ಸಿದ್ದಾಪುರ, ಜೂ. ೧೮: ನೆಲ್ಲಿಹುದಿಕೇರಿ ಗ್ರಾಮದಲ್ಲಿ ನೂತನ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಆತ್ಮೀಯವಾಗಿ ಬರಮಾಡಿ ಕೊಳ್ಳಲಾಯಿತು.

ಬಿಜೆಪಿ ಪಕ್ಷದ ಕಾರ್ಯಕರ್ತರು ಸೇರಿ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ನೂತನ ಸಂಸದ ಯದುವೀರ್ ಒಡೆಯರ್ ಅವರಿಗೆ ಹೂವಿನ ಹಾರ ಹಾಕಿ ಅಭಿನಂದನೆ ಸಲ್ಲಿಸಿ, ಗೆಲುವಿನ ಸಂಭ್ರಮವನ್ನು ಹಂಚಿಕೊAಡರು. ನೆಲ್ಲಿಹುದಿಕೇರಿಯ ಶ್ರೀ ಮುತ್ತಪ್ಪ ದೇವಾಲಯದ ಸಮೀಪದಿಂದ ಮುಖ್ಯರಸ್ತೆಯ ಮೂಲಕ ಚಂಡೆ- ವಾದ್ಯದೊಂದಿಗೆ ಮೆರವಣಿಗೆಯ ಮೂಲಕ ಸಂಸದರನ್ನು ಕರೆತರುವ ಮೂಲಕ ಅದ್ಧೂರಿಯಾಗಿ ವಿಜಯೋತ್ಸವವನ್ನು ಆಚರಿಸಲಾಯಿತು. ನೆಲ್ಲಿಹುದಿಕೇರಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಜಯಘೋಷ ಹಾಕಿ ಸಂಭ್ರಮಿಸಿದರು. ನಂತರ ನೆಲ್ಲಿಹುದಿ ಕೇರಿಯ ವಿ.ಎಸ್.ಎಸ್.ಎನ್. ಸಭಾಂಗಣದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರ ಸಭೆ ನಡೆಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ನೂತನ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಈ ಬಾರಿಯ ಲೋಕಸಭಾ ಚುನಾವಣೆಯು ಸವಾಲಾಗಿತ್ತು. ತನಗೆ ಅನುಭವದ ಕೊರತೆ ಇದ್ದರೂ ಕೂಡ ಜಿಲ್ಲೆಯ ನಾಯಕರು ಹಾಗೂ ಕಾರ್ಯಕರ್ತರು ಚುನಾವಣೆಯ ಗೆಲುವಿಗಾಗಿ ಪ್ರಾಮಾಣಿಕ ಶ್ರಮ ಹಾಕಿದ್ದಾರೆ ಎಂದರು. ಸಂಘಟನೆಯ ಶಕ್ತಿಯಿಂದ ಚುನಾವಣೆ ಗೆಲ್ಲಲು ಸಾಧ್ಯವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಕ್ಷೇತ್ರದ ಜನತೆಗೆ ನನ್ನ ಸಹಕಾರ ಸದಾ ಇರುತ್ತದೆಂದರು.

