(ಕೆ.ಎಂ ಇಸ್ಮಾಯಿಲ್ ಕಂಡಕರೆ)
ಮಡಿಕೇರಿ, ಜೂ. ೧೬ : ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಕ್ಷೇತ್ರಗಳ ವಿಂಗಡಣೆ, ಸದಸ್ಯ ಸ್ಥಾನಗಳ ಹೆಚ್ಚಳ ಹೀಗೆ ಹಲವು ಕಾರಣಗಳಿಂದ ರಾಜ್ಯದಲ್ಲಿ ಕಳೆದ ಮೂರು ವರ್ಷಗಳಿಂದ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯನ್ನು ರಾಜ್ಯ ಸರ್ಕಾರ ಮುಂದೂಡುತ್ತಲೇ ಬಂದಿದೆ. ೨೦೨೩ರ ಡಿಸೆಂಬರ್ ತಿಂಗಳಲ್ಲಿ ಚುನಾವಣೆ ನಡೆಸಲು ಹೈಕೋರ್ಟ್ನಲ್ಲಿ ಒಂದು ತಿಂಗಳ ಕಾಲಾವಕಾಶ ಕೇಳಿದ್ದ ಸರ್ಕಾರ ಇದೀಗ ಆರು ತಿಂಗಳು ಕಳೆದರು ಕೂಡ ಚುನಾವಣೆ ನಡೆಸಲು ಮುಂದಾಗಿಲ್ಲ.
ಸ್ಥಳೀಯ ಆಡಳಿತ ಜನಪ್ರತಿನಿಧಿಗಳಿಲ್ಲದೆ ಸಂಪೂರ್ಣ ಮಂಕಾಗಿದ್ದು, ಅಧಿಕಾರಿಗಳೇ ನಿರ್ಣಾಯಕರಾಗಿದ್ದಾರೆ. ಇದೀಗ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಗೆ ಸಂಬAಧಿಸಿದAತೆ ಜೂನ್ ೨೪ರಂದು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದ್ದು, ಒಂದು ವೇಳೆ ರಾಜ್ಯ ಸರ್ಕಾರವು ಮೀಸಲಾತಿ ಪ್ರಕಟಿಸಲು ಒಪ್ಪಿಗೆ ಸೂಚಿಸಿದರೆ, ರಾಜ್ಯ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿ ಪ್ರಕಟಿಸಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುವ ಸಾಧ್ಯತೆ ಇದೆ.
ಹೈಕೋರ್ಟ್ ಹಲವು ಬಾರಿ ಸ್ಥಳೀಯ ಸಂಸ್ಥೆಗಳ ಚುನಾವಣಾ ಸಂಬAಧ ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ್ದು, ಈ ಹಿಂದೆ ಸರ್ಕಾರಕ್ಕೆ ಐದು ಲಕ್ಷ ರೂ ದಂಡ ಕೂಡ ವಿಧಿಸಲಾಗಿತ್ತು. ಇದೀಗ ಹೈಕೋರ್ಟ್ ಚಾಟಿ ಬೀಸುವ ಮುನ್ನ ರಾಜ್ಯ ಸರ್ಕಾರ ಜಿಲ್ಲಾ ಮತ್ತು ತಾಲೂಕು ಪಂಚಾಯತ್ಗಳ ಕ್ಷೇತ್ರವಾರು ಮೀಸಲಾತಿ ಪ್ರಕಟಿಸುವ ಸಾಧ್ಯತೆಗಳಿವೆ.
ತಾ. ೨೪ರಂದು ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯ ಭವಿಷ್ಯ ನಿರ್ಧಾರವಾಗಲಿದೆ. ಈ ಹಿಂದಿನ ಬಿಜೆಪಿ ಸರ್ಕಾರವು ಅವಧಿ ಮುಗಿದ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಕ್ಷೇತ್ರಗಳ ಸಂಖ್ಯೆಯನ್ನು ಹೆಚ್ಚಿಸುವ ತೀರ್ಮಾನ ಮಾಡಲು ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವನ್ನು ರಚಿಸಲಾಗಿತ್ತು. ಚುನಾವಣಾ ಆಯೋಗದಿಂದ ಕ್ಷೇತ್ರಗಳ ಮೀಸಲಾತಿ ಪ್ರಕಟಿಸುವ ಅಧಿಕಾರ ಕಿತ್ತುಕೊಂಡ ರಾಜ್ಯ ಸರ್ಕಾರದ ಕ್ರಮವನ್ನು ಚುನಾವಣಾ ಆಯೋಗವು ಹೈಕೋರ್ಟ್ನಲ್ಲಿ ಪ್ರಶ್ನಿಸಿತ್ತು.
