ಪೊನ್ನಂಪೇಟೆ, ಜೂ. ೧೮: ಗೋಣಿಕೊಪ್ಪಲು ಕಾವೇರಿ ಪಾಲಿಟೆಕ್ನಿಕ್ ಕಾಲೇಜಿನ ಕಚೇರಿ ಅಧೀಕ್ಷಕಿಯಾಗಿ ೩೬ ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ಪ್ರೇಮಾ ಅವರಿಗೆ ಆಡಳಿತ ಮಂಡಳಿ ವತಿಯಿಂದ ಬೀಳ್ಕೊಡುಗೆ ನೀಡಲಾಯಿತು.

ಈ ಸಂದರ್ಭ ಕಾವೇರಿ ಎಜುಕೇಷನ್ ಸೊಸೈಟಿ ಆಡಳಿತ ಮಂಡಳಿ ಪರವಾಗಿ ಕಾರ್ಯದರ್ಶಿ ಕುಲ್ಲಚಂಡ ಪಿ. ಬೋಪಣ್ಣ ಸನ್ಮಾನಿಸಿ ನೆನಪಿನ ಕಾಣಿಕೆ ನೀಡಿದರು.

ಈ ಸಂದರ್ಭ ಕಾವೇರಿ ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲ ಕೆ. ಶ್ರೀನಿವಾಸ್, ಕಾವೇರಿ ಪದವಿ ಕಾಲೇಜು ಪ್ರಾಂಶುಪಾಲ ಡಾ. ಎಂ.ಬಿ. ಕಾವೇರಿಯಪ್ಪ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಹಾಜರಿದ್ದು ಶುಭಕೋರಿದರು.