ಕಾಂಚನಜುAಗಾ ಎಕ್‌ಪ್ರೆಸ್‌ಗೆ ಗೂಡ್ಸ್ ರೈಲು ಡಿಕ್ಕಿ

ಪಶ್ಚಿಮ ಬಂಗಾಳ, ಜೂ. ೧೭: ಪಶ್ಚಿಮ ಬಂಗಾಳದ ನ್ಯೂ ಜಲೈಗುರಿ ನಿಲ್ದಾಣದ ಬಳಿ ಕಾಂಚನ್‌ಜುAಗಾ ಎಕ್ಸ್ಪ್ರೆಸ್‌ಗೆ ಹಿಂದಿನಿAದ ಗೂಡ್ಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಪೇಸೆÀಂಜರ್ ರೈಲಿನ ಮೂರು ಬೋಗಿಗಳು ಜಖಂ ಆಗಿದ್ದು, ೯ ಮಂದಿ ಸಾವನಪ್ಪಿದ್ದು ಸುಮಾರು ೩೦ ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇಂದು ಬೆಳಿಗ್ಗೆ ೮.೪೫ ರ ಸುಮಾರಿಗೆ ನ್ಯೂ ಜಲ್ಪೈಗುರಿ ಜಂಕ್ಷನ್‌ನ ಮುಂದೆ ಕತಿಹಾರ್ ರೈಲ್ವೆ ವಿಭಾಗದ ರಂಗಪಾಣಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಎಕ್ಸ್ನ ಪೋಸ್ಟ್ನಲ್ಲಿ ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾ ಪ್ರದೇಶದಲ್ಲಿ ಸಂಭವಿಸಿದ ದುರಂತ ರೈಲು ಅಪಘಾತದ ಬಗ್ಗೆ ತಿಳಿದು ಆಘಾತವಾಯಿತು ಎಂದು ತಿಳಿಸಿದ್ದಾರೆ. ರಕ್ಷಣಾ, ಚೇತರಿಕೆ, ವೈದ್ಯಕೀಯ ನೆರವಿಗಾಗಿ ಡಿಎಂ, ಎಸ್ಪಿ, ವೈದ್ಯರು, ಆ್ಯಂಬ್ಯುಲೆನ್ಸ್ಗಳು ಮತ್ತು ವಿಪತ್ತು ತಂಡಗಳು ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ನಡೆಸಿವೆ. ಗಾಯಗೊಂಡ ಪ್ರಯಾಣಿಕರನ್ನು ಸಮೀಪದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.

