ಸೋಮವಾರಪೇಟೆ, ಜೂ. ೧೭ : ಪಟ್ಟಣದ ಶ್ರೀ ಸೋಮೇಶ್ವರ ದೇವಾಲಯ ಅಮೃತ ಮಹೋತ್ಸವದ ಸಂಭ್ರಮದಲ್ಲಿದ್ದು, ಇದರ ಅಂಗವಾಗಿ ತಾ. ೨೨ರಿಂದ ೨೪ರವರೆಗೆ ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ಆಯೋಜಿಸಲಾಗಿದೆ. ತಾ.೨೩ರಂದು ನವದುರ್ಗಾ ಚಂಡಿಕಾ ಹೋಮ ನಡೆಯಲಿದೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಾಲಯ ನಿರ್ಮಾಣಗೊಂಡು ೭೫ ವರ್ಷ ಪೂರ್ಣಗೊಂಡ ಹಿನ್ನೆಲೆ ದೇವಾಲಯ ಸಮಿತಿ ನೇತೃತ್ವದಲ್ಲಿ ಬ್ರಾಹ್ಮಣ ಸಮಾಜ, ದೇವಿ ಬಳಗ, ಮಾತಾ ಬಳಗದ ಸಹಕಾರದೊಂದಿಗೆ ವಿಶೇಷ ಪೂಜಾಕಾರ್ಯಗಳನ್ನು ಆಯೋಜಿಸಲಾಗಿದೆ. ತಾ. ೨೨ರಿಂದ ವೇದ ಬ್ರಹ್ಮ ಶ್ರೀ ಎಂ.ವಿ. ಕೃಷ್ಣಮೂರ್ತಿ ಘನಪಾಠಿಗಳು ಮತ್ತು ಚಿತ್ರಕುಮಾರ್ ಭಟ್ ಸಮ್ಮುಖದಲ್ಲಿ ಪೂಜಾ ಕೈಂಕರ್ಯಗಳು ನಡೆಯಲಿವೆ ಎಂದರು.

ತಾ. ೨೨ರಂದು ಸಂಜೆ ೫. ೩೦ ಗಂಟೆಗೆ ಶುದ್ಧಿ ಪುಣ್ಯಃ, ಶ್ರೀ ಗಣಪತಿ ಪೂಜೆ, ಮಹಾ ಸಂಕಲ್ಪ, ಕಲಶಾರಾಧನೆ, ನವದುರ್ಗಾ ಚಂಡಿಕಾ ಪಾರಾಯಣ, ಮಂಡಲ ಆರಾಧನೆ, ಮಹಾ ಮಂಗಳಾರತಿ, ತೀರ್ಥಪ್ರಸಾದ ವಿತರಣೆ ನಡೆಯಲಿದೆ. ತಾ. ೨೩ರಂದು ಬೆಳಿಗ್ಗೆ ೮ ಗಂಟೆ ಯಿಂದ ನª ದುರ್ಗಾ ಚಂಡಿಕಾ ಹೋಮ, ಕನ್ನಿಕಾ ಪೂಜೆ, ನವ ಮುತ್ತೆöÊದೆಯರ ಬಾಗಿನ ಪೂಜೆ, ೧೨.೩೦ಕ್ಕೆ ಪೂರ್ಣಾಹುತಿ, ಆವರಣ ಸೇವೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ನಂತರ ಅನ್ನಸಂತರ್ಪಣೆ, ಸಂಜೆ ೬ ಗಂಟೆಯಿAದ ದೀಪ ದುರ್ಗಾ ನಮಸ್ಕಾರ ಪೂಜೆ ಜರುಗಲಿದೆ ಎಂದು ಶ್ರೀನಿವಾಸ್ ಮಾಹಿತಿ ನೀಡಿದರು.

ತಾ. ೨೪ರಂದು ಬೆಳಿಗ್ಗೆ ೭ ಗಂಟೆಯಿAದ ಶ್ರೀ ಸೋಮೇಶ್ವರ ದೇವರಿಗೆ ಪಂಚಾಮೃತ ಅಭಿಷೇಕ, ಕಲಶಾರಾಧನೆ, ಶತರುದ್ರಾಭಿಷೇಕ, ಏಕಾದಶ ರುದ್ರಹೋಮ, ಮಧ್ಯಾಹ್ನ ಪೂರ್ಣಾಹುತಿ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ೪ ಗಂಟೆಗೆ ಅಮೃತ ಮಹೋತ್ಸವ ಸಮಾರಂಭ ನಡೆಯಲಿದ್ದು, ಅಧ್ಯಕ್ಷತೆಯನ್ನು ದೇವಾಲಯ ಸಮಿತಿ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ ವಹಿಸಲಿದ್ದಾರೆ. ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದರು.

ಮುಖ್ಯ ಭಾಷಣಕಾರರಾಗಿ ಸಾಹಿತಿ ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ ಭಾಗವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಚಿವ ದಿನೇಶ್ ಗುಂಡೂರಾವ್, ಶಾಸಕ ಡಾ. ಮಂತರ್ ಗೌಡ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಅಶೋಕ್ ಹರ‍್ನಳ್ಳಿ, ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಶಕ್ತಿ ದಿನಪತ್ರಿಕೆ ಪ್ರಧಾನ ಸಂಪಾದಕ ಜಿ. ರಾಜೇಂದ್ರ, ಜಿಲ್ಲಾ ಬ್ರಾಹ್ಮಣ ಸಮಾಜ ಅಧ್ಯಕ್ಷೆ ಗೀತಾ ಹರೀಶ್, ಪ್ರಮುಖರಾದ ವಿನೋದ್ ಶಿವಪ್ಪ, ಜಿ.ಸೋಮೇಶ್, ಎಚ್.ಟಿ. ಅನಿಲ್, ರತಿ ನಂದಕುಮಾರ್ ಸೇರಿದಂತೆ ಇತರರು ಭಾಗವಹಿಸ ಲಿದ್ದಾರೆ. ಸಂಜೆ ೬.೩೦ರಿಂದ ಮೈಸೂರಿನ ರಾಘವೇಂದ್ರ ಆಚಾರ್ ಅವರಿಂದ ಭಕ್ತಿ ಗೀತೆ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಗೋಷ್ಠಿಯಲ್ಲಿ ದೇವಾಲಯ ಸಮಿತಿ ಕಾರ್ಯದರ್ಶಿ ಎಸ್.ಡಿ. ವಿಜೇತ್, ನಿರ್ದೇಶಕರಾದ ಶ್ಯಾಮ್‌ಸುಂದರ್, ಎಸ್.ಜೆ. ಜಯಂತ್, ರಾಜೇಶ್ ಪದ್ಮನಾಭ್, ಸಿ.ಎನ್. ಸತೀಶ್ ಅವರುಗಳು ಉಪಸ್ಥಿತರಿದ್ದರು.