ನಾಪೋಕ್ಲು, ಜೂ. ೧೭: ಇಲ್ಲಿಗೆ ಸಮೀಪದ ಹಳೆ ತಾಲೂಕು ಶ್ರೀ ಭಗವತಿ ದೇವಾಲಯದ ಸಮುದಾಯ ಭವನದಲ್ಲಿ ಇಲ್ಲಿಯ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಕುಂಡ್ಯೋಳAಡ ಕುಟುಂಬಸ್ಥರಿAದ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.

ಕುಂಡ್ಯೋಳAಡ ಕೊಡವ ಕೌಟುಂಬಿಕ ಹಾಕಿ ಉತ್ಸವ ೨೦೨೪ ಸಂದರ್ಭ ಒಡೆಯರ್ ಭಾಗವಹಿಸಿದ್ದರು. ಈ ಸಂದರ್ಭ ಚುನಾವಣೆ ನೀತಿ ಸಂಹಿತೆ ಇದ್ದ ಕಾರಣ ಅವರನ್ನು ಗೌರವಿಸಲು ಸಾಧ್ಯವಾಗಲಿಲ್ಲ. ಆದುದರಿಂದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಕುಂಡ್ಯೋಳAಡ ಕುಟುಂಬಸ್ಥರ ಪರವಾಗಿ ಹಾಕಿ ಕಾರ್ನಿವಲ್ ಸಮಿತಿ ಅಧ್ಯಕ್ಷ ಕುಂಡ್ಯೋಳAಡ ರಮೇಶ್ ಮುದ್ದಯ್ಯ, ಖಜಾಂಜಿ ವಿಷು ಪೂವಯ್ಯ, ಕಾರ್ಯದರ್ಶಿ ಬಿಪಿನ್ ಹಾಗೂ ಇತರರು ಕಾರ್ಯಕರ್ತರ ಸಭೆ ಸಂದರ್ಭ ನೆನಪಿನ ಕಾಣಿಕೆ ನೀಡಿ ಗೌರವಿಸಿದರು.

ಈ ಸಂದರ್ಭ ಎಂಎಲ್‌ಸಿ ಮಂಡೆಪAಡ ಸುಜಾ ಕುಶಾಲಪ್ಪ , ಮಾಜಿ ಶಾಸಕ,ಮಾಜಿ ವಿಧಾನಸಭಾ ಸ್ಪೀಕರ್ ಕೆ.ಜಿ. ಬೋಪಯ್ಯ, ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಪ್ರಮುಖರಾದ ಬಿದ್ದಾಟಂಡ ರಮೇಶ್ ಚಂಗಪ್ಪ, ನಾಗೇಶ್ ಕುಂದಲ್ಪಾಡಿ, ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ರೀನಾ ಪ್ರಕಾಶ್, ಯಮುನಾ ಚಂಗಪ್ಪ, ಕುಲ್ಲೇಟಿರ ಗುರುವಪ್ಪ, ಕೇಟೋಳಿರ ಹರೀಶ್ ಪೂವಯ್ಯ, ಶಿವಚಾಳಿಯಂಡ ಜಗದೀಶ್, ಪ್ರತೀಪ ಬಿ.ಎಂ. ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.