ಕರ್ನಾಟಕಕ್ಕೆ ಅನ್ಯಾಯ ಮಾಡಿರುವುದು ಮೋದಿ ಸರ್ಕಾರ : ಸಿಎಂ

ಬೆAಗಳೂರು, ಜೂ. ೧೭: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ನಡೆಯನ್ನು ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿರುವ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಬಿಜೆಪಿಯವರು ಕರ್ನಾಟಕಕ್ಕೆ ಆಗಿರುವ ಅನ್ಯಾಯದ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿ ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಕರ್ನಾಟಕ ಸರ್ಕಾರ ಶನಿವಾರದಂದು ಮಾರಾಟ ತೆರಿಗೆಯನ್ನು ಹೆಚ್ಚಿಸಲು ನಿರ್ಧರಿಸಿದ ನಂತರ ಪೆಟ್ರೋಲ್ ಬೆಲೆ ಲೀಟರ್‌ಗೆ ಮೂರು ಮತ್ತು ಡೀಸೆಲ್ ಲೀಟರ್‌ಗೆ ೩.೫ ರೂ.ಗಳಷ್ಟು ಏರಿಕೆಯಾಗಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದಿಂದ ಕೇಂದ್ರದ ಹಣ ಮತ್ತು ಜಿಎಸ್‌ಟಿ ಹಂಚಿಕೆ ಮತ್ತು ರಾಜ್ಯ ಯೋಜನೆಗಳಿಗೆ ಹಣ ಬಿಡುಗಡೆಗೆ ಸಂಬAಧಿಸಿದ ವಿಷಯಗಳಲ್ಲಿ ರಾಜ್ಯ ಅನ್ಯಾಯವನ್ನು ಎದುರಿಸುತ್ತಿದೆ ಎಂದು ಮುಖ್ಯಮಂತ್ರಿ ಆರೋಪಿಸಿದರು. ಈ ಬಗ್ಗೆ ಪ್ರತಿಭಟನೆ ನಡೆಸುವ ಧೈರ್ಯವನ್ನು ಬಿಜೆಪಿ ಮಾಡಲಿ ಎಂದು ಸವಾಲು ಹಾಕಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಒಂದು ಹಂತದಲ್ಲಿ ಕಚ್ಚಾ ತೈಲ ಬೆಲೆಯು ಬ್ಯಾರೆಲ್‌ಗೆ USಆ ೧೧೩ ರಷ್ಟಿತ್ತು. ಪ್ರಸ್ತುತ ಅದು USಆ ೮೨.೩೫ ರಷ್ಟಿದೆ ಎಂದು ಸಿದ್ದರಾಮಯ್ಯ ಹೇಳಿದರು. ೨೦೧೫ ರಲ್ಲಿ, ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ USಆ ೫೨ ಆಗಿತ್ತು, ಇದು ಮುಂದಿನ ವರ್ಷದಲ್ಲಿ ಮತ್ತಷ್ಟು ಕಡಿಮೆಯಾಗಿದೆ ಎಂದು ಅವರು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಅಧಿಕಾರಾವಧಿಯಲ್ಲಿ ಕಚ್ಚಾ ತೈಲ ಬೆಲೆ ಕಡಿಮೆಯಾಯಿತು. ಆದರೆ ಪೆಟ್ರೋಲ್ ಬೆಲೆ ಏರಿತು. ಹಾಗಾದರೆ ಬಿಜೆಪಿ ನಾಯಕರ ಹೋರಾಟ ಯಾರ ವಿರುದ್ಧ ಎಂದು ಸಿದ್ದರಾಮಯ್ಯ ಕೇಳಿದರು. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ, ರೀಫಿಲ್ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ೪೧೦ ರೂಪಾಯಿ ಇತ್ತು. ಎನ್‌ಡಿಎ ಆಡಳಿತದಲ್ಲಿ ಇದು ೧,೦೦೦ ರೂ.ಗೆ ಏರಿತು. ಈಗ ಬೆಲೆ ಇಳಿಸಿದ ನಂತರವೂ ಸಿಲೆಂಡರ್ ದರ ೮೦೫.೫೦ ರೂ ಇದೆ ಎಂದು ಸಿಎಂ ಹೇಳಿದ್ದಾರೆ. ಕಚ್ಚಾ ತೈಲ ಬೆಲೆ ಇಳಿಕೆಯ ಹೊರತಾಗಿಯೂ ರೀಫಿಲ್ ಗ್ಯಾಸ್ ಸಿಲಿಂಡರ್ ಅನ್ನು ರೂ ೪೧೦ ರಿಂದ ರೂ ೮೦೫.೫೦ ಕ್ಕೆ ಹೆಚ್ಚಿಸಿದವರು ಯಾರು? ಅವರಿಗೆ ಬಡವರ ಬಗ್ಗೆ ಕಾಳಜಿ ಇದ್ದರೆ ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸಲಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮಾಜಿ ಎಂ.ಎಲ್.ಸಿ. ಎಂ.ಬಿ ಭಾನುಪ್ರಕಾಶ್ ನಿಧನ

