ಮಡಿಕೇರಿ, ಜೂ. ೧೮ : ಬೆಳೆವಿಮೆ ಸಂಬAಧ ಹೆಚ್ಚಿನ ಸಂಖ್ಯೆಯಲ್ಲಿ ಕೃಷಿಕರು ಹೆಸರು ನೋಂದಾಯಿಸಲು ಅಗತ್ಯ ಕ್ರಮವಹಿಸುವಂತೆ ಕಂದಾಯ ಹಾಗೂ ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಡಾ.ಎನ್.ವಿ. ಪ್ರಸಾದ್ ಸೂಚಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೆಳೆ ವಿಮೆ ಸೌಲಭ್ಯ ಬಳಸಿಕೊಳ್ಳುವಲ್ಲಿ ರೈತರಿಗೆ ಮತ್ತಷ್ಟು ಮಾಹಿತಿ ನೀಡುವಂತಾಗಬೇಕು. ಆ ನಿಟ್ಟಿನಲ್ಲಿ ಹೆಚ್ಚಿನ ಶ್ರಮ ವಹಿಸಬೇಕು. ಜಿಲ್ಲೆಯಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರವನ್ನು ಸಾಕಷ್ಟು ದಾಸ್ತಾನು ಮಾಡಿಕೊಳ್ಳಬೇಕು ಎಂದರು.

ಈ ಸಂದರ್ಭ ಮಾತನಾಡಿದ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸೋಮಸುಂದರ ೨೦೨೪ರ ಮುಂಗಾರು ಹಂಗಾಮಿಗೆ ೨೦೨೪ ರ ಮೇ ೨೦ ರ ಅಧಿಸೂಚನೆಯಂತೆ ಜಿಲ್ಲೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ಹೋಬಳಿ ಮಟ್ಟ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅನುಷ್ಠಾನಗೊಳಿಸಲು ಮಂಜೂರಾತಿ ನೀಡಲಾಗಿದೆ. ಭತ್ತ ಮತ್ತು ಮುಸುಕಿನ ಜೋಳದ ಬೆಳೆಗಳನ್ನು ಬೆಳೆವಿಮೆ ಯೋಜನೆಯಡಿ ಅಧಿಸೂಚಿತಗೊಂಡಿದೆ.

ಕೊಡಗು ಜಿಲ್ಲೆಗೆ ಓರಿಯಂಟಲ್ ಸಾಮಾನ್ಯ ವಿಮಾ ಕಂಪನಿಯನ್ನು ೨೦೨೪-೨೫ ಮತ್ತು ೨೦೨೫-೨೬ ನೇ ಸಾಲಿಗೆ ಅನುಷ್ಠಾನ ಸಂಸ್ಥೆಯನ್ನಾಗಿ ಆಯ್ಕೆ ಮಾಡಲಾಗಿದೆ. ಭತ್ತದ (ನೀರಾವರಿ ಮತ್ತು ಮಳೆಯಾಶ್ರಿತ) ಬೆಳೆಗೆ ಆಗಸ್ಟ್ ೧೬ ಮತ್ತು ಮುಸುಕಿನ ಜೋಳದ ಬೆಳೆಗೆ ಜುಲೈ ೩೧ ರವರೆಗೆ ವಿಮೆ ಯೋಜನೆಯಡಿ ರೈತರು ಹೆಸರು ನೋಂದಾಯಿಸಿಕೊಳ್ಳಲು ಅವಕಾಶ ವಿದೆ ಎಂದು ಮಾಹಿತಿ ನೀಡಿದರು.

ಕೊಡಗು ಜಿಲ್ಲೆಯಲ್ಲಿ ಈ ಬಾರಿ ಜನವರಿಯಿಂದ ಇದುವರೆಗೆ ೪೫೪ ಮಿ.ಮೀ. ಮಳೆಯಾಗಿದ್ದು, ಶೇ.೫ರಷ್ಟು ಹೆಚ್ಚಾಗಿದೆ. ಆದರೆ ಜೂನ್ ತಿಂಗಳಲ್ಲಿ ವಾಡಿಕೆ ಮಳೆ ೧೯೦ ಮಿ.ಮಿ. ಆಗಿದ್ದರೆ, ೧೪೬ ಮಿ.ಮೀ. ಮಾತ್ರ ಮಳೆಯಾಗಿದೆ. ಶೇ.೨೨ ರಷ್ಟು ಮಳೆ ಕೊರತೆ ಕಂಡುಬAದಿದೆ.

