ಸೋಮವಾರಪೇಟೆ,ಜೂ.೧೮: ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣಕ್ಕೆ ಸಂಬAಧಿಸಿದAತೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪಟ್ಟಣದಲ್ಲಿ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ವಿವಿಧ ವೀರಶೈವ ಲಿಂಗಾಯತ ಸಂಘಟನೆಗಳ ಕಾರ್ಯಕರ್ತರು, ಸ್ವಾಮೀಜಿಗಳ ಸಮ್ಮುಖದಲ್ಲಿ ಪಟ್ಟಣದ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಹಾಗೂ ಮೃತ ರೇಣುಕಾಸ್ವಾಮಿ ಕುಟುಂಬಕ್ಕೆ ಪರಿಹಾರ ಒದಗಿಸುವಂತೆ ಆಗ್ರಹಿಸಿದರು.
ಈ ಸಂದರ್ಭ ಕಲ್ಲುಮಠದ ಮಹಾಂತ ಸ್ವಾಮೀಜಿ ಮಾತನಾಡಿ, ಇಂದು ಸಮಾಜದಲ್ಲಿ ಹಿಂಸೆ, ಕ್ರೌರ್ಯ ಹೆಚ್ಚುತ್ತಿದೆ. ರೇಣುಕಾಸ್ವಾಮಿಯನ್ನು ಹಿಂಸೆ ಕೊಟ್ಟು ಕೊಲೆ ಮಾಡಿದ್ದಾರೆ ಅವರ ಕುಟುಂಬ ಅನಾಥವಾಗಿದೆ. ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.
ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟಿçÃಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಮಾತನಾಡಿ, ಆರೋಪಿ ಸ್ಥಾನದಲ್ಲಿರುವ ಚಿತ್ರನಟ ದರ್ಶನ್ ಮಾಡಿರುವ ಕಾರ್ಯ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಸಮಾಜವನ್ನು ತಿದ್ದುವ ಜವಾಬ್ದಾರಿ ಇರುವ ವ್ಯಕ್ತಿಗಳೇ ಇಂತಹ ಕೃತ್ಯ ನಡೆಸಿರುವುದು ಅಕ್ಷಮ್ಯ ಎಂದರು.
ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸುವ ಮನವಿ ಪತ್ರವನ್ನು ಶಿರಸ್ತೇದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಮುದ್ದಿನಕಟ್ಟೆ ಮಠದ ಶ್ರೀ ಅಭಿನವ ಸಿದ್ದಲಿಂಗ ಸ್ವಾಮೀಜಿ, ಕಲ್ಲಳ್ಳಿ ಮಠದ ಶ್ರೀ ರುದ್ರಮುನಿ ಸ್ವಾಮೀಜಿ, ಶಿಡಿಗಳಲೆ ಮಠದ ಶ್ರೀಇಮ್ಮಡಿ ಶಿವಲಿಂಗ ಸ್ವಾಮೀಜಿ, ಜಿಲ್ಲಾ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಅಧ್ಯಕ್ಷ ದಿವಾಕರ, ಮಹಿಳಾ ಘಟಕದ ಕಾರ್ಯದರ್ಶಿ ಗೀತರಾಜು, ತಾಲೂಕು ಘಟಕದ ಕಾರ್ಯದರ್ಶಿ ಪ್ರಕಾಶ್, ಜಿಲ್ಲಾ ವೀರಶೈವ ಲಿಂಗಾಯತ ಅರ್ಚಕರ ಸಂಘದ ಗೌರವಾಧ್ಯಕ್ಷ ಮೋಹನ ಮೂರ್ತಿ, ಕಾರ್ಯದರ್ಶಿ ಬಸವಕುಮಾರ ಶಾಸ್ತಿç, ಸೋಮವಾರಪೇಟೆ ವೀರಶೈವ ಸಮಾಜದ ಶೆಟ್ರು ಮೃತ್ಯುಂಜಯ, ಕಾರ್ಯದರ್ಶಿ ನಾಗರಾಜ್, ನಿರ್ದೇಶಕರಾದ ಗಿರೀಶ್, ಮಂಜುನಾಥ್, ಯೋಗೇಶ್, ಅಕ್ಕನ ಬಳಗದ ಉಪಾಧ್ಯಕ್ಷೆ ಗೀತಾ, ಪದಾಧಿಕಾರಿಗಳಾದ ರಜಿನಿ, ಅನುಪಮ, ಆಶಾ ಹೂವಯ್ಯ, ಪವಿತ್ರ ಸೇರಿದಂತೆ ಇತರರು ಹಾಜರಿದ್ದರು.