ಕೂಡಿಗೆ, ಜೂ. ೧೬: ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಅಭಿವೃದ್ಧಿಗೆ ಪೂರಕವಾದ ಅಂಶಗಳ ಕುರಿತು ಮಾತುಕತೆ ನಡೆಸಲಾಯಿತು. ನಂತರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈಗಾಗಲೇ ಕೈಗೊಂಡಿರುವ ಸ್ವಚ್ಛತೆಗೆ ಪೂರಕವಾಗಿ ಮತ್ತು ಮುಂದಿನ ದಿನಗಳಲ್ಲಿ ಮಳೆಗಾಲ ಸಮೀಪಿಸು ತ್ತಿರುವ ಹಿನ್ನೆಲೆ ಕೈಗೊಳ್ಳಬೇಕಾದ ವಿಷಯಗಳ ಬಗ್ಗೆ ಚರ್ಚಿಸಲಾಯಿತು.
೧೫ನೇ ಹಣಕಾಸು ಯೋಜನೆಯ ಕಾಮಗಾರಿಗಳ ಕ್ರಿಯಾ ಯೋಜನೆಯ ಅನುಮೋದನೆ ಮತ್ತು ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸಂಬAಧಿಸಿದAತೆ ಸವಿಸ್ತಾರವಾದ ಚರ್ಚೆಗಳು ನಡೆದವು.
ನಂತರ ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿಯನ್ನು ಸಂಪೂರ್ಣವಾಗಿ ಪೂರ್ಣಗೊಳಿಸಲು ಸಭೆಯಲ್ಲಿ ಹಾಜರಿದ್ದ ಸದಸ್ಯರು ಒತ್ತಾಯ ಮಾಡಿದರು. ಈಗಾಗಲೇ ಕೈಗೊಂಡಿರುವ ಕ್ರಿಯಾ ಯೋಜನೆಯ ಅನುಮೋದನೆ ಕಾಮಗಾರಿಗಳನ್ನು ಪೂರ್ಣಗೊಳಿಸುವ ಬಗ್ಗೆ ವಿಷಯಗಳ ಪ್ರಸ್ತಾವನೆ ನಡೆಸಿ, ಗ್ರಾಮದ ಅಭಿವೃದ್ಧಿಗೆ ಸಂಬAಧಿಸಿದAತೆ ವಿವಿಧ ಯೋಜನೆ ಗಳನ್ನು ತಯಾರಿಸಲು ನಿರ್ಧರಿಸಲಾ ಯಿತು. ಬಾಕಿ ಇರುವ ಮನೆಗಳ ನಿರ್ಮಾಣದ ಬಗ್ಗೆ ಮತ್ತು ವಸತಿ ರಹಿತರಿಗೆ ವಸತಿ ಸೌಲಭ್ಯಗಳನ್ನು ಒದಗಿಸಲು ಈಗಾಗಲೇ ಗುರುತಿಸ ಲಾಗಿರುವ ಜಾಗದ ಬಗ್ಗೆ ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ಅಭಿವೃದ್ಧಿ ಅಧಿಕಾರಿ ಸಂತೋಷ್ ಸರಕಾರ ಹೊಸ ಯೋಜ ನೆಗಳ ಬಗ್ಗೆ ಮಾಹಿತಿ ನೀಡಿದರು. ನಂತರ ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆಗಳ ಬಗ್ಗೆ ಸಮಗ್ರವಾದ ಮಾಹಿತಿಯನ್ನು ನೀಡಿ ಗ್ರಾಮ ಪಂಚಾ ಯಿತಿ ವತಿಯಿಂದ ಕೈಗೊಳ್ಳಲಾಗುವ ಕಾಮಗಾರಿಗಳನ್ನು ಅನುಷ್ಠಾನ ಗೊಳಿಸಲು ಸಂಪೂರ್ಣವಾದ ಮಾಹಿ ತಿಯನ್ನು ನೀಡಿದರು. ಈ ಸಂದರ್ಭ ಉಪಾಧ್ಯಕ್ಷೆ ಶಶಿಕಲಾ ಸೇರಿದಂತೆ ಸದಸ್ಯರು, ಅಭಿವೃದ್ಧಿ ಅಧಿಕಾರಿ ಸಂತೋಷ್ ಹಾಜರಿದ್ದರು.