ಮುAದಿನ ದಿನಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು, ಜಿಲ್ಲೆಯಲ್ಲಿ ಮುಸುಕಿನ ಜೋಳ ಬಿತ್ತನೆ ಕಾರ್ಯ ನಡೆದಿದೆ. ಜಿಲ್ಲೆಯಲ್ಲಿ ಈಗ ಉತ್ತಮ ಮಳೆಯಾದಲ್ಲಿ ಸಸಿ ಮಡಿ ಕಾರ್ಯ ಆರಂಭವಾಗಲಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿನ ಕೆರೆಗಳನ್ನು ಅಭಿವೃದ್ಧಿಪಡಿಸಿ ಮೀನುಗಾರಿಕೆಗೆ ಉತ್ತೇಜನ ನೀಡಬೇಕು. ಆ ನಿಟ್ಟಿನಲ್ಲಿ ಸ್ಥಳೀಯ ಆಡಳಿತಗಳು ಹಾಗೂ ಮೀನುಗಾರಿಕೆ ಇಲಾಖೆ ಅಗತ್ಯ ಕ್ರಮವಹಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಮೀನುಗಾರಿಕೆಗೆ ಬೇಡಿಕೆಯಿದ್ದು, ಕೆರೆಗಳನ್ನು ಇನ್ನಷ್ಟು ಅಭಿವೃದ್ಧಿಪಡಿಸಿ ಮೀನುಗಾರಿಕೆಗೆ ಹೆಚ್ಚಿನ ಉತ್ತೇಜನ ನೀಡಬೇಕು. ಈ ಸಂಬAಧ ತಾ.ಪಂ.ಇಒಗಳು ಮತ್ತು ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಕಾರ್ಯನಿರ್ವಹಿಸುವಂತೆ ಹೇಳಿದರು.

ಕೊಡಗು ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳ ಸ್ಥಿತಿಗತಿ ಬಗ್ಗೆ ದೂರುಗಳು ಕೇಳಿಬರುತ್ತಿವೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಎಷ್ಟು ಶಾಲೆಗಳು ಸೋರುತ್ತಿವೆ ಎಂಬ ಬಗ್ಗೆ ಕೂಡಲೇ ಪಟ್ಟಿ ಮಾಡಿ ವರದಿ ನೀಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಿಗೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಪಡಿತರ ಪಡೆಯು ತ್ತಿರುವ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಕಳೆದ ಆರು ತಿಂಗಳಿನಿAದ ಸತತವಾಗಿ ಬಿಪಿಎಲ್‌ನಡಿ ಆಹಾರ-ಪಡಿತರ ಪಡೆಯದಿರುವವರ ಮಾಹಿತಿಯನ್ನು ಆಹಾರ ಇಲಾಖೆಯ ಆಯುಕ್ತಾಲಯಕ್ಕೆ ಕಳುಹಿಸುವಂತೆ ಸಲಹೆ ಮಾಡಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಈ ಸಂಬAಧ ಸಮೀಕ್ಷೆ ನಡೆಸಿ ವರದಿ ನೀಡಲಾಗುವುದು ಎಂದು ಹೇಳಿದರು.

ಜೇನುಕೃಷಿಗೆ ಸಂಬAಧಿಸಿದAತೆ ಮಾಹಿತಿ ಪಡೆದ ಕಾರ್ಯದರ್ಶಿಗಳು ಕೊಡಗು ಜೇನಿಗೆ ನಂಜನಗೂಡು ರಸಬಾಳೆ ಮಾದರಿಯಲ್ಲಿ ಪ್ರಾಶಸ್ತö್ಯ ದೊರೆಯುವಂತಾಗಲು ಅಗತ್ಯ ಯೋಜನೆ ರೂಪಿಸುವಂತೆ ಸೂಚಿಸಿದರು.

ಜಿ.ಪಂ. ಸಿಇಒ ವರ್ಣಿತ್ ನೇಗಿ ಮಾತನಾಡಿ, ಮಹಾತ್ಮ ಗಾಂಧಿ ಗ್ರಾಮೀಣ ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಗುರಿ ತಲುಪಲಾಗಿದೆ. ಸ್ವಚ್ಛ ಭಾರತ ಮಿಷನ್ ಅಭಿಯಾನ ಹಾಗೂ ವಸತಿ ಯೋಜನಾ ಕಾರ್ಯಕ್ರಮಗಳ ಅನುಷ್ಠಾನ ಸಂಬAಧ ಮಾಹಿತಿ ನೀಡಿದರು.

