ಮಡಿಕೇರಿ, ಜೂ. ೧೬: ಕರ್ನಾಟಕ ರಾಜ್ಯ ಸರ್ಕಾರದ ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ, ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು(೬ ರಿಂದ ೧೦ನೇ ತರಗತಿ)ಗಳಿಗೆ ವಾರ್ಷಿಕ ರೂ. ೧೦ ಸಾವಿರದಂತೆ ಪ್ರೋತ್ಸಾಹಿಕ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡುವ ಯೋಜನೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಜಾರಿಯಲ್ಲಿದ್ದು, ಈ ಯೋಜನೆಯನ್ವಯ ಪ್ರಸ್ತುತ ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರುವ ಕ್ರೀಡಾಪಟುಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು.

ಆಸಕ್ತ ಕ್ರೀಡಾಪಟುಗಳು ಇಲಾಖಾ ಅಧಿಕೃತ ಜಾಲತಾಣ hಣಣಠಿ://sevಚಿsiಟಿಜhuseಡಿviಛಿes.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಆನ್‌ಲೈನ್‌ನಲ್ಲಿ ೨೦೨೪ರ ತಾ. ೩೦ ಒಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ೨೦೨೪-೨೫ನೇ ಸಾಲಿನಲ್ಲಿ ವಿದ್ಯಾರ್ಥಿಯಾಗಿದ್ದು, ಮಾಧ್ಯಮಿಕ ಅಥವಾ ಪ್ರೌಢಶಾಲೆ(೬ ರಿಂದ ೧೦ನೇ ತರಗತಿ)ಯಲ್ಲಿ ಓದುತ್ತಿರಬೇಕು. ಅರ್ಜಿದಾರರು ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೋಂದಾಯಿತವಾದ ಕ್ರೀಡಾ ಸಂಸ್ಥೆಗಳು ೨೦೨೩ ರ ಏಪ್ರಿಲ್ ೧ ರಿಂದ ೨೦೨೪ ರ ಮಾರ್ಚ್ ೩೧ ರವರೆಗೆ ನಡೆಸಿದ ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸಿರುವ ರಾಷ್ಟಿçÃಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿರಬೇಕು. ಅಂದರೆ ೨೦೨೩ ರ ಏಪ್ರಿಲ್ ೧ ರಿಂದ ೨೦೨೪ ರ ಮಾರ್ಚ್ ೩೧ ರ ಅವಧಿಯಲ್ಲಿ ಸಾಧನೆಯನ್ನು ಮಾತ್ರ ಪರಿಗಣಿಸಲಾಗುವುದು.

ರಾಷ್ಟಿçÃಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು. ರಾಷ್ಟಿçÃಯ ಶಾಲಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು. ಒಬ್ಬ ಕ್ರೀಡಾಪಟು ಒಂದಕ್ಕಿAತ ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿದ್ದರೂ ಸಹ ವಾರ್ಷಿಕ ಒಂದೇ ವಿದ್ಯಾರ್ಥಿ ವೇತನದ ಮೊತ್ತಕ್ಕೆ ಮಾತ್ರ ಅರ್ಹರಿರುತ್ತಾರೆ. ವಿದ್ಯಾರ್ಥಿ ವೇತನ ಮೊತ್ತವನ್ನು ವಾರ್ಷಿಕ ರೂ. ೧೦ ಸಾವಿರ ಮಾತ್ರ ಮಂಜೂರು ಮಾಡಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ. ವಿಸ್ಮಯಿ ತಿಳಿಸಿದ್ದಾರೆ.