ಬೆಂಗಳೂರು, ಜೂ. ೧೯: ವಾಹನಗಳಲ್ಲಿ ಹೆಚ್ಚು ಬೆಳಕು ಸೂಸುವ ಎಲ್‌ಇಡಿ ಬಲ್ಬ್ಗಳನ್ನು ಅಳವಡಿಸ ದಂತೆ ನಿಷೇಧ ಹೇರಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಕುಮಾರ್ ಅವರು, ಇತ್ತೀಚಿನ ದಿನಗಳಲ್ಲಿ ಹಲವಾರು ವಾಹನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್‌ಇಡಿ ದೀಪಗಳನ್ನು ಅಳವಡಿಸುತ್ತಿದ್ದು, ಇದರಿಂದ ಎದುರು ಮುಖದಲ್ಲಿ ಸಂಚರಿಸುವ ಇತರ ವಾಹನ ಸವಾರರಿಗೆ ತೀವ್ರ ತೊಂದರೆಯುAಟಾಗುತ್ತಿದೆ. ಇದರಿಂದ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸುತ್ತಿರುವುದು ಕಂಡು ಬಂದಿರುತ್ತದೆ. ಈ ಪೈಕಿ ಪ್ರಮುಖವಾಗಿ ಭಾರಿ ಗಾತ್ರದ ವಾಹನಗಳಾದ ಲಾರಿ, ಟ್ರಕ್, ಬಸ್ ಮುಂತಾದವುಗಳು ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ (ಜಚಿzzಟiಟಿg ಚಿಟಿಜ gಟಚಿಡಿiಟಿg) ಎಲ್‌ಇಡಿ ದೀಪಗಳನ್ನು ವಾಹನಗಳಲ್ಲಿ ಅಳವಡಿಸುತ್ತಿರುವುದರಿಂದ

ಇತರ ವಾಹನ ಚಾಲಕರುಗಳಿಗೆ ವಾಹನ ಚಲಾಯಿಸಲು ತೊಂದರೆ ಯಾಗುತ್ತ್ತಿದೆ.

(ಮೊದಲ ಪುಟದಿಂದ) ಎಲ್ಲಾ ವಾಹನ ಸವಾರರು ತಮ್ಮ ವಾಹನಗಳಿಗೆ ಕೇಂದ್ರ ಮೋಟಾರು ವಾಹನ ಕಾಯ್ದೆಯಲ್ಲಿ ನಮೂದಿಸಿರುವ ಮಾನದಂಡದAತೆ ಅಳವಡಿಸಬೇಕಾಗಿರುವ ಹೆಡ್‌ಲೈಟ್‌ಗಳನ್ನೇ ಅಳವಡಿಸಬೇಕಾಗಿರುವುದು ಕಡ್ಡಾಯವಾಗಿರುತ್ತದೆ. ಒಂದು ವೇಳೆ ಸಿಎಂವಿ ಕಾಯ್ದೆಯಲ್ಲಿನ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಲ್ಲಿ ಅಂತಹ ವಾಹನ ಸವಾರರ ವಿರುದ್ಧ ಐಎಂವಿ ಕಾಯ್ದೆಯ ಕಲಂ ೧೭೭ ರಡಿ ಪ್ರಕರಣಗಳನ್ನು ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ.

ವಾಹನಗಳಲ್ಲಿ ಈ ರೀತಿಯ ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ಅಳವಡಿಸಿರುವುದು ಕಂಡು ಬಂದಲ್ಲಿ, ಅಂತಹ ವಾಹನ ಸವಾರರ ವಿರುದ್ಧ ಐಎಂವಿ ಕಾಯ್ದೆಯ ಕಲಂ ೧೭೭ ರಡಿ ಪ್ರಕರಣಗಳನ್ನು ದಾಖಲು ಮಾಡಲು ಸೂಕ್ತ ಕ್ರಮ ತೆಗೆದುಕೊಳ್ಳಲು ಆಯಾ ಪೊಲೀಸ್ ಘಟಕಗಳಿಗೆ ಸೂಚಿಸಿದ್ದಾರೆ. ಈ ರೀತಿ ವಾಹನಗಳಲ್ಲಿ ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ಅಳವಡಿಸಿರುವ ವಾಹನ ಚಾಲಕರ ವಿರುದ್ಧ ಜುಲೈ ಮಾಹೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ, ಪ್ರಕರಣಗಳನ್ನು ದಾಖಲಿಸಿ, ಕೈಗೊಂಡ ಕ್ರಮದ ಬಗ್ಗೆ, ಪಾಲನಾ ವರದಿಯನ್ನು ತಾ.೩೧ರೊಳಗಾಗಿ ಈ ಕಛೇರಿಗೆ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.