ಆರೋಗ್ಯ ಇಲಾಖೆಗೆ ಸಂಬAಧಿಸಿದAತೆ ಜಿಲ್ಲೆಯ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ತಜ್ಞ ವೈದ್ಯರ ಕೊರತೆ ಇದ್ದು, ಆ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಜೊತೆಗೆ ಚರ್ಚಿಸಲಾಗಿದ್ದು, ಸೋಮವಾರಪೇಟೆ ಮತ್ತು ವೀರಾಜಪೇಟೆಗೆ ಹತ್ತಿರದ ಜಿಲ್ಲೆಯಿಂದ ಮೂವರು ತಜ್ಞ ವೈದ್ಯರನ್ನು ನಿಯೋಜಿಸಲಾಗಿದೆ ಎಂದು ಡಾ. ಸತೀಶ್ ಕುಮಾರ್ ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಇಲಾಖೆಗೆ ಸಂಬAಧಿಸಿ ದಂತೆ ಅಂಗನವಾಡಿಗಳಿಗೆ ಕೂಡಲೇ ತಹಶೀಲ್ದಾರರು ಜಾಗ ಒದಗಿಸಬೇಕು. ಆ ನಿಟ್ಟಿನಲ್ಲಿ ಗಮನಹರಿಸುವಂತೆ ಡಾ.ಎನ್.ವಿ. ಪ್ರಸಾದ್ ನಿರ್ದೇಶನ ನೀಡಿದರು. ಅರಣ್ಯದಲ್ಲಿರುವ ಜಾಗ ಹೊರತುಪಡಿಸಿ ಉಳಿದಂತೆ ಜಾಗ ನೀಡಲು ಆದ್ಯತೆ ಮೇಲೆ ಕ್ರಮವಹಿಸು ವಂತೆ ತಹಶೀಲ್ದಾರರಿಗೆ ನಿರ್ದೇಶನ ನೀಡಿದರು.

ಈ ಬಗ್ಗೆ ಮಾಹಿತಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜು ಜಿಲ್ಲೆಯಲ್ಲಿ ೮೮೩ ಅಂಗನವಾಡಿ ಕೇಂದ್ರಗಳಿದ್ದು, ಇದರಲ್ಲಿ ೭೫೦ ಕ್ಕೂ ಹೆಚ್ಚು ಅಂಗನವಾಡಿಗಳು ಸರ್ಕಾರಿ ಕಟ್ಟಡದಲ್ಲಿ, ೪೮ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ೧೫ ಕ್ಕೂ ಹೆಚ್ಚು ಅಂಗನವಾಡಿಗಳ ಕಟ್ಟಡಗಳು ಪ್ರಗತಿಯಲ್ಲಿದೆ. ಉಳಿದಂತೆ ೨೨ ಅಂಗನವಾಡಿಗಳಿಗೆ ನಿವೇಶನ ಬೇಕಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, ಸಭೆಯಲ್ಲಿ ನೀಡಲಾಗಿರುವ ನಿರ್ದೇಶನವನ್ನು ಚಾಚೂ ತಪ್ಪದೇ ಅಧಿಕಾರಿಗಳು ಪಾಲಿಸಬೇಕು. ಮುಂದಿನ ಸಭೆಯಲ್ಲಿ ಕೆಲಸಗಳು ಆಗಿರಬೇಕು ಎಂದು ಸೂಚಿಸಿದರು.

ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಕಾರ್ಯಕ್ರಮಗಳಿಗೆ ಸಂಬAಧಿಸಿದAತೆ ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ನಿವೇಶನ ಬೇಕಿದ್ದಲ್ಲಿ ಜಿಲ್ಲಾಡಳಿತಕ್ಕೆ ಮನವಿ ಮಾಡುವಂತೆ ನಿರ್ದೇಶನ ನೀಡಿದರು.

ಸರ್ಕಾರದ ಹಂತದಲ್ಲಿ ಆಗಬೇಕಿರುವ ಕೆಲಸಗಳ ಬಗ್ಗೆ ಗಮನಹರಿಸಬೇಕು. ಪಂಚಾಯತ್ ರಾಜ್ ಎಂಜಿನಿಯರಿAಗ್ ವಿಭಾಗದಲ್ಲಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿ, ಕುಡಿಯುವ ನೀರು ಪೂರೈಕೆ, ಮತ್ತಿತರ ಬಗ್ಗೆ ಮಾಹಿತಿ ಪಡೆದರು.

ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಜಿ.ಪಂ. ಉಪ ಕಾರ್ಯದರ್ಶಿ ಧನರಾಜ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್, ಐಟಿಡಿಪಿ ಇಲಾಖೆ ಅಧಿಕಾರಿ ಹೊನ್ನೇಗೌಡ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ದಿವಾಕರ, ಸೆಸ್ಕ್ ಇಇ ಅನಿತಾ ಬಾಯಿ, ಜಿ.ಪಂ. ಎಂಜಿನಿಯರ್‌ಗಳಾದ ಸುರೇಶ್ ಕುಮರ್, ಮುತ್ತುರಾಜ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಯೋಗಿಶ್, ತಹಶೀಲ್ದಾರರಾದ ಪ್ರವೀಣ್ ಕುಮಾರ್, ಕಿರಣ್ ಗೌರಯ್ಯ, ರಾಮಚಂದ್ರ, ನವೀನ್ ಕುಮಾರ್, ಮೋಹನ್ ಕುಮಾರ್, ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಲಿಂಗರಾಜ ದೊಡ್ಡಮನಿ, ಜಿಲ್ಲಾ ಆಯೂಷ್ ಅಧಿಕಾರಿ ಡಾ. ರೇಣುಕಾದೇವಿ ಅವರು ತಮ್ಮ ಇಲಾಖೆಗೆ ಸಂಬAಧಿಸಿದAತೆ ಮಾಹಿತಿ ನೀಡಿದರು.