ಶಿವಮೊಗ್ಗ, ಜೂ. ೧೭: ಇಂಧನ ಮೇಲಿನ ವ್ಯಾಟ್ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮಾಜಿ ಎಂಎಲ್‌ಸಿ ಹಾಗೂ ಬಿಜೆಪಿಯ ಹಿರಿಯ ಮುಖಂಡ ಎಂ.ಬಿ. ಭಾನುಪ್ರಕಾಶ್ (೬೯) ಹೃದಯಾಘಾತದಿಂದ ನಿಧನರಾದರು. ಪ್ರತಿಭಟನಾ ಸ್ಥಳದಲ್ಲೇ ಕುಸಿದು ಬಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ಘೋಷಿಸಲಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮೇಲಿನ ವ್ಯಾಟ್ ಏರಿಕೆ ಖಂಡಿಸಿ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿತ್ತು. ಭಾನುಪ್ರಕಾಶ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಶಿವಪ್ಪ ನಾಯ್ಕ ವೃತ್ತದಿಂದ ಗೋಪಿ ವೃತ್ತದವರೆಗೆ ಮೆರವಣಿಗೆ ನಡೆಸಿ ನಂತರ ಗೋಪಿ ವೃತ್ತದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು. ಪ್ರತಿಭಟನೆ ಮುಗಿಸಿ ಹಿಂತಿರುಗುತ್ತಿದ್ದಾಗ ಭಾನುಪ್ರಕಾಶ್ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದರು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದು, ವೈದ್ಯರು ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ. ಬಿಜೆಪಿಯ ಹಿರಿಯ ಮುಖಂಡ ಭಾನುಪ್ರಕಾಶ್ ಅವರ ಹಠಾತ್ ನಿಧನದಿಂದ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಆಘಾತಕ್ಕೊಳಗಾಗಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ ವಿಚಾರಣೆಗೆ ಹಾಜರು!

ಬೆಂಗಳೂರು, ಜೂ. ೧೭: ಪೋಕ್ಸೋ ಪ್ರಕರಣ ಸಂಬAಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೋಮವಾರ ಸಿಐಡಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆಗೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಸಿಐಡಿ ವಿಚಾರಣೆಗೆ ಹೋಗುತ್ತಿದ್ದೇನೆ ಎಂದು ಹೇಳಿದರು. ರಾಜ್ಯದ ಜನತೆ ಈಗಾಗಲೇ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಬೆಲೆ ಏರಿಕೆಯಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡುವ ರಾಜ್ಯ ಸರ್ಕಾರದ ನಿರ್ಧಾರ ಅಪರಾಧವಾಗಿದೆ. ರಾಜ್ಯ ಸರ್ಕಾರ ಕೂಡಲೇ ತನ್ನ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು. ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸಂತ್ರಸ್ತೆಯ ತಾಯಿ ಮಾರ್ಚ್ ೩ ರಂದು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ತಮ್ಮ ಮಗಳಿಗೆ ಯಡಿಯೂರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದರು. ಈ ಬಗ್ಗೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಬಳಿಕ ರಾಜ್ಯ ಸರ್ಕಾರವು ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪಗೆ ೨ ಬಾರಿ ನೋಟೀಸ್ ನೀಡಿದ್ದರು. ಆದರೆ, ವಿಚಾರಣೆಗೆ ಅವರು ಹಾಜರಾಗಿರಲಿಲ್ಲ. ಇದರಿಂದಾಗಿ ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ವಿರುದ್ಧ ಬಂಧನ ವಾರಂಟ್ ಹೊರಡಿಸುವಂತೆ ಕೋರಿ ನಗರದ ೧ನೇ ತ್ವರಿತಗತಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅದನ್ನು ಪರಿಗಣಿಸಿರುವ ನ್ಯಾಯಪೀಠ ಬಿಎಸ್‌ವೈ ಬಂಧನಕ್ಕೆ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು.ಈ ನಡುವೆ ತಮ್ಮ ವಿರುದ್ಧ ದಾಖಲಾಗಿರುವ ದೂರು ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಬೇಕು ಎಂದು ಕೋರಿ ಯಡಿಯೂರಪ್ಪ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರನ್ನು ಬಂಧಿಸದAತೆ ನಿರ್ದೆಶನ ನೀಡಿತ್ತು. ಇದರಿಂದಾಗಿ ಮಾಜಿ ಸಿಎಂ ಬಂಧನ ಭೀತಿಯಿಂದ ನಿರಾಳರಾಗಿದ್ದರು. ಇದೀಗ ಕೋರ್ಟ್ ನಿರ್ದೇಶನದಂತೆ ಇಂದು ಅವರು ಸಿಐಡಿ ಎದುರು ಹಾಜರಾಗಿ ವಿಚಾರಣೆ ಎದುರಿಸುತ್ತಿದ್ದಾರೆ.

