ಸೋಮವಾರಪೇಟೆ, ಜೂ. ೧೮: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಸಮೀಪದ ಬಳಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಬೇಳೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೆಚ್.ಆರ್. ಮೋಹನ್ ಉದ್ಘಾಟಿಸಿ ಮಾತನಾಡಿ, ಗ್ರಾಮ ಪಂಚಾಯಿತಿಯಿAದ ಕಸ ಸಂಗ್ರಹಣೆ ಮಾಡಲಾಗುತ್ತಿದ್ದು, ಒಣ ಕಸ ಹಾಗೂ ಹಸಿ ಕಸ ವಿಂಗಡಿಸಿ ನೀಡಬೇಕು. ಪ್ಲಾಸ್ಟಿಕ್ ಹಾಗೂ ರಾಸಾಯನಿಕ ವಸ್ತುಗಳನ್ನು ಬಳಸಬಾರದು. ಮಕ್ಕಳು ಪರಿಸರ ರಕ್ಷಣೆ ಬಗ್ಗೆ ಕಾಳಜಿ ವಹಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ಶಶಿಕುಮಾರ್, ಶಾಲೆಯ ಮುಖ್ಯೋಪಾಧ್ಯಾಯಿನಿ ಭಾಗ್ಯ, ಎಸ್.ಡಿ.ಎಂ.ಸಿ. ಅಧ್ಯಕ್ಷ ರಶೀದ್, ಆಶಾ ಕಾರ್ಯಕರ್ತೆ ಶಾರದ ಬಿ.ಆರ್., ಶಾಂತಳ್ಳಿ ವಲಯದ ಮೇಲ್ವಿಚಾರಕ ಲಕ್ಷ್ಮಣ್, ಕೃಷಿ ಮೇಲ್ವಿಚಾರಕ ರಾಜಣ್ಣ, ಸೇವಾ ಪ್ರತಿನಿಧಿ ಸುನೀತಾ, ಶಾಲಾ ಸಹ ಶಿಕ್ಷಕರು, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು, ವಿದ್ಯಾರ್ಥಿಗಳು ಭಾಗಿಯಾಗಿದ್ದರು.