ಮಡಿಕೇರಿ, ಜೂ. ೧೮: ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯವೇತನ ನೀಡುವ ಕಾರ್ಯಕ್ರಮ ಅನುಷ್ಠಾನಗೊಳಿಸುವ ಸಂಬAಧ ೨೦೨೪-೨೫ನೇ ಸಾಲಿನಲ್ಲಿ ವೃತ್ತಿ ತರಬೇತಿಗೆ ಪರಿಶಿಷ್ಟ ವರ್ಗದ ಅರ್ಹ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಪರಿಶಿಷ್ಟ ಪಂಗಡ ಜಾತಿಗೆ ಸೇರಿದ್ದು, ಕೊಡಗು ಜಿಲ್ಲೆಯವರಾಗಿರಬೇಕು. ಅಭ್ಯರ್ಥಿಗಳು ೪೦ ವರ್ಷ ವಯೋಮಿತಿಯೊಳಗಿರಬೇಕು. ಪೋಷಕರ ವಾರ್ಷಿಕ ಆದಾಯ ರೂ. ೨.೫೦ ಲಕ್ಷ ಮೀರಿರಬಾರದು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಮೊದಲು ಯಾವುದೇ ಪದವಿ ನಂತರ ೩ ವರ್ಷಗಳ ಅಥವಾ ಪಿಯುಸಿ ನಂತರ ೫ ವರ್ಷಗಳ ಕೋರ್ಸುಗಳ ಕಾನೂನು ಪದವಿ ಪಡೆದಿರಬೇಕು. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ೧೫ ವರ್ಷಕ್ಕೆ ಕಡಿಮೆಯಿಲ್ಲದಂತೆ ಸೇವೆ ಸಲ್ಲಿಸಿರುವ ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್/ ಸರ್ಕಾರಿ ವಕೀಲರು/ ವೃತ್ತಿಪರ ವಕೀಲರ ಬಳಿ ತರಬೇತಿಗೆ ನಿಯೋಜಿಸಲಾಗುವುದು. ತರಬೇತಿ ಅವಧಿಯು ೨ ವರ್ಷಗಳಾಗಿದ್ದು, ಮಾಸಿಕ ರೂ. ೧೦ ಸಾವಿರಗಳಿಗೆ ಶಿಷ್ಯವೇತನ ನೀಡಲಾಗುವುದು.

ಅರ್ಜಿಯನ್ನು ಆನ್‌ಲೈನ್ ಮೂಲಕ ತಿತಿತಿ.ಣತಿ.ಞಚಿಡಿ.ಟಿiಛಿ.iಟಿ ನಲ್ಲಿ ತಾ. ೧೮ ರಿಂದ ಜುಲೈ ೩೧ ರವರೆಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ, ಮಡಿಕೇರಿ ೦೮೨೭೨-೨೦೦೫೦೦. ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ. ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ, ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಪೊನ್ನಂಪೇಟೆ, ವೀರಾಜಪೇಟೆ ಅವರನ್ನು ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಎಸ್. ಹೊನ್ನೇಗೌಡ ತಿಳಿಸಿದ್ದಾರೆ.