ಐಗೂರು, ಜೂ. ೧೯: ಹರದೂರು ಗ್ರಾಮ ಪಂಚಾಯಿತಿಗೆ ಸೇರಿದ ಗರಗಂದೂರು -ಬಿ , ವ್ಯಾಪ್ತಿಯ ಹೊಸ ತೋಟದ ಸರಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮದ ಎಲ್. ಕೆ. ಜಿ ತರಗತಿಗಳು ಪ್ರಾರಂಭವಾಗುತ್ತಿರುವುದರಿAದ ಈ ಭಾಗದ ಬಡವರ್ಗದ ಮಕ್ಕಳಿಗೂ ಮತ್ತು ಪೋಷಕರಿಗೂ ಅನುಕೂಲವಾಗಲಿದೆ ಎಂದು ಶಾಲೆಯ ಎಸ್. ಡಿ.ಎಂ.ಸಿ ಅಧ್ಯಕ್ಷ ಚಿದಾನಂದ ಅವರು ಅಭಿಪ್ರಾಯಪಟ್ಟರು.
ಹೊಸತೋಟ ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿಯ ಉದ್ಘಾಟನಾ ಸಂದರ್ಭ ಅವರು ಮಾತನಾಡಿದರು. ಹರದೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸಲೀಂ ಹೊಸತೋಟ ಮಾತನಾಡಿ, ದಿನದಿಂದ ದಿನಕ್ಕೆ ತಾಲೂಕಿನ ಒಂದೊAದೇ ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದ ಎಲ್ಕೆಜಿ ತರಗತಿಗಳು ಉದ್ಘಾಟನೆ ಗೊಳ್ಳುತ್ತಿದ್ದು, ಮುಂದಿನ ವರ್ಷಗಳಲ್ಲಿ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ಆಂಗ್ಲ ಮಾಧ್ಯಮದ ಎಲ್ಕೆಜಿ ತರಗತಿಗಳು ಪ್ರಾರಂಭವಾಗುವ ಲಕ್ಷಣಗಳು ಕಂಡು ಬರುತ್ತಿದೆ ಎಂದರು. ಶಾಲಾ ಮುಖ್ಯ ಶಿಕ್ಷಕಿ ಪವಿತ್ರ ಮಾತನಾಡಿ, ಹೊಸತೋಟ ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಊರಿನ ದಾನಿಗಳು ಸಹಕರಿಸುತ್ತಿದ್ದು, ಶಿಕ್ಷಕ ವೃಂದದವರು ಸಂಪೂರ್ಣವಾಗಿ ಸಹಕರಿಸುವುದಾಗಿ ತಿಳಿಸಿದರು.
ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ನಿವೃತ್ತ ಅಂಚೆ ಇಲಾಖೆಯ ನೌಕರರಾದ ಉಲ್ಲಾಸ್, ಎಸ್ಡಿಎಂಸಿ ಅಧ್ಯಕ್ಷ ಚಿದಾನಂದ, ಮುಖ್ಯ ಶಿಕ್ಷಕಿ ಪವಿತ್ರ, ಶಿಕ್ಷಕಿಯರಾದ ಸವಿತ, ಕೆಂಚವ್ವ, ಅಂಜಲಿಕ, ಮತ್ತು ನಂದಿತ ಹಾಜರಿದ್ದರು.