ಮಾಜಿ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಮಾತನಾಡಿ, ಈ ಬಾರಿಯ ಲೋಕಸಭಾ ಚುನಾವಣೆ ಯಲ್ಲಿ ಕೊಡಗು ಜಿಲ್ಲೆಯಿಂದ ೭೩ ಸಾವಿರಕ್ಕೂ ಅಧಿಕ ಮತ ಬಿಜೆಪಿ ಪಕ್ಷಕ್ಕೆ ಲಭಿಸಿದೆಯೆಂದರು. ಜಿಲ್ಲೆ ಪ್ರಕೃತಿ ಸೌಂದರ್ಯದ ಕೊಡಗು ಜಿಲ್ಲೆಗೆ ರೈಲು ಯೋಜನೆ ಹಾಗೂ ರಾಷ್ಟಿçÃಯ ಹೆದ್ದಾರಿ ನಿರ್ಮಾಣದ ಯೋಜನೆ ಯನ್ನು ನೂತನ ಸಂಸದರು ಜಾರಿಗೆ ತರಬೇಕೆಂದು ಮನವಿ ಮಾಡಿದರು. ವಿಧಾನಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಮಾತನಾಡಿ, ಈ ಬಾರಿಯ ಚುನಾವಣೆಯು ಸವಾಲಾಗಿದ್ದರೂ ಕೂಡ ಕಾರ್ಯಕರ್ತರು ಶ್ರಮವಹಿಸಿ ಲೋಕಸಭಾ ಅಭ್ಯರ್ಥಿ ಯದುವೀರ್ ಒಡೆಯರ್ ಅವರನ್ನು ಗೆಲ್ಲಿಸಿದ್ದಾರೆ. ಇದೀಗ ಕಾರ್ಯಕರ್ತರಿಗೆ ಹುರುಪು ಬಂದಿದೆ. ಪ್ರಧಾನಿ ಮೋದಿಯವರ ೧೦ ವರ್ಷಗಳಿಂದ ದೇಶದಲ್ಲಿ ನೂರಾರು ಸವಲತ್ತುಗಳು ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಹಾಗೂ ಪ್ರಾಮಾಣಿಕ ಆಡಳಿತವನ್ನು ಮೆಚ್ಚಿದ ದೇಶದ ಜನತೆ ಮೋದಿಯನ್ನು ಪ್ರಧಾನಿ ಮಾಡಿದ್ದಾರೆಂದರು. ಇದೀಗ ವಿಶ್ವನಾಯಕನಾಗಿ ನರೇಂದ್ರ ಮೋದಿಯವರು ಬೆಳೆದಿದ್ದಾರೆ ಎಂದು ತಿಳಿಸಿದರು. ಈ ಬಾರಿ ಜಿಲ್ಲೆಯಲ್ಲಿ ಕಾರ್ಮಿಕ ವರ್ಗ ಕೂಡ ಬಿಜೆಪಿ ಪಕ್ಷವನ್ನು ಬೆಂಬಲಿಸಿದ್ದಾರೆAದು ಅಭಿಪ್ರಾಯ ವ್ಯಕ್ತಪಡಿಸಿದರು. ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಕೆ. ಲೋಕೇಶ್ ಮಾತನಾಡಿ, ಕಾರ್ಯ ಕರ್ತರು ಹಗಲಿರುಳು ಪರಿಶ್ರಮಪಟ್ಟು ಲೋಕಸಭಾ ಅಭ್ಯರ್ಥಿ ಯದುವೀರ್ ಒಡೆಯರ್‌ರವರನ್ನು ಗೆಲ್ಲಿಸಿದಾರೆ. ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡಬೇಕೆಂದು ಪಣತೊಟ್ಟು ಈ ಬಾರಿ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮತ ಯಾಚಿಸಿದ್ದಾರೆ. ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರದಲ್ಲಿಯೂ ಬಿಜೆಪಿ ಅತ್ಯಧಿಕ ಮತಗಳಿಸುವ ಮೂಲಕ ಅಭೂತಪೂರ್ವವಾಗಿ ಜಯಗಳಿಸಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮುಂದೆಯೂ ಕಾರ್ಯಕರ್ತರು ಚುನಾವಣೆಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸು ವಂತೆ ಸಲಹೆ ನೀಡಿದರು.

ಸಭೆಯಲ್ಲಿ ಹಾಗೂ ವಿಜಯೋತ್ಸವ ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ನಾಪಂಡ ರವಿಕಾಳಪ್ಪ, ಬಿಜೆಪಿ ಪಕ್ಷದ ಪ್ರಮುಖರಾದ ಬಿ.ಬಿ. ಭಾರತೀಶ್, ಗೌತಮ್, ಅಶ್ವಿನ್ ಸತೀಶ್, ಭುವೇಂದ್ರ, ನೆಲ್ಲಿಹುದಿಕೇರಿ ಶಕ್ತಿ ಕೇಂದ್ರದ ಪ್ರಮುಖ್ ಬೆಳ್ಳಿಯಪ್ಪ, ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಪದ್ಮನಾಭ, ಹೊಸ್ಕೇರಿ ಗ್ರಾ.ಪಂ. ಮಾಜಿ ಅಧ್ಯಕ್ಷ ಬಿ.ವೈ. ಪ್ರಭುಶೇಖರ್, ಚೇಂದAಡ ಜತ್ತಾ, ಜೆ.ಡಿ.ಎಸ್. ಪಕ್ಷದ ಎಸ್.ಸಿ, ಎಸ್.ಟಿ. ಘಟಕದ ಜಿಲ್ಲಾಧ್ಯಕ್ಷೆ ಜಯಮ್ಮ, ಹಿಂದುಳಿದ ವರ್ಗದ ಜಿಲ್ಲಾಧ್ಯಕ್ಷ ಶಿವದಾಸ್ ಹಾಗೂ ನೂರಾರು ಮಂದಿ ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.