ಪೊನ್ನಂಪೇಟೆ, ಜೂ. ೧೬: ಗೋಣಿಕೊಪ್ಪಲು ಕಾವೇರಿ ಕಾಲೇಜಿನ ೨೦೨೩-೨೪ ನೇ ಸಾಲಿನ ರಾಷ್ಟಿçÃಯ ಸೇವಾ ಯೋಜನೆ ಘಟಕದ ಸಮಾರೋಪ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಬಾಳುಗೋಡು ಏಕಲವ್ಯ ಕಾಲೇಜು ಪ್ರಾಂಶುಪಾಲ ಡಾ. ಐ.ಎಂ. ದಿಲನ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳನ್ನು ರೂಪಿಸುವಲ್ಲಿ ಎನ್.ಎಸ್.ಎಸ್. ಪಾತ್ರ ಮಹತ್ವದ್ದಾಗಿದೆ. ಶಿಸ್ತು ಮತ್ತು ಸೇವಾ ಮನೋಭಾವನೆ, ಪರಿಸರದ ಕುರಿತು ಕಾಳಜಿಯನ್ನು ಬೆಳೆಸಿಕೊಳ್ಳಲು ಎನ್.ಎಸ್.ಎಸ್. ಪ್ರೇರೇಪಿಸುವುದರ ಜೊತೆಗೆ ಪ್ರತಿಭೆಗೆ ಉತ್ತಮ ವೇದಿಕೆ ಒದಗಿಸಿಕೊಡುತ್ತದೆ ಎಂದರು. ಎನ್.ಎಸ್.ಎಸ್.ನಲ್ಲಿ ಕಲಿತ ಉತ್ತಮ ಅಂಶಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಸ್ವಾರ್ಥರಹಿತ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದ ಪ್ರಾಂಶುಪಾಲ ಡಾ. ಎಂ.ಬಿ. ಕಾವೇರಿಯಪ್ಪ ಮಾತನಾಡಿ, ರಾಷ್ಟಿçÃಯ ಸೇವಾ ಯೋಜನೆಯು ವಿದ್ಯಾರ್ಥಿಗಳು ವೇದಿಕೆಯಲ್ಲಿ ನಿಂತು ಮಾತನಾಡುವ ಧೈರ್ಯವನ್ನು ಬೆಳೆಸುವುದರ ಜೊತೆಗೆ, ಬದುಕಿನಲ್ಲಿ ಬರುವ ಸವಾಲುಗಳನ್ನು ಎದುರಿಸಲು ಬೇಕಾದ ವಿಶ್ವಾಸವನ್ನು ವಿದ್ಯಾರ್ಥಿಗಳಲ್ಲಿ ತುಂಬುತ್ತದೆ. ವಿದ್ಯಾರ್ಥಿಗಳು ಮುಂದಿನ ಪೀಳಿಗೆಯ ಉತ್ತಮ ಭವಿಷ್ಯಕ್ಕಾಗಿ ಅತ್ಯಂತ ಅಗತ್ಯವಾಗಿರುವ ಪರಿಸರದ ಬಗ್ಗೆ ಕಾಳಜಿಯನ್ನು ಬೆಳೆಸಿಕೊಂಡು, ಅದರ ಸಂರಕ್ಷಣೆ ಯಲ್ಲಿ ತಮ್ಮನ್ನು ತೊಡಗಿಸಿ ಕೊಳ್ಳಬೇಕು ಎಂದರು. ಐ.ಕ್ಯೂ.ಎ.ಸಿ. ಸಂಚಾಲಕಿ ಡಾ. ನಯನ ತಮ್ಮಯ್ಯ ಮಾತನಾಡಿದರು. ಎನ್.ಎಸ್.ಎಸ್. ಅಧಿಕಾರಿ ಎನ್.ಪಿ. ರೀತಾ ವಾರ್ಷಿಕ ವರದಿ ವಾಚಿಸಿದರು.
ಎನ್.ಎಸ್.ಎಸ್. ಅಧಿಕಾರಿ ಎಂ.ಎನ್. ವನಿತ್ ಕುಮಾರ್ ಬಹುಮಾನ ವಿತರಣೆ ಕಾರ್ಯಕ್ರಮ ನಡೆಸಿಕೊಟ್ಟರು.
ಎನ್.ಎಸ್.ಎಸ್.ನ ಉತ್ತಮ ಹಿರಿಯ ಸ್ವಯಂಸೇವಕ ಪ್ರಶಸ್ತಿಯನ್ನು ದರ್ಶನ್, ಉತ್ತಮ ಹಿರಿಯ ಸ್ವಯಂ ಸೇವಕಿ ಪ್ರಶಸ್ತಿಯನ್ನು ರಶ್ಮಿತ ಪಡೆದುಕೊಂಡರು. ೨೦೨೩-೨೪ನೇ ಸಾಲಿನ ಘಟಕದ ಉತ್ತಮ ಸ್ವಯಂ ಸೇವಕನಾಗಿ ಸೃಜನ್, ಉತ್ತಮ ಸ್ವಯಂ ಸೇವಕಿಯಾಗಿ ಧನ್ಯ ಪ್ರಶಸ್ತಿ ಪಡೆದುಕೊಂಡರು.
ಶಿಸ್ತು ಬದ್ಧ ಸ್ವಯಂಸೇವಕ ಪ್ರಶಸ್ತಿಯನ್ನು ಬೃಂದಾವನ್, ರಿಷು ಕಾವೇರಪ್ಪ ಮತ್ತು ರೋಷನ್ ಪಡೆದುಕೊಂಡರು. ಕಾರ್ಯಕ್ರಮದ ಅಂಗವಾಗಿ ಕಾಲೇಜು ಆವರಣದಲ್ಲಿ ವಿವಿಧ ಹಣ್ಣಿನ ಗಿಡಗಳನ್ನು ನೆಡಲಾಯಿತು.