ಮೈಸೂರು, ಜೂ. ೧೯: ಅಂರ್ರಾಷ್ಟಿçÃಯ ಯೋಗ ದಿನಾಚರಣೆ ಪ್ರಯುಕ್ತ ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರ ‘ಯೋಗ ಸಂಗೀತ, ಮೈಸೂರು ಪರಂಪರೆ’, ಕೃತಿ ಬಿಡುಗಡೆ, ಯೋಗ ದರ್ಶಿನಿ ಪ್ರದರ್ಶನ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ತಾ. ೨೧ ರಂದು ಜರುಗಲಿದೆ.
ಮೈಸೂರಿನ ಓದುಗ ಪ್ರಕಾಶನ, ಮೈಸೂರು ಕಲ್ಚರಲ್ ಅಸೋಸಿಯೇಷನ್ ಹಾಗೂ ಭಾರತೀ ಯೋಗಧಾಮದ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ವಿಜಯಗಿರಿ, ಉತ್ತನಹಳ್ಳಿಯ ಭಾರತೀ ಯೋಗಧಾಮದಲ್ಲಿ ಅಂದು ಬೆಳಿಗ್ಗೆ ೧೦.೩೦ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ. ಕಾರ್ಯಕ್ರಮವನ್ನು ಭಾರತೀಯ ಯೋಗಧಾಮದ ಸಂಸ್ಥಾಪಕ ಡಾ. ಕೆ.ಎಲ್. ಶಂಕರನಾರಾಯಣ ಜೋಯ್ಸ್ ಅವರು ಉದ್ಘಾಟಿಸಲಿದ್ದಾರೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಹಾಗೂ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ‘ಯೋಗ ಸಂಗೀತ, ಮೈಸೂರು ಪರಂಪರೆ’ ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಲಕ್ಷ ವೃಕ್ಷ ಆಂದೋಲನದ ರೂವಾರಿ ಹಾಗೂ ಮುಡಾ ಮಾಜಿ ಅಧ್ಯಕ್ಷ ಹೆಚ್.ವಿ. ರಾಜೀವ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಮೈಸೂರು ಕಲ್ಚರಲ್ ಅಸೋಸಿಯೇಷನ್ ಅಧ್ಯಕ್ಷ ಎ.ಪಿ. ನಾಗೇಶ್, ಲೇಖಕ ಐತಿಚಂಡ ರಮೇಶ್ ಉತ್ತಪ್ಪ, ಓದುಗ ಪ್ರಕಾಶನದ ಪ್ರಕಾಶ್ ಚಿಕ್ಕಪಾಳ್ಯ ಉಪಸ್ಥಿತರಿರುತ್ತಾರೆ.