ಮಡಿಕೇರಿ, ಜೂ. ೧೮: ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೊದಲ ಎರಡೂವರೆ ವರ್ಷದ ಅವಧಿ ಪೂರ್ಣಗೊಂಡಿದ್ದು, ಎರಡನೇ ಅವಧಿಗೆ ಇನ್ನೂ ಕೂಡ ಮೀಸಲಾತಿ ನಿಗದಿಯಾಗದ ಹಿನ್ನೆಲೆಯಲ್ಲಿ ಸದ್ಯಕ್ಕೆ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರನ್ನು ಮಡಿಕೇರಿ ನಗರಸಭೆಯ ಆಡಳಿತಾಧಿಕಾರಿಯಾಗಿ ನೇಮಿಸಿ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಟಿ. ಮಂಜುನಾಥ್ ಆದೇಶಿಸಿದ್ದಾರೆ. ಏ. ೨೯ ಕ್ಕೆ ಮಡಿಕೇರಿ ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್ ಇವರುಗಳ ಅಧಿಕಾರವಧಿ ಪೂರ್ಣಗೊಂಡಿತ್ತು.