ಅಲ್ಲಿಂದ ಇಲ್ಲಿಯವರೆಗೆ ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗದ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಲೇ ಇದೆ. ೩ಏಳನೇ ಪುಟಕ್ಕೆ
(ಮೊದಲ ಪುಟದಿಂದ) ಬಿಜೆಪಿ ಸರ್ಕಾರದ ಅವಧಿಯಲ್ಲಿ ೨೦೨೩ ಜನವರಿ ತಿಂಗಳಲ್ಲಿ ಸೀಮಾ ನಿರ್ಣಯ ಆಯೋಗವು ಕ್ಷೇತ್ರಗಳ ಪುನರ್ವಿಂಗಡಣೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು.
ಜನವರಿ ತಿಂಗಳಲ್ಲಿ ಪ್ರಕಟಗೊಂಡಿದ್ದ ಕ್ಷೇತ್ರಗಳ ಪುನರ್ವಿಂಗಡಣೆಗೆ ದೊಡ್ಡ ಆಕ್ಷೇಪ ಕೂಡ ವ್ಯಕ್ತವಾಗಿತ್ತು. ನಿವೃತ್ತ ಐಎಎಸ್ ಅಧಿಕಾರಿ ಎಂ.ಲಕ್ಷಿö್ಮÃನಾರಾಯಣ ಆಯೋಗವು ಪ್ರಕಟಿಸಿದ್ದ ಕರಡುಪಟ್ಟಿಯನ್ನು ಬದಲಾಯಿಸಿ ೨೦೨೩ ಮೇ ತಿಂಗಳಲ್ಲಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ಸರ್ಕಾರವು ನಿವೃತ್ತ ಐಎಎಸ್ ಅಧಿಕಾರಿ ಎಂ.ಆರ್ ಕಾಂಬ್ಳೆ ನೇತೃತ್ವದಲ್ಲಿ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವನ್ನು ಮರುರಚನೆ ಮಾಡಿತ್ತು. ಕ್ಷೇತ್ರಗಳ ಪುನರ್ವಿಂಗಡಣೆ, ಸದಸ್ಯ ಸ್ಥಾನಗಳ ಹೆಚ್ಚಳ ಮಾಡಲು ಆರು ತಿಂಗಳ ಸಮಯಾವಕಾಶವನ್ನು ಕೇಳಲಾಗಿತ್ತು.
ಆದರೆ ರಾಜ್ಯ ಸರ್ಕಾರವು ೨೦೨೩ ಡಿಸೆಂಬರ್ ತಿಂಗಳಲ್ಲಿ ಕೊಡಗು ಜಿಲ್ಲೆ ಹೊರತುಪಡಿಸಿ ರಾಜ್ಯದ ಉಳಿದ ೩೦ ಜಿಲ್ಲೆಗಳ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಸದಸ್ಯ ಸ್ಥಾನ ಹಾಗೂ ಆಯಾ ಜಿಲ್ಲೆಗಳ ಸದಸ್ಯ ಸ್ಥಾನಕ್ಕೆ ತಕ್ಕಂತೆ ಮೀಸಲಾತಿ ಪ್ರಕಟಿಸಿತ್ತು. ಆದರೆ ರಾಜ್ಯ ಸರ್ಕಾರವು ಆಯಾ ಕ್ಷೇತ್ರಗಳ ಮೀಸಲಾತಿ ಪ್ರಕಟಿಸಿಲ್ಲ. ರಾಜ್ಯ ಸರ್ಕಾರಕ್ಕೆ ಮೀಸಲಾತಿ ಪ್ರಕಟಿಸಲು ನಿರ್ದೇಶನ ನೀಡುವಂತೆ ಚುನಾವಣಾ ಆಯೋಗವು ಹೈಕೋರ್ಟ್ ಕದತಟ್ಟಿದೆ. ತಾ. ೨೪ರಂದು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದ್ದು, ತಾ. ೨೪ ರಂದು ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯ ಭವಿಷ್ಯ ನಿರ್ಧಾರವಾಗಲಿದೆ.