ಪೆರಾಜೆ, ಜೂ. ೯: ಸುಳ್ಯ ತಾಲೂಕಿನ ಕಾಂತಮAಗಲದಲ್ಲಿ ಜಿಲ್ಲೆಯ ವ್ಯಕ್ತಿಯೋರ್ವರನ್ನು ತಲೆಗೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಘಟನೆಯ ತನಿಖೆ ಕೈಗೊಂಡಿರುವ ಪೊಲೀಸರು ಆರೋಪಿಯನ್ನು ಸುಳ್ಯದಲ್ಲಿ ಬಂಧಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪ್ರಕರಣಕ್ಕೆ ಸಂಬAಧಪಟ್ಟು ಎಡಮಂಗಲದ ಉದಯ ಎಂಬಾತನನ್ನು ಬಂಧಿಸಲಾಗಿದ್ದು, ಆತನನ್ನು ಸುಳ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಿದಾಗ, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ವೀರಾಜಪೇಟೆ ತಾಲೂಕಿನ ಹೆಗ್ಗಳ ಗ್ರಾಮದ ವಸಂತ (೪೫) ಎಂಬ ವ್ಯಕ್ತಿಯನ್ನು ತಲೆಗೆ ಕಲ್ಲು ಹೊತ್ತು ಹಾಕಿ ಕೊಲೆಗೈದ ಹಿನ್ನೆಲೆಯಲ್ಲಿ ಕಾಂತಮAಗಲ ಶಾಲಾ ಜಗುಲಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ ಪೊಲೀಸರು ೨೪ ಗಂಟೆಯಲ್ಲಿ ಆರೋಪಿಯನ್ನು ಸುಳ್ಯದಲ್ಲೇ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.