ಸೋಮವಾರಪೇಟೆ, ಜೂ. ೧೮: ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಸೇರಿದಂತೆ ತಾಲೂಕಿನ ವಿವಿಧ ಕಾಲೇಜುಗಳಲ್ಲಿ ಕಳೆದ ೩೫ ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾಗುತ್ತಿರುವ ಇತಿಹಾಸ ಉಪನ್ಯಾಸಕಿ ತಿಲೋತ್ತಮೆ ಅವರನ್ನು ಪದವಿಪೂರ್ವ ಕಾಲೇಜು ಉಪನ್ಯಾಸಕ ಸಂಘ ಸೇರಿದಂತೆ ವಿವಿಧ ಸಂಘ-ಸAಸ್ಥೆಗಳ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.

ಇಲ್ಲಿನ ಒಕ್ಕಲಿಗರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತಿಲೋತ್ತಮೆ ಅವರನ್ನು ಸಾರ್ವಜನಿಕ ಸಂಘ ಸಂಸ್ಥೆಗಳು, ಶಿಕ್ಷಣ ಇಲಾಖೆ, ಹಳೆ ವಿದ್ಯಾರ್ಥಿಗಳು, ಗ್ರಾಮಸ್ಥರು ಸನ್ಮಾನಿಸಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಪ.ಪೂ. ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪುಟ್ಟರಾಜು, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ, ಜಿಲ್ಲಾ ಸಂಘದ ಅಧ್ಯಕ್ಷ ಎಸ್.ಎಂ. ಚಂಗಪ್ಪ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ. ಸೋಮಶೇಖರ್, ಸರ್ಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ವಿ.ಎ. ಲಾರೆನ್ಸ್, ಜಿಲ್ಲಾ ಪದವಿಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಅಧ್ಯಕ್ಷ ಫಿಲಿಪೋಸ್ ಮ್ಯಾಥ್ಯು, ಹಂಡ್ರAಗಿ ನಾಗರಾಜ್, ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಬೆಳ್ಳಿಯಪ್ಪ, ಪ್ರಮುಖರಾದ ನಂದಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.