ಬೆಂಗಳೂರು, ಜೂ. ೧೯: ಕರ್ನಾಟಕದಲ್ಲಿ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ (ಹೆಚ್‌ಎಸ್‌ಆರ್‌ಪಿ) ಅಳವಡಿಕೆಗೆ ಈಗಾಗಲೇ ಎರಡು - ಮೂರು ಬಾರಿ ಅವಧಿ ವಿಸ್ತರಣೆ ಮಾಡಿದ್ದು, ಜೂನ್ ೧೨ ಅಂತಿಮ ದಿನವಾಗಿತ್ತು. ಆದರೆ, ಕರ್ನಾಟಕ ಹೈಕೋರ್ಟ್ ಹೆಚ್‌ಎಸ್‌ಆರ್‌ಪಿ ಅಳವಡಿಸದವರ ವಿರುದ್ಧ ಜುಲೈ ೪ರ ವರೆಗೆ ಯಾವುದೇ ಕ್ರಮಗಳನ್ನು ಕೈಗೊಳ್ಳದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಅಲ್ಲದೆ, ಹೆಚ್‌ಎಸ್‌ಆರ್‌ಪಿ ಅಳವಡಿಕೆಯ ಗಡುವನ್ನು ವಿಸ್ತರಿಸಲು ಒಪ್ಪಿಗೆ ನೀಡಿತ್ತು. ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಸೆಪ್ಟೆಂಬರ್ ೧೫ರ ವರೆಗೆ ಕಾಲಾವಕಾಶ ನೀಡಿದೆ.

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸೆಪ್ಟೆಂಬರ್ ೧೫ ವರೆಗೆ

ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್

ಅಳವಡಿಸಿಕೊಳ್ಳಲು ಕಾಲಾವಕಾಶ

(ಮೊದಲ ಪುಟದಿಂದ) ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಅವಕಾಶ ನೀಡಲಾಗಿದೆ. ಸೆಪ್ಟೆಂಬರ್ ೧೫ ಒಳಗೆÀ ಅವಧಿ ವಿಸ್ತರಣೆ ಇಲ್ಲ.

ಈಗಾಗಲೇ ಹಲವು ಬಾರಿ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಆಳವಡಿಕೆ ಗಡುವು ವಿಸ್ತರಣೆ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಶೀಘ್ರದಲ್ಲೇ ಹೆಚ್‌ಎಸ್‌ಆರ್‌ಪಿ ಗಡುವು ವಿಸ್ತರಣೆ ಆದೇಶ ಹೊರಡಿಸಲಾಗುತ್ತದೆ ಮತ್ತೆ ಗಡುವು ವಿಸ್ತರಣೆ ಮಾಡಲ್ಲ. ಸೆಪ್ಟೆಂಬರ್ ೧೫ರೊಳಗೆ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಆಳವಡಿಸಿಕೊಳ್ಳಿ ಎಂದು ವಾಹನ ಸವಾರರಿಗೆ ಸಚಿವ ರಾಮಲಿಂಗಾರೆಡ್ಡಿ ಮನವಿ ಮಾಡಿದರು.

೨೦೧೯ರ ಏಪ್ರಿಲ್ ೧ನೇ ತಾರೀಖಿಗೆ ಮೊದಲು ನೋಂದಾಯಿಸಲಾದ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟೆçÃಶನ್ ಪ್ಲೇಟ್‌ಗಳ (ಹೆಚ್‌ಎಸ್‌ಆರ್‌ಪಿ) ಅಳವಡಿಸಲು ಜೂನ್ ೧೨ ಕೊನೆ ದಿನವಾಗಿತ್ತು. ಆದರೆ, ಹೆಚ್‌ಎಸ್‌ಆರ್‌ಪಿ ಅಳವಡಿಸದ ವಾಹನ ಮಾಲೀಕರ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳದಂತೆ ಈ ಮೊದಲು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಜುಲೈ ೪ರ ತನಕ ವಿಸ್ತರಣೆ ಮಾಡಿದೆ. ಇದೀಗ ಖುದ್ದು ರಾಜ್ಯ ಸರ್ಕಾರ, ಸೆಪ್ಟೆಂಬರ್ ೧೫ರ ವರೆಗೆ ವಿಸ್ತರಣೆ ಮಾಡಲು ಮುಂದಾಗಿದೆ. ಈ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದು, ಶೀಘ್ರದಲ್ಲೇ ಸರ್ಕಾರದಿಂದ ಅಧಿಕೃತ ಸುತ್ತೋಲೆ ಹೊರಬೀಳಲಿದೆ.