ಸಿದ್ದಾಪುರ, ಜೂ. ೨೦ : ಕಳ್ಳಭಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ಮುತ್ತೂರು ಗ್ರಾಮದಲ್ಲಿ ವಾಸವಿರುವ ಗುಡ್ಲೂರು ನಿವಾಸಿ ಪಿ.ಜಿ. ಸತೀಶ್ ಎಂಬಾತನನ್ನು ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ.
ಮಾಲ್ದಾರೆ ಗ್ರಾ.ಪಂ. ವ್ಯಾಪ್ತಿಯ ಕಲ್ಲಳ ಗೇಟ್ ಹಾಡಿಯಲ್ಲಿ ಅಕ್ರಮವಾಗಿ ಕಳ್ಳಭಟ್ಟಿ ಸಾರಾಯಿ ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಪಿರಿಯಾಪಟ್ಟಣ ತಾಲೂಕಿನ ಮುತ್ತೂರಿನಲ್ಲಿ ವಾಸವಿರುವ ಚೆನ್ನಂಗಿ, ಗೂಡ್ಲೂರು ಗ್ರಾಮದ ನಿವಾಸಿ ಪಿ.ಜಿ. ಸತೀಶ್ ಎಂಬಾತನನ್ನು ಬಂಧಿಸಿದ್ದಾರೆ. ಮಾರಾಟಕ್ಕೆ ಬಳಸಿದ್ದ ವಾಹನ ಸಹಿತ ಸಾಮಗ್ರಿಗಳನ್ನು ವಶಪಡಿಸಿ ಕೊಂಡಿದ್ದಾರೆ.
ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ರಾಘವೇಂದ್ರ ನೇತೃತ್ವದಲ್ಲಿ ಸಹಾಯಕ ಠಾಣಾಧಿಕಾರಿ ಶ್ರೀನಿವಾಸ್, ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.