಾನ್ ಎಚ್ಚರಿಕೆ ನೀಡಿದರು.
ಪಲ್ಟಿಯಾದ ದೋಣಿ - ೬ ಮಂದಿ ನಾಪತ್ತೆ
ಪಾಟ್ನಾ, ಜೂ. ೧೬: ೧೭ ಮಂದಿ ಪ್ರಯಾಣಿಸುತ್ತಿದ್ದ ದೋಣಿಯೊಂದು ಗಂಗಾ ನದಿಯಲ್ಲಿ ಪಲ್ಟಿಯಾಗಿದೆ. ಬಿಹಾರದ ರಾಜಧಾನಿ ಪಾಟ್ನಾದ ಬಾರ್ಹ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಅದೃಷ್ಟವಶಾತ್ ೧೧ ಮಂದಿ ಈಜಿ ದಡ ಸೇರಿದ್ದರೆ ಆರು ಮಂದಿ ನಾಪತ್ತೆಯಾಗಿದ್ದಾರೆ. ನದಿ ಮಧ್ಯೆಯಲ್ಲಿ ದೋಣಿ ಮುಳುಗಿದ್ದು ತಕ್ಷಣ ಎಲ್ಲರೂ ನದಿಯಲ್ಲಿ ಮುಳುಗಲು ಪ್ರಾರಂಭಿಸಿದರು. ಇಂತರ ಸಂದರ್ಭದಲ್ಲೂ ಹೇಗೋ ೧೧ ಜನ ಈಜಿ ದಡ ಸೇರಿದ್ದರೆ ಇನ್ನೂ ಆರು ಮಂದಿ ನಾಪತ್ತೆಯಾಗಿದ್ದಾರೆ. ಗಂಗಾ ದಸರಾ ನಿಮಿತ್ತ ಕೆಲವರು ಸ್ನಾನ ಮಾಡಲು ನದಿಗೆ ಅಡ್ಡಲಾಗಿ ದೋಣಿಯಲ್ಲಿ ಹೋಗುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ವೇಳೆ ಉಮಾ ಘಾಟ್ ಬಳಿ ದೋಣಿ ಪಲ್ಟಿಯಾಗಿದೆ. ದುರಂತದಲ್ಲಿ ಆರು ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ತಂಡ ಸ್ಥಳಕ್ಕೆ ತಲುಪಿದೆ ಎಂದು ಮೂಲಗಳು ತಿಳಿಸಿವೆ.