ಮಡಿಕೇರಿ, ಜೂ. ೧೮ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆ, ಭಾರತೀಯ ತೈಲ ನಿಗಮ, ಭಾರತೀಯ ವಿಜ್ಞಾನ ಸಂಸ್ಥೆ, ಬೆಂಗಳೂರು, ಪ್ರಾಜೆಕ್ಟ್ ಚಂದನ, ರಾಜ್ಯ ರಕ್ತಕೋಶ, ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಸಹಯೋಗದೊಂದಿಗೆ ವಿಶ್ವ ಕುಡಗೋಲು ಕಣರೋಗ ದಿನಾಚರಣೆ ಉದ್ಘಾಟನಾ ಕಾರ್ಯಕ್ರಮವು ತಾ. ೧೯ ರಂದು (ಇಂದು) ಬೆಳಿಗ್ಗೆ ೧೦.೩೦ ಗಂಟೆಗೆ ವೀರಾಜಪೇಟೆ ಬಾಳುಗೋಡು ಏಕಲವ್ಯ ಮಾದರಿ ಶಾಲೆಯಲ್ಲಿ ನಡೆಯಲಿದೆ.