ನಾಪೋಕ್ಲು, ಜೂ. ೧೯: ಮಹಿಳೆಯರು ಸಂಘ-ಸAಸ್ಥೆಗಳ ಪ್ರತಿನಿಧಿಗಳಾಗಿ ಪಾಲ್ಗೊಂಡು ಸಮಾಜದಲ್ಲಿ ಬೆರೆತು ಅಭಿವೃದ್ಧಿ ಹೊಂದಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ, ನಿವೃತ್ತ ಪ್ರಾಧ್ಯಾಪಕಿ ಬೊಪ್ಪಂಡ ಬೊಳ್ಳಮ್ಮ ನಾಣಯ್ಯ ಹೇಳಿದರು. ಕೂರುಳಿ ಸುಭಾಷ್ ನಗರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೂರುಳಿ ಸುಭಾಷ್ ನಗರ ಕಾರ್ಯಕ್ಷೇತ್ರದ ಪರಮೇಶ್ವರಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕ ಮಹಾ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಂಘ-ಸAಸ್ಥೆಗಳನ್ನು ಕಟ್ಟಿ ಬೆಳೆಸುವುದು ಒಂದು ಕಲೆ ಎಂದ ಅವರು, ಮಕ್ಕಳಿಗೆ ಶಿಕ್ಷಣ ಕೊಡುವಲ್ಲಿ ಪೋಷಕರ ಪಾತ್ರ ಬಗ್ಗೆ ಮಾತನಾಡಿ, ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಸಂಘದ ಮೇಲ್ವಿಚಾರಕ ಸುನೀಲ್ ಸಂಘದ ಧ್ಯೇಯೋದ್ದೇಶಗಳ ಬಗ್ಗೆ ಮಾತನಾಡಿದರು. ಪರಮೇಶ್ವರಿ ಜ್ಞಾನ ವಿಕಾಸ ಕೇಂದ್ರದ ಅಧ್ಯಕ್ಷೆ ದೈನಬ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಸೇವಾ ಪ್ರತಿನಿಧಿ ಉಮಾಲಕ್ಷಿö್ಮ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು. ಸಂಘದ ಸದಸ್ಯ ಪೊನ್ನಮ್ಮ ಟಿ.ಆರ್. ಸ್ವಾಗತಿಸಿ, ಸಾವಿತ್ರಿ ನಿರೂಪಿಸಿ, ವಂದಿಸಿದರು.