ಮಡಿಕೇರಿ, ಜೂ. ೨೦: ವೀರಾಜಪೇಟೆ ಉಪವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದುಕೊರತೆ ನಿವಾರಿಸುವ ಸಭೆಯು ತಾ.೨೧ ರಂದು (ಇಂದು) ಬೆಳಿಗ್ಗೆ ೧೧.೩೦ ರಿಂದ ೧೨.೩೦ ಗಂಟೆವರೆಗೆ ವೀರಾಜಪೇಟೆ ಉಪವಿಭಾಗ ಕಚೇರಿ ಆವರಣದಲ್ಲಿ ಮಡಿಕೇರಿ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಗೋಣಿಕೊಪ್ಪಲು ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆ ನಿವಾರಿಸಲು ತಾ.೨೧ ರಂದು (ಇಂದು) ಮಧ್ಯಾಹ್ನ ೨.೩೦ ರಿಂದ ೩.೩೦ ಗಂಟೆಯವರೆಗೆ ಗೋಣಿಕೊಪ್ಪಲು ಉಪವಿಭಾಗ ಕಚೇರಿ ಆವರಣದಲ್ಲಿ ಮಡಿಕೇರಿ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.

ವೀರಾಜಪೇಟೆ ಮತ್ತು ಗೋಣಿಕೊಪ್ಪಲು ವ್ಯಾಪ್ತಿಯ ಸಾರ್ವಜನಿಕರು/ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬAಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮಡಿಕೇರಿ ವಿಭಾಗದ ಸೆಸ್ಕ್ ಇಇ ಅನಿತಾಬಾಯಿ ತಿಳಿಸಿದ್ದಾರೆ.