ಐಗೂರು, ಜೂ. ೧೭: ಗರಗಂದೂರು ಮುಖ್ಯ ರಸ್ತೆಯ ಬದಿಯಲ್ಲಿ ಮಳೆಗಾಲದಲ್ಲಿ ಶಾಲಾ ಮಕ್ಕಳು ಮತ್ತು ಸಾರ್ವಜನಿಕರಿಗೆ ಸಂಚಾರಕ್ಕೆ ತೊಡಕುಂಟಾಗುವ ಕಾರಣ ಸುಸಜ್ಜಿತವಾದ ಚರಂಡಿ ವ್ಯವಸ್ಥೆಯನ್ನು ಮಾಡಿಕೊಡಬೇಕೆಂದು ಶಾಸಕರಿಗೆ ಗ್ರಾಮಸ್ಥರು ಮನವಿ ಸಲ್ಲಿಸಿದ್ದರು.
ಗ್ರಾಮಸ್ಥರು ಮತ್ತು ಹರದೂರು ಗ್ರಾಮ ಪಂಚಾಯಿತಿಯವರು ಸಲ್ಲಿಸಿದ ಮನವಿಯ ಮೇರೆಗೆ ಶಾಸಕ ಡಾ. ಮಂತರ್ಗೌಡ ಅವರು ರೂ. ೧೦ ಲಕ್ಷದ ನೂತನ ಕಾಂಕ್ರೀಟ್ ಚರಂಡಿಗೆ ಲೋಕೋಪಯೋಗಿ ಇಲಾಖೆಯಿಂದ ಅನುದಾನ ಒದಗಿಸಿಕೊಟ್ಟಿದ್ದರು. ಈ ಕಾಮಗಾರಿ ನಡೆಯುತ್ತಿದ್ದು, ಸ್ಥಳ ಪರಿಶೀಲನೆ ಮಾಡಿ ಕಾಮಗಾರಿಯನ್ನು ಕಳಪೆಯಾಗದಂತೆ ನಿರ್ವಹಿಸಲು ಸ್ಥಳದಲ್ಲಿದ್ದ ಗುತ್ತಿಗೆದಾರರಿಗೆ ಶಾಸಕರು ಸೂಚಿಸಿದರು. ಈ ಸಂದರ್ಭ ಅಭಿಯಂತರರಾದ ವಿಜಯಕುಮಾರ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸಲೀಂ ಹೊಸತೋಟ ಹಾಗೂ ಇತರರು ಇದ್ದರು.