ಬಸ್ ಟಿಕೆಟ್ ದರ ಹೆಚ್ಚಳ ಮಾಡಲ್ಲ: ಸಿದ್ದರಾಮಯ್ಯ

ಬೆಂಗಳೂರು, ಜೂ. ೧೭: ಇಂಧನ ದರ ಏರಿಕೆ ಬೆನ್ನಲ್ಲೇ ಸರ್ಕಾರಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗುತ್ತದೆ ಎಂದ ಹೇಳಲಾಗುತ್ತಿತ್ತು. ಆದರೆ ಇದೀಗ ರಾಜ್ಯದಲ್ಲಿ ಸದ್ಯಕ್ಕೆ ಸರ್ಕಾರಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲ್ಲ. ಇಲಾಖೆಯೊಂದಿಗೆ ಚರ್ಚೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಗ್ಯಾರಂಟಿ ಯೋಜನೆಗಳಿಗೆ ಹಣ ನೀಡಲು ತೈಲ ಬೆಲೆ ಏರಿಕೆ ಮಾಡಿಲ್ಲ. ಬದಲಿಗೆ, ಆರ್ಥಿಕ ಮೂಲಗಳಾದ ಮದ್ಯ ಮತ್ತು ತೈಲದಿಂದ ಹೆಚ್ಚಿನ ಆದಾಯ ಬಂದರೆ, ಅಭಿವೃದ್ಧಿ ಮಾಡಲು ಸಾಧ್ಯವಾಗುತ್ತದೆ ಅಂತ ತೈಲ ಬೆಲೆ ಏರಿಕೆ ಮಾಡಿದ್ದೇವೆ ಎಂದು ಹೇಳಿದರು. ಪೆಟ್ರೋಲ್ ಹಾಗೂ ಡಿಸೇಲ್ ಮೇಲೆ ರೂ.೩ ಹೆಚ್ಚಳ ಮಾಡಲಾಗಿದೆ. ಆದರೆ, ಬಿಜೆಪಿ ಸರ್ಕಾರ ಆಡಳಿತ ಇರುವ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ತೈಲ ಬೆಲೆ ಕಡಿಮೆ ಇದೆ. ನಮ್ಮ ಅಕ್ಕ-ಪಕ್ಕದ ರಾಜ್ಯದಲ್ಲಿ ತೈಲ ಬೆಲೆ ಹೆಚ್ಚಿದೆ, ನಮ್ಮಲ್ಲಿ ಅಲ್ಲಿಗಿಂತ ದರ ಕಡಿಮೆ ಇದೆ. ಬಿಜೆಪಿ ಆಡಳಿತ ಇರುವ ಮಹಾರಾಷ್ಟ್ರ, ರಾಜಸ್ಥಾನ ಮತ್ತು ಗುಜರಾತ್ ರಾಜ್ಯಗಳಲ್ಲಿ ತೈಲ ಬೆಲೆ ಇಲ್ಲಿಗಿಂತ ಅಧಿಕವಾಗಿದೆ. ಆದರೂ, ಬಿಜೆಪಿ ನಾಯಕರು ಇಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ನಮ್ಮ ವಿರುದ್ಧದ ಬದಲು ಬಿಜೆಪಿಯವರು ಕೇಂದ್ರದ ವಿರುದ್ಧ ಧರಣಿ ಮಾಡಬೇಕು ಎಂದು ತಿಳಿಸಿದರು.