ನವದೆಹಲಿ, ಜೂ. ೧೭: ಲೋಕಸಭಾ ಸ್ಥಾನಕ್ಕೆ ನಡೆಯಲಿರುವ ಉಪಚುನಾವಣೆಯಲ್ಲಿ ಕೇರಳದ ವಯನಾಡಿನಿಂದ ರಾಷ್ಟಿçÃಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ವಾದ್ರ ಸ್ಪರ್ಧೆ ಮಾಡಲಿದ್ದಾರೆ.

ಈಚೆಗೆ ನಡೆದ ಚುನಾವಣೆಯಲ್ಲಿ ರಾಯ್‌ಬರೇಲಿ ಹಾಗೂ ವಯನಾಡಿನಿಂದ ಸ್ಪರ್ಧೆ ಮಾಡಿದ್ದ ರಾಹುಲ್ ಗಾಂಧಿ ಎರಡೂ ಕ್ಷೇತ್ರಗಳಲ್ಲೂ ಗೆಲುವು ಸಾಧಿಸಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ರಾಯ್‌ಬರೇಲಿ ಕ್ಷೇತ್ರವನ್ನು ಉಳಿಸಿಕೊಂಡಿರುವ ರಾಹುಲ್ ವಯನಾಡು ಕ್ಷೇತ್ರವನ್ನು ಬಿಟ್ಟು ಕೊಟ್ಟಿದ್ದಾರೆ. ಹಾಗಾಗಿ ಈ ಕ್ಷೇತ್ರದಿಂದ ರಾಹುಲ್ ಸಹೋದರಿ ಪ್ರಿಯಾಂಕ ವಾದ್ರಾ ಅವರನ್ನು ಕಣಕ್ಕಿಳಿಸಲು ಎಐಸಿಸಿ ಹೈಕಮಾಂಡ್ ನಿರ್ಧಿರಿಸಿದೆ.